ಯೆಶಾಯ 13:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರು ಭಯಪಡುವರು. ಪ್ರಸವ ವೇದನೆಯಲ್ಲಿರುವ ಸ್ತ್ರೀಯಂತೆ ಯಾತನೆ, ಸಂಕಟಗಳನ್ನು ಅನುಭವಿಸುವರು. ಒಬ್ಬರನ್ನೊಬ್ಬರು ನೋಡಿ ವಿಸ್ಮಯಪಡುವರು. ಅವರ ಮುಖಗಳು ತಲ್ಲಣಗೊಂಡು ಬೆಂಕಿಯಿಂದ ಉರಿಯುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಭಯಭ್ರಾಂತರಾಗುವರು ಅವರೆಲ್ಲರು; ಆಕ್ರಮಿಸುವುವು ಅವರನ್ನು ಯಾತನೆ ವೇದನೆಗಳು. ಸಂಕಟಪಡುವರವರು ಹೆರುವ ಹೆಂಗಸಿನಂತೆ; ಒಬ್ಬರನ್ನೊಬ್ಬರು ನೋಡುವರು ದಿಗ್ಭ್ರಾಂತರಾದವರಂತೆ; ಅವರ ಮುಖಗಳು ಕೆಂಪೇರುವುವು ಬೆಂಕಿಯಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವರು ಬೆಚ್ಚಿಬೀಳುವರು, ಯಾತನೆವೇದನೆಗಳು ಅವರನ್ನಾಕ್ರವಿುಸುವವು. ಹೆರುವ ಹೆಂಗಸಿನಂತೆ ಸಂಕಟಪಡುವರು; ಒಬ್ಬರನ್ನೊಬ್ಬರು ನೋಡಿ ವಿಸ್ಮಯಪಡುವರು, ಅವರ ಮುಖಗಳು [ತಲ್ಲಣದಿಂದ] ಬೆಂಕಿಬೆಂಕಿಯಾಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಪ್ರತಿಯೊಬ್ಬರೂ ಭಯಪೀಡಿತರಾಗುವರು. ಯಾತನೆವೇದನೆಗಳು ಅವರನ್ನು ಆಕ್ರಮಿಸುವವು. ಪ್ರಸವವೇದನೆಯಿಂದ ನರಳುವ ಹೆಂಗಸಿನಂತೆ ಅವರ ಹೊಟ್ಟೆಯಲ್ಲಿ ನೋವು ಉಂಟಾಗುವದು; ಅವರ ಮುಖಗಳು ಬೆಂಕಿಯಂತೆ ಕೆಂಪಗಾಗುವವು. ಭಯದ ಮುಖವು ತಮ್ಮ ನೆರೆಯವರಲ್ಲಿಯೂ ಇರುವದನ್ನು ನೋಡಿ ಜನರು ಆಶ್ಚರ್ಯಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವರು ಭಯಪಡುವರು. ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವುವು. ಪ್ರಸವವೇದನೆಯಲ್ಲಿರುವ ಸ್ತ್ರೀಯರಂತೆ ಸಂಕಟಪಡುವರು. ಅವರು ಒಬ್ಬರಿಗೊಬ್ಬರು ಭ್ರಮೆ ಪಡುವರು. ಅವರ ಮುಖಗಳು ಜ್ವಾಲೆಯಂತಿರುವುವು. ಅಧ್ಯಾಯವನ್ನು ನೋಡಿ |