Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 12:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೇಳುವಿರಿ ನೀವು ಆ ದಿನದಂದು ಈ ಪರಿ - “ಸಲ್ಲಿಸಿರಿ ಸರ್ವೇಶ್ವರನಿಗೆ ಕೃತಜ್ಞತೆಯನು ಸ್ಮರಿಸಿರಿ ಆತನ ಶ್ರೀನಾಮವನು ಸಾರಿರಿ ಜನತೆಗೆ ಆತನ ಕಾರ್ಯಗಳನು ಘೋಷಿಸಿರಿ ಆತನ ನಾಮಘನತೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ದಿನದಲ್ಲಿ ನೀವು ಹೇಳುವದೇನಂದರೆ - ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ, ಆತನ ನಾಮವು ಉನ್ನತೋನ್ನತವೆಂದು ಜ್ಞಾಪಕಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ನೀನು, “ಯೆಹೋವನಿಗೆ ಸ್ತೋತ್ರವಾಗಲಿ, ಆತನ ಹೆಸರಿನ ಮಹತ್ವವನ್ನು ವರ್ಣಿಸಿರಿ! ಆತನು ಜನಾಂಗಗಳಲ್ಲಿ ಮಾಡಿದ ಕಾರ್ಯಗಳನ್ನು ಸಾರಿರಿ. ಆತನ ಹೆಸರು ಮಹೋನ್ನತವೆಂದು ಜ್ಞಾಪಕಪಡಿಸಿರಿ!” ಎಂದು ಹೇಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆ ದಿನದಲ್ಲಿ ನೀವು ಹೀಗೆ ಹೇಳುವಿರಿ, “ಯೆಹೋವ ದೇವರನ್ನು ಕೊಂಡಾಡಿರಿ. ಅವರ ಹೆಸರನ್ನೆತ್ತಿ ಜನರ ಮಧ್ಯದಲ್ಲಿ ಅವರ ಕ್ರಿಯೆಗಳನ್ನು ಪ್ರಕಟಿಸಿರಿ. ಅವರ ನಾಮವನ್ನು ಉನ್ನತೋನ್ನತವೆಂದು ಎತ್ತಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 12:4
42 ತಿಳಿವುಗಳ ಹೋಲಿಕೆ  

ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ; ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ.


ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ.


ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯ ಪ್ರಾಮಾಣಿಕತೆಗಳನ್ನು ಅನುಸರಿಸಿ, ಆದಿ ಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಗಳನ್ನು ನಡೆಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿಸುವೆನು.


ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ. ಇನ್ನೂ ತಿಳಿಸುವೆನು. ಏಕೆಂದರೆ, ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ಮತ್ತು ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ” ಎಂದನು.


“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ, ‘ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.


ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.


ಯೆಹೋವನು ಚೈತನ್ಯಸ್ವರೂಪನು; ನನ್ನ ಶರಣನಿಗೆ ಸ್ತೋತ್ರ; ನನ್ನನ್ನು ರಕ್ಷಿಸುವ ದೇವರಿಗೆ ಕೊಂಡಾಟವಾಗಲಿ.


ಆನಂತರ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬುವವರು, “ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವನ್ನು ಸಲ್ಲಿಸಿರಿ. ಯೆಹೋವನೇ, ಸರ್ವಸ್ತುತಿ ಕೀರ್ತನೆಗಳಿಗೂ ಮೀಗಿಲಾಗಿರುವ ನಿನ್ನ ಮಹಾನಾಮಕ್ಕೆ ಮಹಿಮೆಯುಂಟಾಗಲಿ.


ಸರ್ವೋತ್ತಮತ್ವವನ್ನು ಅದಕ್ಕೆ ಆತನು, “ನಾನು ನನ್ನ ಮಹಿಮೆಯನ್ನು ಪೂರ್ಣವಾಗಿ ನಿನ್ನೆದುರಿಗೆ ಬರುವಂತೆ ಮಾಡುವೆನು. ಯೆಹೋವನೆಂಬ ನನ್ನ ನಾಮದ ಪೂರ್ಣ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. ನಾನು ಯಾರ ಮೇಲೆ ದಯೆತೋರಿಸಬೇಕೆಂದಿರುವೆನೋ ಅವನ ಮೇಲೆ ದಯೆ ತೋರಿಸುವೆನು, ಯಾರನ್ನು ಕರುಣಿಸಬೇಕೆಂದಿರುವೆನೋ ಅವನನ್ನು ಕರುಣಿಸುವೆನು” ಅಂದನು.


ನನ್ನ ಬಲವೂ, ಕೀರ್ತನೆಯೂ ಯಾಹುವೇ. ಆತನಿಂದ ನನಗೆ ರಕ್ಷಣೆ ಉಂಟಾಯಿತು. ನಮ್ಮ ದೇವರು ಆತನೇ, ಆತನನ್ನು ಸ್ತುತಿಸುವೆನು, ನಮ್ಮ ಪೂರ್ವಿಕರ ದೇವರು ಆತನೇ, ಆತನ ಮಹಿಮೆಯನ್ನು ಪ್ರಖ್ಯಾತಿಪಡಿಸುವೆವು.


ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.”


ಯೆಹೋವನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಣ ಲೋಕದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗಳಿಂದ ತುಂಬಿಸಿದ್ದಾನೆ.


ಮೂಡಣದವರೇ, “ಯೆಹೋವನನ್ನು ಸನ್ಮಾನಿಸಿರಿ. ದ್ವೀಪ ನಿವಾಸಿಗಳೇ, ಇಸ್ರಾಯೇಲರ ದೇವರಾದ ಯೆಹೋವನ ನಾಮವನ್ನು ಘನಪಡಿಸಿರಿ” ಎಂದು ಕೂಗುವರು.


ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.


ಮನುಷ್ಯರ ಗರ್ವವು ಕುಗ್ಗುವುದು. ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ನಮ್ಮ ಯೆಹೋವ ದೇವರಿಗೆ ಸಮಾನರು ಯಾರು? ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ,


ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸಿ, ಉತ್ಸಾಹಧ್ವನಿಮಾಡುತ್ತಾ ಆತನ ಮಹತ್ಕಾರ್ಯಗಳನ್ನು ವರ್ಣಿಸಲಿ.


ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ; ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ.


ಜನಾಂಗಗಳಲ್ಲಿ ಆತನ ಘನತೆಯನ್ನೂ, ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ.


ನನಗಾದರೋ ದೇವರ ಸಾನ್ನಿಧ್ಯವೇ ಭಾಗ್ಯವು. ಕರ್ತನೇ, ಯೆಹೋವನೇ, ನಾನು ನಿನ್ನನ್ನು ಆಶ್ರಯಿಸಿಕೊಂಡವನಾಗಿ ನಿನ್ನ ಮಹತ್ಕಾರ್ಯಗಳನ್ನು ಪ್ರಕಟಿಸುವೆನು.


“ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ.


ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ, ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ; ಅವು ಅಸಂಖ್ಯಾತವಾಗಿವೆ.


ನನ್ನೊಡನೆ ಯೆಹೋವನನ್ನು ಕೊಂಡಾಡಿರಿ; ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ.


ಅವರು ಬಂದು ಆತನ ನೀತಿಯನ್ನೂ, ಆತನು ನಡೆಸಿದ ಕಾರ್ಯಗಳನ್ನೂ ಮುಂದೆ ಹುಟ್ಟುವ ಜನಕ್ಕೆ ತಿಳಿಸುವರು.


ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಘನಪಡಿಸಿಕೋ; ನಾವು ಗಾಯನಮಾಡುತ್ತಾ ನಿನ್ನ ಶೂರತ್ವವನ್ನು ಕೊಂಡಾಡುವೆವು.


ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ; ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.


“ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ನಾಮದ ಮಹತ್ವವನ್ನು ವರ್ಣಿಸಿರಿ. ಜನಾಂಗಗಳಲ್ಲಿ ಆತನ ಸತ್ಕಾರ್ಯಗಳನ್ನು ಪ್ರಸಿದ್ಧಪಡಿಸಿರಿ.


ಯೆಹೋವನನ್ನು ಕೊಂಡಾಡಲಿ. ಆತನ ನಾಮವೊಂದೇ ಮಹತ್ವವುಳ್ಳದ್ದು, ಆತನ ಪ್ರಭಾವವು ಭೂಮ್ಯಾಕಾಶಗಳಲ್ಲಿ ಪ್ರಸರಿಸಿದೆ.


ಹೌದು, ಯೆಹೋವನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಿನಗಾಗಿ ಕಾದುಕೊಂಡಿದ್ದೇವೆ; ನಿನ್ನ ನಾಮಸ್ಮರಣೆಯು ನಮ್ಮ ಆತ್ಮಕ್ಕೆ ಇಷ್ಟವಾಗಿದೆ, ಹಿತವಾಗಿದೆ.


ಯೆಹೋವನನ್ನು ಘನಪಡಿಸಿ ದ್ವೀಪಾಂತರಗಳಲ್ಲಿ ಆತನ ಸ್ತೋತ್ರವನ್ನು ಹಬ್ಬಿಸಲಿ.


ಬಾಬೆಲಿನಿಂದ ಹೊರಡಿರಿ! ಕಸ್ದೀಯರ ಕಡೆಯಿಂದ ಹಾರಿಹೋಗಿರಿ! ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. ‘ಯೆಹೋವನು ತನ್ನ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾನೆ’” ಎಂದು ಹೇಳಿರಿ.


“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ, ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು