Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕರ್ಕೆಮೀಷಿನ ಗತಿಯು ಕಲ್ನೋವಿಗೆ ಆಯಿತಲ್ಲವೇ? ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಲ್ಲವೇ? ದಮಸ್ಕದ ಗತಿಯು ಸಮಾರ್ಯಕ್ಕೂ ಸಂಭವಿಸಿತಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕರ್ಕೆಮೀಷಿನ ಗತಿ ಕಲ್ನೋವಿಗೂ ಬಂತಲ್ಲವೇ? ಅರ್ಪದಿಗೆ ಬಂದ ಪಾಡು ಹಮಾತಿಗೂ ಬಂದಿತಷ್ಟೆ. ದಮಸ್ಕಸ್ಸಿನ ಅವಸ್ಥೆಯು ಸಮಾರ್ಯಕ್ಕೂ ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕರ್ಕೆಮೀಷಿನ ಗತಿಯು ಕಲ್ನೋವಿಗೂ ಆಯಿತಲ್ಲವೆ, ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಷ್ಟೆ; ದಮಸ್ಕದ ಅವಸ್ಥೆಯು ಸಮಾರ್ಯಕ್ಕೂ ಸಂಭವಿಸಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕಲ್ನೋ ನಗರವು ಕರ್ಕೆಮೀಷ್ ಹಾಗೆ ಇರುವದು. ಹಮಾತ್ ನಗರವು ಅರ್ಪದ್ ನಗರದಂತಿರುವದು. ಸಮಾರ್ಯಪಟ್ಟಣವು ದಮಸ್ಕದಂತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಕಲ್ನೋ, ಕರ್ಕೆಮೀಷಿನ ಹಾಗಲ್ಲವೋ? ಹಮಾತ್ ಅರ್ಪಾದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:9
23 ತಿಳಿವುಗಳ ಹೋಲಿಕೆ  

ಯೋಷೀಯನು ದೇವಾಲಯದ ವಿಷಯದಲ್ಲಿ ಈ ಎಲ್ಲಾ ವ್ಯವಸ್ಥೆಯನ್ನು ಮಾಡಿದನಂತರ ಐಗುಪ್ತದ ಅರಸನಾದ ನೆಕೋ ಎಂಬುವವನು ಯುದ್ಧಮಾಡುವುದಕ್ಕೋಸ್ಕರ ಯೂಫ್ರೆಟಿಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಹೋದನು.


ಅಶ್ಶೂರದ ಅರಸನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ವಿರೋಧವಾಗಿ ಹೋಗಿ ರೆಚೀನನನ್ನು ಕೊಂದು ನಿವಾಸಿಗಳನ್ನು ಸೆರೆಹಿಡಿದು, ಕೀರ್ ಪ್ರಾಂತ್ಯಕ್ಕೆ ತಂದನು.


ಐಗುಪ್ತವನ್ನು ಕುರಿತದ್ದು; ಐಗುಪ್ತದ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೆಟಿಸ್ ನದಿಯ ಬಳಿ ಕರ್ಕೆಮೀಷಿನಲ್ಲಿರುವಾಗ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಆ ಸೈನ್ಯವನ್ನು ಹೊಡೆದ ವಿಷಯ:


ಶಿನಾರ್ ದೇಶದಲ್ಲಿರುವ ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.


ದಮಸ್ಕವನ್ನು ಕುರಿತದ್ದು, “ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು.


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ” ಎಂಬುದಾಗಿ ದೂತರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.


ಹಮಾತ್, ಅರ್ಪಾದ್, ಸೆಫರ್ವಯಿಮ್ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಯಿಂದ ತಪ್ಪಿಸಿದವೋ?


ಎಫ್ರಾಯೀಮಿಗೆ ರಕ್ಷಣೆಯಾಗಿರುವ ಕೋಟೆಯೂ, ದಮಸ್ಕವು ನಡೆಸುವ ರಾಜ್ಯಾಧಿಕಾರವೂ ಇಲ್ಲವಾಗುವವು. ಅರಾಮ್ಯರಲ್ಲಿ ಉಳಿದವರು ಇಸ್ರಾಯೇಲರ ಮಕ್ಕಳ ವೈಭವದಂತೆ ಇರುವರು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಏಕೆಂದರೆ ಅರಾಮಿಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಚೀನ. ಅರುವತ್ತೈದು ವರ್ಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನ್ನಿಸಿಕೊಳ್ಳರು.


ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲರನ್ನು ಸೆರೆಯಾಗಿ ಒಯ್ದ ನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಅಲ್ಲಿಗೆ ಕಳುಹಿಸಿದನು. ಅವರು ಸಮಾರ್ಯ ದೇಶವನ್ನು ಸ್ವತಂತ್ರಪಡಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಮಾಡಿದರು.


ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.


ಹೋರ್ ಪರ್ವತದಿಂದ ಹಮಾತಿನವರೆಗೂ ಮತ್ತು ಅಲ್ಲಿಂದ ಚೆದಾದಿನ ಹತ್ತಿರಕ್ಕೆ ಇರುವುದು.


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ ಮತ್ತು ಇವ್ವಾ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಲು ಸಾಧ್ಯವಾಯಿತೇ?


ನನ್ನ ತಂದೆತಾತಂದಿರು ನಾಶಮಾಡಿಬಿಟ್ಟ ಆ ಜನಾಂಗಗಳ ದೇವರುಗಳಲ್ಲಿ ಯಾವನು ತಾನೆ ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸುವುದಕ್ಕೆ ಸಮರ್ಥನಾಗಿದ್ದನು? ಹೀಗಿರುವಲ್ಲಿ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಯೋ


ಅವನು ಹೇಳುವುದೇನೆಂದರೆ, “ನನ್ನ ಅಧಿಪತಿಗಳೆಲ್ಲಾ ಅರಸರಲ್ಲವೇ?


ದಮಸ್ಕದ ವಿಷಯವಾದ ದೈವೋಕ್ತಿ. “ಆಹಾ, ದಮಸ್ಕವು ಇನ್ನು ಪಟ್ಟಣವಾಗಿರದೇ ಹಾಳು ದಿಬ್ಬವಾಗಿರುವುದು.


ಅಶ್ಶೂರದ ಅರಸರು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ಕೇಳಿದಿಯಲ್ಲಾ? ಹೀಗಿದ್ದ ಮೇಲೆ ನೀನು ಉಳಿಯುವಿಯೋ?


ಹಮಾತ್, ಬೇರೋತ, ದಮಸ್ಕದವರೆಗೂ ಹಮಾತಿನ ಮೇರೆಗೂ ಮಧ್ಯವಾಗಿರುವ ಸಿಬ್ರಯಿಮ್ ಎಂಬ ಊರುಗಳ ಮೇಲೆ ಹವ್ರಾನಿನ ಮೇರೆಯಲ್ಲಿರುವ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು.


ಅವರು ಅರಸರನ್ನು ಧಿಕ್ಕರಿಸಿ ಅಪಹಾಸ್ಯ ಮಾಡುವರು. ಸರದಾರರು ಅಧಿಪತಿಗಳು ಅವರ ಪರಿಹಾಸ್ಯಕ್ಕೆ ಗುರಿಯಾಗುವರು. ಒಂದೊಂದು ಕೋಟೆಯನ್ನೂ ಆಕ್ರಮಿಸಿ ಧೂಳಿಪಟ ಮಾಡುವರು.


ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ಇಲ್ಲವೇ ಇಲ್ಲ; ಶತ್ರುವು ಒಪ್ಪಂದವನ್ನು ಮೀರಿದ್ದಾನೆ, ಪಟ್ಟಣಗಳನ್ನು ತಿರಸ್ಕರಿಸಿದ್ದಾನೆ, ಯಾವ ಮನುಷ್ಯರನ್ನೂ ಗಣನೆಗೆ ತಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು