ಯೆಶಾಯ 12:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆ ದಿನದಲ್ಲಿ ನೀನು ಹೇಳುವದೇನಂದರೆ - ಯೆಹೋವನೇ, ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀಯಲ್ಲವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆ ಸಮಯದಲ್ಲಿ ನೀನು ಹೀಗೆನ್ನುವೆ: “ಯೆಹೋವನೇ, ನಾನು ನಿನ್ನನ್ನು ಸ್ತುತಿಸುವೆ! ನೀನು ನನ್ನ ಮೇಲೆ ಕೋಪಿಸಿಕೊಂಡಿರುವೆ. ಆದರೆ ಈಗ ನೀನು ನನ್ನ ಮೇಲೆ ಕೋಪಗೊಳ್ಳಬೇಡ! ನಿನ್ನ ಪ್ರೀತಿಯನ್ನು ನನ್ನ ಮೇಲೆ ತೋರಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆ ದಿನದಲ್ಲಿ ನೀನು ಹೇಳುವುದೇನೆಂದರೆ: “ಯೆಹೋವ ದೇವರೇ, ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀವು ನನ್ನ ಮೇಲೆ ಕೋಪಗೊಂಡಿದ್ದರೂ, ಆ ನಿಮ್ಮ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀರಲ್ಲವೆ? ಅಧ್ಯಾಯವನ್ನು ನೋಡಿ |