ಯೆಶಾಯ 13:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಕಾಡು ಮೃಗಗಳು ಅಲ್ಲಿ ಮಲಗುವವು. ಅವರ ಮನೆಗಳು ಗೂಬೆಗಳಿಂದ ತುಂಬಿರುವವು. ಅಲ್ಲಿ ಉಷ್ಟ್ರಪಕ್ಷಿಗಳು ವಾಸಿಸುವವು ಮತ್ತು ಕಾಡಿನ ಟಗರುಗಳು ಅಲ್ಲಿ ಕುಣಿದಾಡುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆ ನಾಡು ಕಾಡುಮೃಗಗಳಿಗೆ ಬೀಡಾಗುವುದು. ಅದರ ಮನೆಗಳು ಗೂಬೆಗಳ ಗೂಡಾಗುವುವು. ಉಷ್ಟ್ರಪಕ್ಷಿಗಳು ಅಲ್ಲಿ ವಾಸಮಾಡುವುವು. ಕಾಡುಮೇಕೆಗಳು ಕುಣಿದಾಡುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅದು ಕಾಡುಮೃಗಗಳಿಗೆ ಹಕ್ಕೆಯಾಗುವದು, ಅಲ್ಲಿನ ಮನೆಗಳಲ್ಲಿ ಗೂಬೆಗಳು ತುಂಬಿಕೊಳ್ಳುವವು, ಅಲ್ಲಿ ಉಷ್ಟ್ರಪಕ್ಷಿಗಳು ವಾಸಿಸುವವು, ದೆವ್ವಗಳು ಕುಣಿದಾಡುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅಲ್ಲಿ ಮರುಭೂಮಿಯ ಕಾಡುಪ್ರಾಣಿಗಳು ಮಾತ್ರವೇ ವಾಸಿಸುವವು. ಜನರು ಬಾಬಿಲೋನಿನಲ್ಲಿರುವ ತಮ್ಮ ಮನೆಗಳಲ್ಲಿ ವಾಸಿಸುವದಿಲ್ಲ. ಅವರ ಮನೆಗಳಲ್ಲಿ ಗೂಬೆಗಳು ಮತ್ತು ಉಷ್ಟ್ರಪಕ್ಷಿಗಳು ವಾಸಮಾಡುವವು. ಕಾಡುಮೇಕೆಗಳು ಮನೆಯೊಳಗೆ ಆಡುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ಕಾಡುಮೃಗಗಳು ಅಲ್ಲಿ ಮಲಗುವುವು. ಅವರ ಮನೆಗಳು ನರಿಗಳಿಂದ ತುಂಬಿರುವುವು, ಅಲ್ಲಿ ಗೂಬೆಗಳು ವಾಸಿಸುವುವು ಮತ್ತು ಕಾಡುಮೇಕೆಗಳು ಅಲ್ಲಿ ಕುಣಿದಾಡುವುವು. ಅಧ್ಯಾಯವನ್ನು ನೋಡಿ |