Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 12:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಚೀಯೋನಿನ ನಿವಾಸಿಗಳೇ, ಕೂಗಿರಿ, ಉತ್ಸಾಹ ಧ್ವನಿಮಾಡಿರಿ; ಇಸ್ರಾಯೇಲ್ಯರ ಸದಮಲಸ್ವಾವಿುಯು ನಿಮ್ಮ ಮಧ್ಯದಲ್ಲಿ ಮಹತ್ತಾಗಿದ್ದಾನಷ್ಟೆ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದ್ದರಿಂದ ಹರ್ಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ. ಏಕೆಂದರೆ, ಇಸ್ರಾಯೇಲಿನ ಪರಿಶುದ್ಧರು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವರಾಗಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 12:6
40 ತಿಳಿವುಗಳ ಹೋಲಿಕೆ  

ನಾನೇ, ಅದರ ಸುತ್ತಮುತ್ತಲೂ ಅಗ್ನಿಪ್ರಾಕಾರವಾಗಿ, ಅದರೊಳಗೆ ವೈಭವವೂ ಆಗಿರುವೆನು’” ಎಂಬುದು ಯೆಹೋವನ ನುಡಿ.


ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ; ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.


ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.


ಪಟ್ಟಣದ ಸುತ್ತಳತೆಯು ಹದಿನೆಂಟು ಸಾವಿರ ಮೊಳವು; ಅದನ್ನು ನಿರ್ಮಿಸಿದ ದಿನದಿಂದ ಆ ಪಟ್ಟಣಕ್ಕೆ “ಯೆಹೋವನ ನೆಲೆ” ಎಂದು ಹೆಸರಾಗುವುದು.


“ಹೆರದವಳೇ, ಬಂಜೆಯೇ, ಹರ್ಷಧ್ವನಿಗೈ! ಪ್ರಸವ ವೇದನೆಯನ್ನು ಅನುಭವಿಸದವಳೇ, ಆನಂದ ಸ್ವರವೆತ್ತಿ ಕೂಗು! ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಯೆಹೋವನು ಹೇಳುತ್ತಾನೆ.


ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವುದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾಮಿಯಲ್ಲಿ ಹೆಚ್ಚಳಪಡುವಿ.


ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ, “ಇಗೋ, ನಿಮ್ಮ ದೇವರು!


ನನ್ನ ದೇವರೇ, ನಿನ್ನ ಸತ್ಯತೆಯನ್ನು ಸ್ಮರಿಸುವೆನು; ಸ್ವರಮಂಡಲದಿಂದ ನಿನ್ನನ್ನು ಸಂಕೀರ್ತಿಸುವೆನು. ಇಸ್ರಾಯೇಲರ ಪರಿಶುದ್ಧ ದೇವರು, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು.


ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವನ ನುಡಿಯು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ವಾಸಿಸುವ ಜನರೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು.


ಮಾತನಾಡುವಾತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಇದು ನನ್ನ ಸಿಂಹಾಸನ, ನನ್ನ ಪಾದ ಪೀಠ, ಇಲ್ಲಿ ನಾನು ಇಸ್ರಾಯೇಲರ ಮಧ್ಯದಲ್ಲಿ ಸದಾ ವಾಸಿಸುವೆನು. ಇಸ್ರಾಯೇಲ್ ವಂಶದವರಾಗಲಿ, ಅವರ ಅರಸರಾಗಲಿ ತಮ್ಮ ದೇವದ್ರೋಹದಿಂದಲೂ, ಗತಿಸಿದ ಅರಸರ ಶವಗಳಿಂದಲೂ ನನ್ನ ಪರಿಶುದ್ಧ ನಾಮವನ್ನು ಅಪವಿತ್ರ ಮಾಡುವುದಿಲ್ಲ.


ನಿನ್ನ ಹಿಂಸಕರು ತಮ್ಮ ಮಾಂಸವನ್ನೇ ತಿನ್ನುವಂತೆ ಮಾಡುವೆನು, ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು” ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವುದು.


ಚೀಯೋನಿನ ಯಾವ ನಿವಾಸಿಯೂ “ನಾನು ಅಸ್ವಸ್ಥನು” ಎಂದು ಹೇಳುವುದಿಲ್ಲ. ಅಲ್ಲಿಯ ಜನರ ಪಾಪವು ಪರಿಹಾರವಾಗುವುದು.


ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವುದೇ ಇಲ್ಲ; ನೀವು ಕೂಗಿ ದುಃಖಿಸಿದ ಶಬ್ದವನ್ನು ಆತನು ಕೇಳಿ, ನಿಮಗೆ ಕೃಪೆ ತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.


ಆಮೇಲೆ ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇಮನ್ನು ಆಳುವನು. ಆತನ ಪರಿವಾರದ ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವುದು.


ಆದುದರಿಂದ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, “ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತರು ಮಾಡಿದಂತೆ, ನಿಮ್ಮನ್ನು ಕೋಲಿನಿಂದ ಹೊಡೆದು, ನಿಮ್ಮ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.


ಆಹಾ, ನಾನೂ, ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲರ ಮಧ್ಯದಲ್ಲಿದ್ದೇವೆ.


ಆತನು, “ಇದು ನನ್ನ ಶಾಶ್ವತ ವಾಸಸ್ಥಾನ; ಇಲ್ಲೇ ಇರುವೆನು; ಇದು ನನಗೆ ಇಷ್ಟ.


ನಮಗೆ ಗುರಾಣಿಯಂತಿರುವ ನಮ್ಮ ಅರಸನು ಯೆಹೋವನೇ; ಅವನು ಇಸ್ರಾಯೇಲರ ಸದಮಲಸ್ವಾಮಿಯ, ಸ್ವಕೀಯನು.


ಎಲೈ, ಶಿಖರೋನ್ನತಪರ್ವತಗಳೇ, ದೇವರು ತನ್ನ ನಿವಾಸಕ್ಕಾಗಿ ಆರಿಸಿಕೊಂಡಿರುವ ಈ ಪರ್ವತವನ್ನು ನೀವು ಓರೆಗಣ್ಣಿನಿಂದ ನೋಡುವುದೇಕೆ? ಯೆಹೋವನು ಸದಾಕಾಲವೂ ಇದರಲ್ಲೇ ವಾಸಿಸುವನು.


ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು.


ಚೀಯೋನಿನಲ್ಲಿರುವ ಯೆಹೋವನು ದೊಡ್ಡವನು; ಆತನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು.


ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ, “ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು.


ಅವರು ತಮ್ಮ ಧ್ವನಿ ಎತ್ತಿ ಯೆಹೋವನ ಮಹಿಮೆಯನ್ನು ಕುರಿತು ಹಾಡುವರು. ಸಮುದ್ರದ ಕಡೆಯಿಂದ ಆರ್ಭಟಿಸುವರು.


ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.


ಯೆಹೋವನೇ, ನಿನ್ನ ಸಮಾನನು ಯಾರು ಇಲ್ಲ; ನೀನು ಮಹೋನ್ನತನು, ನಿನ್ನ ನಾಮವು ಸಾಮರ್ಥ್ಯದಿಂದ ಕೂಡಿ ಮಹೋನ್ನತವಾಗಿದೆ.


ನೀನು, “ಈ ಎರಡು ಜನಾಂಗಗಳೂ ಈ ಎರಡು ದೇಶಗಳೂ ನನ್ನ ವಶವಾಗುವವು” ಎಂದೂ ಹೇಳಿದ್ದರಿಂದ, ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ ಎಂದು ಅಂದುಕೊಂಡು, ಅಲ್ಲಿ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯಮಾಡಿದ್ದರಿಂದ,


“ನಾನು ನನ್ನ ಪವಿತ್ರ ನಾಮವನ್ನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ವ್ಯಕ್ತಗೊಳಿಸುವೆನು. ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗದ ಹಾಗೆ ಮಾಡುತ್ತೇನೆ. ನಾನೇ ಯೆಹೋವ, ಇಸ್ರಾಯೇಲಿನ ಸದಮಲಸ್ವಾಮಿ ಎಂದು ಅನ್ಯ ಜನಾಂಗಗಳಿಗೆ ಗೊತ್ತಾಗುವುದು.”


ಯೆಹೂದದ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ನೀವು ಮೀಸಲಾಗಿ ಸಮರ್ಪಿಸುವ ಪಾಲು ಇರುವುದು. ಅದರ ಅಗಲವು ಇಪ್ಪತ್ತೈದು ಸಾವಿರ ಮೊಳ ಉದ್ದವು, ಪೂರ್ವದಿಂದ ಪಶ್ಚಿಮ ಕುಲಗಳ ಪಾಲುಗಳ ಉದ್ದಕ್ಕೆ ಸಮಾನವಾಗಿದೆ. ಅದರ ಮಧ್ಯದಲ್ಲಿ ಪವಿತ್ರಾಲಯವಿರುವುದು.


ನನ್ನ ಉಗ್ರಕೋಪವನ್ನು ತೀರಿಸೆನು, ಎಫ್ರಾಯೀಮನ್ನು ನಾಶಮಾಡಲು ತಿರಿಗಿಕೊಳ್ಳೆನು. ನಾನು ಮನುಷ್ಯನಲ್ಲ, ದೇವರೇ; ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿ, ನಾನು ನಿನ್ನ ಬಳಿಗೆ ರೋಷದಿಂದ ಬಾರೆನು.


ಈ ಯಾಕೋಬನಲ್ಲಿ ಯಾವ ಆಪತ್ತಿನ ಸೂಚನೆಯೂ ಕಾಣುವುದಿಲ್ಲ ಅಥವಾ ಇಸ್ರಾಯೇಲರಿಗೆ ಯಾವ ವಿಪತ್ತಿನ ಸೂಚನೆಯೂ ತೋರುವುದಿಲ್ಲ. ಅವರಿಗೆ ದೇವರಾಗಿರುವ ಯೆಹೋವನು ಅವರ ಸಂಗಡ ಇದ್ದಾನೆ, ಅವರು ತಮ್ಮ ಅರಸನಿಗಾಗಿ ಮಾಡುವ ಜಯ ಘೋಷವು ಕೇಳಿಸುತ್ತ ಇದೆ.


ತಪ್ಪಿಸಿಕೊಂಡ ಗುಲಾಮನು ನಿಮ್ಮಲ್ಲಿರುವುದಕ್ಕೆ ಬಂದರೆ ಅವನನ್ನು ಅವನ ದಣಿಗೆ ಪುನಃ ವಶಪಡಿಸಬಾರದು.


ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ದೇವರಿಗೆ, ಕೀರ್ತಿ ಉಂಟಾಗಲಿ, ಯೆಹೋವನಿಗೆ ಸ್ತೋತ್ರ!


ಅಲ್ಲಿ ಯೆಹೋವನು ಘನಹೊಂದಿದವನಾಗಿ ನದಿಸರೋವರಗಳಂತೆ ನಮ್ಮೊಂದಿಗಿರುವನು. ಹುಟ್ಟುಗೋಲಿನ ದೋಣಿಯಾಗಲಿ, ದೊಡ್ಡ ಹಡಗಾಗಲಿ ಅದನ್ನು ದಾಟುವುದಿಲ್ಲ.


ನಾನು ಇಸ್ರಾಯೇಲಿನ ಮಧ್ಯದಲ್ಲಿ ನೆಲೆಯಾಗಿ ಇರುವವನು, ನಾನೇ ನಿಮ್ಮ ದೇವರಾದ ಯೆಹೋವನು, ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.


“ಆಹಾ, ನಾನು ಇವರ ಮೇಲೆ ಕೈಬೀಸುವೆನು; ಇವರು ತಮಗೆ ಅಡಿಯಾಳಾದವರಿಗೆ ಸೂರೆಯಾಗುವರು” ಎಂದು ಹೇಳುತ್ತಾನೆ. ಆಗ ಸೇನಾಧೀಶ್ವರ ಯೆಹೋವನು ನನ್ನನ್ನು ಕಳುಹಿಸಿದ್ದಾನೆಂಬುದು ನಿಮಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು