Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ಧರ್ಮಭ್ರಷ್ಟ ಪ್ರಜೆಗೆ ಇದಿರಾಗಿ ಅಸ್ಸೀರಿಯವನ್ನು ಕಳುಹಿಸುತ್ತೇನೆ. ನನ್ನ ಕೋಪಕ್ಕೆ ಗುರಿಯಾದ ಜನರಿಗೆ ವಿರುದ್ಧ ಕಾರ್ಯವನ್ನು ಕೈಗೊಳ್ಳಲು ಆಜ್ಞೆ ಮಾಡುತ್ತೇನೆ. ನನ್ನ ಪ್ರಜೆಯನ್ನು ಸೂರೆಮಾಡಲು, ಕೊಳ್ಳೆಹೊಡೆಯಲು, ಬೀದಿಯ ಕಸದಂತೆ ತುಳಿದುಬಿಡಲು ಅದಕ್ಕೆ ಆಜ್ಞೆಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ಅದನ್ನು ಭ್ರಷ್ಟ ಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ [ನನ್ನ] ಪ್ರಜೆಯನ್ನು ಸೂರೆಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅದಕ್ಕೆ ಅಪ್ಪಣೆಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯುದ್ಧಮಾಡಲು ನಾನು ಅಶ್ಶೂರವನ್ನು ಕಳುಹಿಸುವೆನು. ನಾನು ಅವರ ಮೇಲೆ ಕೋಪಗೊಂಡಿರುವೆನು. ಅಶ್ಶೂರಕ್ಕೆ ಅವರ ಮೇಲೆ ಯುದ್ಧ ಮಾಡುವಂತೆ ಆಜ್ಞಾಪಿಸುವೆನು. ಅಶ್ಶೂರವು ಅವರನ್ನು ಸೋಲಿಸಿ ಅವರ ಐಶ್ವರ್ಯವನ್ನೆಲ್ಲಾ ಸೂರೆಮಾಡುವದು. ಇಸ್ರೇಲು ಅಶ್ಶೂರದವರಿಗೆ ಬೀದಿಯ ಧೂಳಿನಂತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ಅವನನ್ನು ಭಕ್ತಿಹೀನ ಜನರಿಗೆ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅಪ್ಪಣೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:6
38 ತಿಳಿವುಗಳ ಹೋಲಿಕೆ  

ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.


ಇವರು ವೀರರಾಗಿ ರಣರಂಗದೊಳಗೆ ಶತ್ರುಗಳನ್ನು ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ನಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು.


ಯೆಹೋವನು, “ಇಗೋ, ನಾನು ಅಪ್ಪಣೆಕೊಟ್ಟು ಆ ಶತ್ರುಗಳು ಈ ಪಟ್ಟಣಕ್ಕೆ ಹಿಂದಿರುಗುವಂತೆ ಮಾಡುವೆನು; ಅವರು ಅದಕ್ಕೆ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿ ಬೆಂಕಿಯಿಂದ ಸುಟ್ಟುಬಿಡುವರು; ನಾನು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ನುಡಿಯುತ್ತಾನೆ.


ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.


ಐಗುಪ್ತವು ಬೆಚ್ಚಿಬೀಳುವುದಕ್ಕೆ ಯೆಹೂದ ದೇಶವೇ ಕಾರಣವಾಗುವುದು. ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೇನಾಧೀಶ್ವರನಾದ ಯೆಹೋವನು ಐಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಸಂಕಲ್ಪವನ್ನು ತಿಳಿದು ಬೆರಗಾಗುವನು.


ಕಪಟಿಗಳೇ, ನಿಮ್ಮ ಕುರಿತು ಯೆಶಾಯನು ಸರಿಯಾಗಿ ಪ್ರವಾದಿಸಿ, ಅವನು ಹೇಳಿರುವುದೇನೆಂದರೆ,


“ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ನನ್ನನ್ನು ಹೀಯಾಳಿಸಿದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವುದು. ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಿನಂತೆ ತುಳಿತಕ್ಕೀಡಾಗುವರು.


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?


ಇಸ್ರಾಯೇಲಿಗೆ ಇಷ್ಟು ದಂಡನೆಯಾದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ನನ್ನ ಕಡೆ ತಿರುಗಿಕೊಂಡಿದ್ದಾಳೆ” ಎಂಬುದೇ ಯೆಹೋವನಾದ ನನ್ನ ನುಡಿ.


ನನ್ನ ಕೋಪದಿಂದ ಜನಾಂಗಗಳನ್ನು ತುಳಿದು ರೋಷವೇರಿದವನಾಗಿ, ಅವುಗಳನ್ನು ಚೂರುಚೂರು ಮಾಡಿ ನೆಲದ ಮೇಲೆ ಅವುಗಳ ಸಾರವನ್ನು ಸುರಿಸಿದೆನು.


ನಾನೊಬ್ಬನೇ ದ್ರಾಕ್ಷಿಯನ್ನು ತೊಟ್ಟಿಯಲ್ಲಿ ತುಳಿದಿದ್ದೇನೆ, ಜನಾಂಗದವರಲ್ಲಿ ಯಾರೂ ನನ್ನೊಂದಿಗಿರಲಿಲ್ಲ. ನನ್ನ ಕೋಪದಿಂದ ಶತ್ರುಗಳನ್ನು ತುಳಿದೆನು, ರೋಷವೇರಿದವನಾಗಿ ಅವರನ್ನು ತುಳಿದುಹಾಕಿದೆನು; ಅವರ ಜೀವಸತ್ವ ನನ್ನ ವಸ್ತ್ರಗಳ ಮೇಲೆ ಸಿಡಿದಿದೆ, ನನ್ನ ಉಡುಪನ್ನೆಲ್ಲಾ ಮಲಿನ ಮಾಡಿಕೊಂಡೆನು.


ನಾನು ಉತ್ತರ ದಿಕ್ಕಿನಿಂದ ಒಬ್ಬನನ್ನು ಎಬ್ಬಿಸಿ ಕರೆದು ತಂದಿದ್ದೇನೆ, ನನ್ನ ನಾಮವನ್ನು ಪ್ರಚುರಪಡಿಸತಕ್ಕವನು ಮೂಡಲಿನಿಂದ ಬಂದಿದ್ದಾನೆ. ಅವನು ಉಪರಾಜರನ್ನು ಮಣ್ಣೇ ಎಂದು ಭಾವಿಸಿ ಅವರ ಮೇಲೆ ಬಿದ್ದು ಕುಂಬಾರನು ಜೇಡಿಮಣ್ಣನ್ನು ತುಳಿಯುವ ಹಾಗೆ ತುಳಿಯುವನು.


“ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ, ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗುವರು” ಎಂದುಕೊಳ್ಳುತ್ತಾರೆ.


ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನಿಂದ ದಿವ್ಯದರ್ಶನದ ಕಣಿವೆಗೆ ಗಲಿಬಿಲಿಯ ದಿನ, ತುಳಿದಾಟದ ದಿನ, ಭ್ರಾಂತಿಯ ದಿನ, ಕೋಟೆಯು ಒಡೆದು ಹೋಗಲು, ಕೂಗು ಬೆಟ್ಟವನ್ನು ಮುಟ್ಟುವ ದಿನ ಬಂದಿದೆ.


ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟು ಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.


ಅವರು ಸಿಂಹದಂತೆ ಘರ್ಜಿಸುತ್ತಾರೆ. ಪ್ರಾಯದ ಸಿಂಹಗಳ ಹಾಗೆ ಆರ್ಭಟಿಸುತ್ತಾರೆ. ಗುರುಗುಟ್ಟುತ್ತಾ ಬೇಟೆ ಹಿಡಿದು ಹೊತ್ತುಕೊಂಡು ಹೋಗುತ್ತಾರೆ. ರಕ್ಷಿಸುವವರು ಯಾರೂ ಇಲ್ಲ.


ಭೂಮಿಯ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿ ಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ತುಳಿದು ಎಸೆದುಬಿಟ್ಟೆನು.


ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು.


ಹೀಗಿರಲು ಯೆಹೋವನು ತನ್ನ ಜನರ ಮೇಲೆ ಕೋಪಗೊಂಡು, ಅವರ ಮೇಲೆ ಕೈಯೆತ್ತಿ, ಅವರನ್ನು ಹೊಡೆದುಬಿಡುವನು. ಆಗ ಬೆಟ್ಟಗಳು ನಡಗುವವು. ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೇ ಕೈಯೆತ್ತಿಯೇ ಇರುವುದು.


ಯೆಹೋವನು ನಿನ್ನ ಮೇಲೆಯೂ, ನಿನ್ನ ಪ್ರಜೆಯ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದಂದಿನಿಂದ ಅಂದರೆ ಅಶ್ಶೂರದ ಅರಸನ ಕಾಲದಿಂದಲೂ ಬಾರದೆ ಇದ್ದ ದುರ್ದಿನಗಳನ್ನು ಬರಮಾಡುವನು.”


ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು. ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶವನ್ನೆಲ್ಲಾ ಆವರಿಸಿಕೊಳ್ಳುವುದು.”


ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.


ಏಕೆಂದರೆ ನೀಚನು ನೀಚವಾಗಿ ಮಾತನಾಡುವನು. ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ, ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು.


ಸೂರೆಯಾಗದಿದ್ದರೂ ಸೂರೆಮಾಡಿದಿ! ಬಾಧೆಪಡದಿದ್ದರೂ ಬಾಧಿಸಿದಿ! ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ. ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.


ನಿನ್ನ ಮಕ್ಕಳು ತ್ವರೆಪಟ್ಟು ಬರುತ್ತಿದ್ದಾರೆ. ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟು ಹೋಗುತ್ತಾರೆ.


ಯೆಹೋವನು ಹೀಗೆನ್ನುತ್ತಾನೆ, “ಶೂರನ ಸೆರೆಯವರೂ ಅಪಹರಿಸಲ್ಪಡುವರು. ಭಯಂಕರನ ಕೊಳ್ಳೆಯೂ ತೆಗೆಯಲ್ಪಡುವುದು. ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು.


ಅವನು ಸೈನ್ಯ ಸಮೇತನಾಗಿ ನನಗೋಸ್ಕರ ಸೇವೆ ಮಾಡಿದ್ದರಿಂದ ಅವನು ಪಟ್ಟ ಶ್ರಮಕ್ಕೆ ಪ್ರತಿಫಲವಾಗಿ ನಾನು ಐಗುಪ್ತ ದೇಶವನ್ನು ಅವನಿಗೆ ಕೊಟ್ಟಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.


ಸುಲಿಗೆಯನ್ನು, ಕೊಳ್ಳೆಯನ್ನು ಹೊಡೆಯಬೇಕೆಂತಲೂ, ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳ ಮೇಲೆ ಕೈಮಾಡಬೇಕೆಂತಲೂ ಜನಾಂಗಗಳೊಳಗಿಂದ ಕೂಡಿಸಲ್ಪಟ್ಟ ಧನ ಕನಕ ಮೊದಲಾದ ಸೊತ್ತನ್ನು ಸಂಗ್ರಹಿಸಿಕೊಂಡು, ಭೂಮಿಯ ಮಧ್ಯದಲ್ಲಿ ವಾಸಿಸುವವರನ್ನು ಹತಿಸಬೇಕೆಂತಲೂ ಕುತಂತ್ರವನ್ನು ಕಲ್ಪಿಸುವಿ.


ಶೆಬದವರೂ, ದೆದಾನಿನವರೂ, ತಾರ್ಷೀಷಿನ ವರ್ತಕರೂ, ಅದರ ಸಿಂಹಪ್ರಾಯರೆಲ್ಲರೂ ನಿನ್ನನ್ನು ನೋಡಿ, ‘ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು, ಧನ ಕನಕ ಮುಂತಾದ ಸೊತ್ತನ್ನು ಅಪಹರಿಸಿ, ಅಪಾರವಾದ ಆಸ್ತಿಯನ್ನು ಸುಲಿದುಕೊಂಡು ಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದೆಯಾ?’” ಎಂದು ಕೇಳುವರು.


ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾಮಿಯೇ, ನೀನು ಅನಾದಿಯಿಂದಿದ್ದೀಯಲ್ಲಾ, ನಾವು ಖಂಡಿತ ಸಾಯುವುದಿಲ್ಲ. ಯೆಹೋವನೇ ನಮ್ಮ ನ್ಯಾಯತೀರ್ಪಿಗಾಗಿ ಅವರನ್ನು ನೇಮಿಸಿರುವೆ; ಶರಣನೇ, ನಮ್ಮನ್ನು ಶಿಕ್ಷಿಸುವುದಕ್ಕಾಗಿ ಅವರನ್ನು ನಮ್ಮ ಮುಂದೆ ನಿಲ್ಲಿಸಿರುವೆ.


ಈ ದೇಶವನ್ನು ಹಾಳುಮಾಡುವುದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? ‘ಈ ದೇಶಕ್ಕೆ ಬಂದು, ಇದನ್ನು ಹಾಳುಮಾಡಿಬಿಡು ಎಂದು ಯೆಹೋವನೇ ನನಗೆ ಆಜ್ಞಾಪಿಸಿದ್ದಾನೆ’” ಎಂದನು.


ಆ ಮಗುವು, ‘ಅಪ್ಪಾ, ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮೊದಲೇ ಅಶ್ಶೂರದ ಅರಸನು ದಮಸ್ಕದ ಆಸ್ತಿಯನ್ನೂ, ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು