Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 11:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮೊಲೆಕೂಸು ನಾಗರ ಹಾವಿನ ಹುತ್ತದ ಮೇಲೆ ಆಡುವುದು; ಮೊಲೆಬಿಟ್ಟ ಮಗುವು ಹಾವಿನ ಬಿಲದ ಒಳಗೆ ಕೈಹಾಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಡುವುದು ಮೊಲೆಗೂಸು ನಾಗರ ಹುತ್ತದ ಮೇಲೆ ಕೈಹಾಕುವುದು ಮೊಲೆಬಿಟ್ಟ ಮಗು ಹಾವಿನ ಬಿಲದ ಒಳಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮೊಲೆಕೂಸು ನಾಗರಹುತ್ತದ ಮೇಲೆ ಆಡುವದು; ಮೊಲೆಬಿಟ್ಟ ಮಗು ಹಾವಿನ ಬಿಲದ ಮೇಲೆ ಕೈಹಾಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮಗುವು ನಾಗರಹಾವಿನ ಹುತ್ತದ ಬಳಿ ಆಡುತ್ತಾ ಹುತ್ತದೊಳಗೆ ಕೈಹಾಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹಸುಳೆಯು ನಾಗರ ಹಾವಿನ ಹುತ್ತದ ಮೇಲೆ ಆಡುವುದು ಮತ್ತು ಪುಟ್ಟ ಮಗುವು ಹಾವಿನ ಬಿಲದ ಒಳಗೆ ಕೈ ಹಾಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 11:8
7 ತಿಳಿವುಗಳ ಹೋಲಿಕೆ  

ಹಾವಿನಂತೆ ಕೇಡಿನ ಮೊಟ್ಟೆಗಳನ್ನು ಮರಿಮಾಡುತ್ತಾರೆ, ಜೇಡರ ಹುಳದಂತೆ ಬಲೆಯನ್ನು ನೇಯುತ್ತಾರೆ; ಆ ಮೊಟ್ಟೆಗಳನ್ನು ತಿನ್ನುವವನಿಗೆ ಮರಣ ಉಂಟಾಗುವುದು, ಅದನ್ನು ಒಡೆದುಬಿಡುವುದರಿಂದ ವಿಷದ ಮರಿ ಹೊರಡುವುದು.


ತಮ್ಮ ನಾಲಿಗೆಯನ್ನು ಸರ್ಪದಂತೆ ಹದಮಾಡಿದ್ದಾರೆ, ಅವರ ತುಟಿಗಳ ಹಿಂದೆ ಹಾವಿನ ವಿಷವಿದೆ. ಸೆಲಾ


ಆಮೇಲೆ ಹಾವಿನಂತೆ ಕಚ್ಚುತ್ತದೆ, ಹೌದು, ನಾಗರ ಹಾವಿನ ಹಾಗೆ ಕಡಿಯುತ್ತದೆ.


ಹಸುವು ಕರಡಿಯ ಸಂಗಡ ಮೇಯುವುದು; ಅವುಗಳ ಮರಿಗಳು ಜೊತೆಯಾಗಿ ಮಲಗುವವು. ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು.


ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ; ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವುದು.


ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ; ಏಕೆಂದರೆ ನಾಗರ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಸಂತತಿಯು ಹಾರುವ ಸರ್ಪವೇ.


ಹೊಲದ ಕಲ್ಲುಗಳೊಂದಿಗೂ ಒಪ್ಪಂದ ಮಾಡಿಕೊಂಡಿರುವಿ; ಕಾಡುಮೃಗಗಳೂ ನಿನ್ನ ಸಂಗಡ ಸಮಾಧಾನವಾಗಿರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು