ಯೆಶಾಯ 11:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವನು ಜನಾಂಗಗಳಲ್ಲಿ ಧ್ವಜವನ್ನೆತ್ತಿ, ಇಸ್ರಾಯೇಲರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ, ಯೆಹೂದದಿಂದ ಚದರಿದವರನ್ನೂ ಭೂಮಿಯ ನಾಲ್ಕು ಕಡೆಗಳಿಂದಲೂ ಕೂಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇಸ್ರಯೇಲರಲ್ಲಿ ಸೆರೆಹೋದವರನ್ನು, ಜುದೇಯದಿಂದ ಚದರಿಹೋದವರನ್ನು ಕರೆತರಲು, ಧರೆಯ ಚತುರ್ದಿಕ್ಕುಗಳಿಂದವರನ್ನು ಬರಮಾಡಲು, ರಾಷ್ಟ್ರಗಳಿಗೆ ಗುರುತಾಗಿ ಧ್ವಜವನ್ನು ಆತ ಏರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವನು ಜನಾಂಗಗಳಿಗೆ ಧ್ವಜವನ್ನೆತ್ತಿ ಇಸ್ರಾಯೇಲ್ಯರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ ಯೆಹೂದದಿಂದ ಚದರಿದವರನ್ನೂ ಭೂವಿುಯ ಚತುರ್ದಿಕ್ಕುಗಳಿಂದಲೂ ಕೂಡಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ದೇವರು ಜನಾಂಗಗಳಿಗೆ ಒಂದು ಗುರುತಾಗಿ ಧ್ವಜವನ್ನೆತ್ತುವನು. ಇಸ್ರೇಲ್ ಮತ್ತು ಯೆಹೂದದ ಜನರು ತಮ್ಮ ಸ್ಥಳಗಳಿಂದ ಕಡ್ಡಾಯವಾಗಿ ತೆಗೆದುಹಾಕಲ್ಪಡುವರು. ಆ ಜನರು ಪ್ರಪಂಚದ ಬಹುದೂರದ ಸ್ಥಳಗಳಿಗೆ ಚದರಿ ಹೋಗುವರು. ಆದರೆ ದೇವರು ಅವರನ್ನು ಒಟ್ಟಾಗಿ ಸೇರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಜನಾಂಗಗಳಿಗೆ ಗುರುತಾಗಿ ಧ್ವಜವನ್ನೆತ್ತಿ ಇಸ್ರಾಯೇಲಿನಿಂದ ತಳ್ಳಿಬಿಟ್ಟವರನ್ನು ಕೂಡಿಸುವನು. ಯೆಹೂದದಿಂದ ಚದರಿದವರನ್ನು ಭೂಮಿಯ ನಾಲ್ಕು ಕಡೆಗಳಿಂದ ಒಟ್ಟುಗೂಡಿಸುವನು. ಅಧ್ಯಾಯವನ್ನು ನೋಡಿ |