ಯೆಶಾಯ 12:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇಗೋ ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸಪಡುವೆನು; ನನ್ನ ಬಲವೂ ಕೀರ್ತನೆಯೂ ಯಾಹುಯೆಹೋವನಷ್ಟೆ, ಆತನೇ ನನಗೆ ರಕ್ಷಕನಾದನು ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದೇವರು ನನ್ನನ್ನು ರಕ್ಷಿಸುತ್ತಾನೆ. ಆತನಲ್ಲಿ ಭರವಸವಿಟ್ಟಿದ್ದೇನೆ. ಆದ್ದರಿಂದ ನಾನು ಭಯಪಡೆನು. ಆತನು ನನ್ನನ್ನು ರಕ್ಷಿಸುತ್ತಾನೆ. ಯೆಹೋವನೇ ನನ್ನ ಬಲವು. ಆತನು ನನ್ನನ್ನು ರಕ್ಷಿಸುತ್ತಾನೆ. ನಾನು ಆತನಿಗೆ ಸ್ತೋತ್ರಗಾನ ಹಾಡುವೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಿಜವಾಗಿಯೂ ದೇವರೇ ನನಗೆ ರಕ್ಷಣೆಯು, ನಾನು ಭರವಸವಿಡುವೆನು ಮತ್ತು ಭಯಪಡೆನು. ಕರ್ತರಾದ ಯೆಹೋವ ದೇವರೇ ನನ್ನ ಬಲವೂ ನನ್ನ ಕೀರ್ತನೆಯೂ, ಅವರೇ ನನಗೆ ರಕ್ಷಣೆಯೂ ಆಗಿದ್ದಾರೆ.” ಅಧ್ಯಾಯವನ್ನು ನೋಡಿ |
ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.