Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆತನು ಅಡವಿಯ ಪೊದೆಗಳನ್ನು ಕಬ್ಬಿಣದ ಕೊಡಲಿಯಿಂದ ಕಡಿದುಬಿಡುವನು. ಲೆಬನೋನಿನ ವನವು ಬಲಿಷ್ಠನಾದವನ ಮುಂದೆ ಬಿದ್ದುಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಕಾಡಿನ ಪೊದೆಗಳನ್ನು ಕೊಡಲಿಯಿಂದ ಕಡಿದುಬಿಡುವರು. ಲೆಬನೋನಿನ ಭವ್ಯ ಮರಗಳು ಬಿದ್ದುಹೋಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಎತ್ತರ ಮರಗಳು ನೆಲದ ಪಾಲಾಗುವವು; ಆತನು ಅಡವಿಯ ಪೊದೆಗಳನ್ನು ಕಬ್ಬಿಣದ ಮುಟ್ಟಿನಿಂದ ಕಡಿದುಬಿಡುವನು; ಲೆಬನೋನಿನ ವನವು ಆ ಬಲಿಷ್ಠನಿಂದ ಬಿದ್ದುಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಯೆಹೋವನು ತನ್ನ ಕೊಡಲಿಯಿಂದ ಅಡವಿಯನ್ನು ಕಡಿದುಹಾಕುವನು. ಲೆಬನೋನಿನ ಉನ್ನತ ಮರಗಳು (ಪ್ರಮುಖರು) ಉರುಳಿಬೀಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅವರು ಅಡವಿಯ ಪೊದೆಗಳನ್ನು ಕೊಡಲಿಯಿಂದ ಕಡಿದುಬಿಡುವರು. ಲೆಬನೋನು ಪರಾಕ್ರಮಿಯಾಗಿರುವವರ ಮುಂದೆ ಬಿದ್ದುಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:34
19 ತಿಳಿವುಗಳ ಹೋಲಿಕೆ  

ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ‘ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು ವೃಕ್ಷಗಳನ್ನೂ, ಶ್ರೇಷ್ಠವಾದ ತುರಾಯಿ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.


ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ತೆಗೆದುಕೊಂಡು ಸಮುದ್ರದೊಳಗೆ ಬಿಸಾಡಿ, “ಮಹಾಪಟ್ಟಣವಾದ ಬಾಬೆಲನ್ನು ಹೀಗೆ ಹಿಂಸಾಚಾರದಿಂದ ಬಿಸಾಡುವನು. ಅದು ಇನ್ನೆಂದಿಗೂ ಕಾಣಿಸುವುದಿಲ್ಲ.


ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಮೇಲೆ ಕಾಮನಬಿಲ್ಲು ಇತ್ತು. ಅವನ ಮುಖವು ಸೂರ್ಯನೊಪಾದಿಯಲ್ಲಿತ್ತು. ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು.


ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಅವರಿಗೆ ವಿರೋಧವಾಗಿ ದೂಷಣೆಯನ್ನು, ನಿಂದೆಯನ್ನು ಹೇಳದಿರಲು, ಆ ಗರ್ವಿಷ್ಠರು ಮಹಿಮಾಪದವಿಗಳನ್ನು ದೂಷಿಸಲು ಹಿಂಜರಿಯುವುದಿಲ್ಲ.


ಯೇಸು ಕರ್ತನು ತನ್ನ ಶಕ್ತಿಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.


ಯೆಹೋವನು ಇಂತೆನ್ನುತ್ತಾನೆ, “ನಿನ್ನ ಶತ್ರುಗಳು ಎಷ್ಟು ಪ್ರಬಲವಾಗಿದ್ದರೂ, ಅವರ ಸಂಖ್ಯೆ ಎಷ್ಟು ಹೆಚ್ಚಿದ್ದರೂ ಅವರು ಕಡಿಯಲ್ಪಡುವರು. ಆ ದುರಾಲೋಚಕನು ಇಲ್ಲವಾಗುವನು. ನಿನ್ನನ್ನು ಬಾಧಿಸಿದ್ದೇನೆ, ಆದರೆ ಇನ್ನು ಬಾಧಿಸೆನು.


“ಕಾವಲುಗಾರನಾದ ದೇವದೂತನು ಆಕಾಶದಿಂದಿಳಿದು, ‘ವೃಕ್ಷವನ್ನು ಕಡಿದು ಹಾಳುಮಾಡಿರಿ; ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ, ತಾಮ್ರಗಳ ಪಟ್ಟೆಯನ್ನು ಅದಕ್ಕೆ ಬಿಗಿಯಿರಿ, ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಅದಕ್ಕೆ ಏಳು ವರ್ಷ ಕಳೆಯುವ ತನಕ ಕಾಡು ಮೃಗಗಳ ಸಹವಾಸದ ಗತಿಯು ಬರಲಿ’ ಎಂದು ಸಾರುವುದನ್ನು ರಾಜನಾದ ನೀನು ನೋಡಿದಿಯಲ್ಲಾ.


ಮೋವಾಬಿನ ಕೀರ್ತಿಯು ಮಾಯವಾಯಿತು; ಶತ್ರುಗಳು ಹೆಷ್ಬೋನಿನಲ್ಲಿ ದೇಶಕ್ಕೆ ಕೇಡನ್ನು ಕಲ್ಪಿಸಿ, ‘ಮೋವಾಬ್ ಇನ್ನು ಜನಾಂಗವೆನಿಸಿಕೊಳ್ಳದಂತೆ ಅದನ್ನು ನಿರ್ಮೂಲಮಾಡೋಣ ಬನ್ನಿರಿ’ ಎಂದು ಆಲೋಚಿಸಿಕೊಂಡಿದ್ದಾರೆ. ಮದ್ಮೆನೇ, ನೀನು ಸಹ ಸುಮ್ಮನಾಗುವಿ; ಖಡ್ಗವು ನಿನ್ನನ್ನು ಹಿಂದಟ್ಟುವುದು.


ಆಯುಧ ಸನ್ನದ್ಧರಾದ ಸಂಹಾರಕರನ್ನು ನಿನ್ನ ವಿರುದ್ಧವಾಗಿ ಸಿದ್ಧಪಡಿಸುವೆನು; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.


ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.


ಆಗ ಅಶ್ಶೂರ್ಯರು ಕತ್ತಿಯಿಂದ ಬೀಳುವರು. ಅದು ಮನುಷ್ಯರ ಕತ್ತಿಯಲ್ಲ, ಖಡ್ಗವು ಅವರನ್ನು ನುಂಗುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಯಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಬಿಟ್ಟಿಯಾಗಿ ಹಿಡಿಯಲ್ಪಡುವರು.


ಅದು ದೇಹಾತ್ಮಗಳನ್ನು ಉಳಿಸದೇ ಅಲ್ಲಿನ ವನದ ಮತ್ತು ತೋಟದ ವೈಭವವನ್ನು ನಿರ್ಮೂಲ ಮಾಡುವುದು. ದೇಶವೋ ರೋಗಿಯಂತೆ ನಾಶವಾಗುವುದು.


ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೆ ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ.


ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಅಲ್ಲೋನ ಮರಗಳ ಮೇಲೆಯೂ,


ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ, ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ.


ಆಹಾ, ಅಸ್ಸೀರಿಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವದಾರು ಆಗಿದೆ; ಅದರ ನೆರಳು ದಟ್ಟವಾಗಿದೆ, ಅದರ ಎತ್ತರವು ಬಹಳ, ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು