ಯೆಶಾಯ 13:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಹಾ, ಬಹುಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ! ಇಗೋ, ಜನಾಂಗಗಳ ಆರ್ಭಟವು ಒಟ್ಟಿಗೆ ಕೂಡಿಕೊಂಡ ಅನೇಕ ರಾಜ್ಯಗಳ ಆರ್ಭಟದಂತೆ ಇದೆ! ಯೆಹೋವನು ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇಗೋ, ಬೆಟ್ಟಗುಡ್ಡಗಳಿಂದ ಕೇಳಿಬರುತ್ತಿದೆ ಜನಜಂಗುಳಿಯಂಥ ಗದ್ದಲ; ಒಟ್ಟಿಗೆ ಕೂಡಿಕೊಂಡ ದೇಶವಿದೇಶಗಳ ಆರ್ಭಟ; ಸಜ್ಜಾಗಿ ನಿಂತಿದೆ ಸೇನಾಧೀಶ್ವರ ಸರ್ವೇಶ್ವರನ ಸೈನ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಹಾ, ಬಹು ಜನಸಮೂಹವಿದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ! ಇಗೋ, ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗಗಳ ಆರ್ಭಟ! ಸೇನಾಧೀಶ್ವರನಾದ ಯೆಹೋವನು ಸೈನ್ಯವನ್ನು ಯುದ್ಧಕ್ಕಾಗಿ ಅಣಿಮಾಡುತ್ತಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಪರ್ವತಗಳಲ್ಲಿ ಒಂದು ದೊಡ್ಡ ಶಬ್ದ ಕೇಳಿಸುತ್ತದೆ. ಆ ಶಬ್ದಕ್ಕೆ ಕಿವಿಗೊಡಿರಿ. ದೊಡ್ಡ ಜನಸಮೂಹದ ಶಬ್ದದಂತೆ ಕೇಳಿಸುತ್ತದೆ. ಅನೇಕ ರಾಜ್ಯಗಳ ಜನರು ಒಟ್ಟಾಗಿ ಸೇರುತ್ತಿದ್ದಾರೆ. ಸರ್ವಶಕ್ತನಾದ ಯೆಹೋವನು ತನ್ನ ಸೈನ್ಯವನ್ನು ಒಟ್ಟುಗೂಡಿಸುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ. ಒಟ್ಟಿಗೆ ಕೂಡಿಕೊಂಡ ರಾಜ್ಯಗಳ ಜನಾಂಗಗಳ ಆರ್ಭಟ, ಸೇನಾಧೀಶ್ವರ ಯೆಹೋವ ದೇವರು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾರೆ. ಅಧ್ಯಾಯವನ್ನು ನೋಡಿ |