Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದುದರಿಂದ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ತೀಕ್ಷ್ಣರೋಷದಿಂದ ಆಕಾಶಮಂಡಲವನ್ನು ನಡುಗಿಸಿ, ಭೂಲೋಕವನ್ನು ಅದರ ಸ್ಥಳದಿಂದ ಕದಲಿಸಿ ನಡುಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸೇನಾಧೀಶ್ವರ ಸರ್ವೇಶ್ವರನು ಕೋಪೋದ್ರೇಕದಿಂದ ರೋಷಾವೇಶದಿಂದ ಕೆರಳುವ ದಿನದಂದು ಆಕಾಶಮಂಡಲ ನಡುಗುವುದು, ಭೂಮಂಡಲ ಸ್ಥಳಪಲ್ಲಟಗೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದಕ್ಕಾಗಿ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕವೂ ತೀಕ್ಷ್ಣರೋಷವೂ ಮಸಗುತ್ತಿರುವ ದಿನದಲ್ಲಿ [ಯೆಹೋವನೆಂಬ] ನಾನು ಆಕಾಶಮಂಡಲವನ್ನು ನಡುಗಿಸಿ ಭೂಲೋಕವನ್ನು ಸ್ಥಳದಿಂದ ಕದಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನ ಕೋಪದಿಂದ ಆಕಾಶಮಂಡಲವನ್ನು ನಡುಗಿಸುವೆನು. ಭೂಮಿಯನ್ನು ಅದರ ಸ್ಥಳದಿಂದ ಕದಲಿಸುವೆನು.” ಸರ್ವಶಕ್ತನಾದ ಯೆಹೋವನು ತನ್ನ ಮಹಾಕೋಪವನ್ನು ಪ್ರದರ್ಶಿಸುವ ದಿನದಲ್ಲಿ ಅದು ನೆರವೇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರ ಕೋಪವೂ, ಅವರ ತೀಕ್ಷ್ಣರೋಷವೂ ಪ್ರಕಟವಾಗುವ ಆ ದಿನದಂದು, ಆಕಾಶಮಂಡಲ ನಡುಗುವುದು. ಭೂಮಂಡಲ ಅದರ ಸ್ಥಳದಿಂದ ಕದಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:13
27 ತಿಳಿವುಗಳ ಹೋಲಿಕೆ  

ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇಮಿನಿಂದ ಧ್ವನಿಗೈಯುತ್ತಾನೆ. ಭೂಮಿ ಹಾಗು ಆಕಾಶಗಳು ನಡುಗುತ್ತವೆ, ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ, ಮತ್ತು ಇಸ್ರಾಯೇಲರಿಗೆ ರಕ್ಷಣದುರ್ಗವೂ ಆಗಿರುವನು.


“ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.


ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.


ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.


ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿ ರೋಷಗೊಂಡು ನನ್ನನ್ನು ಬಾಧಿಸಿ ನನಗೆ ಉಂಟುಮಾಡಿದ ವ್ಯಥೆಯನ್ನು ನೀವು ನೋಡಿ ಇಂಥಾ ವ್ಯಥೆಯು ಇನ್ನೆಲ್ಲಾದರೂ ಉಂಟೋ ಯೋಚಿಸಿರಿ.


ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ. ಆಕಾಶವು ಹೊಗೆಯಂತೆ ಚದರಿ ಹೋಗುವುದು, ಭೂಮಿಯು ಹಳೆಯ ವಸ್ತ್ರದಂತಾಗುವುದು, ಭೂನಿವಾಸಿಗಳು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ವಿಮೋಚನಕ್ರಿಯೆಯೋ ಶಾಶ್ವತವಾಗಿ ನಿಲ್ಲುವುದು, ನನ್ನ ರಕ್ಷಣಾಧರ್ಮದ ಕಾರ್ಯಕ್ಕೆ ಭಂಗವೇ ಇರುವುದಿಲ್ಲ.


ನಕ್ಷತ್ರ ಸೈನ್ಯವೆಲ್ಲಾ ಗತಿಸಿ ಹೋಗುವುದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಮಾಗಿದ ಹಣ್ಣು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಡಿ ಕೆಳಗೆ ಉದುರುವುದು.


ಭೂಲೋಕವನ್ನು ಕದಲಿಸಿ ಅದರ ಸ್ತಂಭಗಳನ್ನು ನಡುಗಿಸುತ್ತಾನೆ.


ಆಗ ಆತನಿಗೆ ಸಿಟ್ಟೇರಿದ್ದರಿಂದ, ಭೂಮಿಯು ಗಡಗಡನೆ ಕಂಪಿಸಿತು, ಪರ್ವತಗಳ ಬುಡಗಳು ನಡುಗಿ ಕದಲಿದವು.


ನಿನ್ನ ಕೋಪಜ್ವಾಲೆಯು ನನ್ನನ್ನು ಕವಿದಿದೆ; ನಿನ್ನಿಂದುಂಟಾದ ದಿಗಿಲಿನಿಂದ ಹಾಳಾದೆನು.


ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಮನುಷ್ಯರು ಆತನ ಭಯಂಕರ ಕೋಪಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಗವಿಗಳಲ್ಲಿಯೂ, ನೆಲದ ಹಳ್ಳಕೊಳ್ಳಗಳಲ್ಲಿಯೂ ಅಡಗಿಕೊಳ್ಳುವರು.


ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟು ಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.


ಯೆಹೋವನು ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅದರ ವಿಷಯವಾಗಿ ಯೆಹೋವನು ಅಪ್ಪಣೆಕೊಟ್ಟಿದ್ದಾನೆ.


ಇಗೋ, ಯೆಹೋವನು ಭೂಮಿಯನ್ನು ಬರಿದುಮಾಡಿ, ಎಲ್ಲಾ ಪ್ರದೇಶವನ್ನು ನಿರ್ಜನಮಾಡಿ, ಅದನ್ನು ವಿಕಾರಪಡಿಸಿ, ಅದರ ನಿವಾಸಿಗಳನ್ನು ಚದುರಿಸಿಬಿಡುವವನಾಗಿದ್ದಾನೆ.


ಭಯದ ಸಪ್ಪಳದಿಂದ ಓಡಿ ಹೋಗುವವನು ಗುಂಡಿಯಲ್ಲಿ ಬೀಳುವನು, ಗುಂಡಿಯನ್ನು ಹತ್ತಿ ಬರುವವನು ಬಲೆಗೆ ಸಿಕ್ಕುವನು. ನೋಡು, ಆಕಾಶದ ದ್ವಾರಗಳು ತೆರೆದಿವೆ, ಭೂಮಿಯ ಅಸ್ತಿವಾರಗಳು ಕಂಪಿಸುತ್ತಿವೆ.


ಭೂಮಿಯು ಒಡೆದೇ ಇದೆ, ಬಿರಿದಿದೆ, ಕದಲಿಯೇ ಹೋಗಿದೆ.


ಸಮುದ್ರ ಹಾಗೂ ಅಡವಿಯ ವಿಷಯವಾದ ದೈವೋಕ್ತಿ. ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿಯಂತೆ ಅರಣ್ಯದ ಕಡೆಯ ಭಯಂಕರ ದೇಶದಿಂದ (ದೊಡ್ಡ ಅಪಾಯ) ಬರುತ್ತದೆ ಎಂಬ


ಯುವತಿಯೇ, ಬಾಬೆಲ್ ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕುಳಿತುಕೋ, ಕಸ್ದೀಯರ ಯುವತಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ! ನಿನ್ನನ್ನು ಇನ್ನು ಕೋಮಲೆ ಮತ್ತು ಸುಕುಮಾರಿ ಎಂದು ಕರೆಯುವುದಿಲ್ಲ.


ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಬಾಬೆಲಿನ ಮೇಲೂ, ಲೇಬ್ ಕಾಮೈ ದೇಶದವರ ಮೇಲೂ ನಾಶನದ ಗಾಳಿಯನ್ನು ಬೀಸಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು