ಯೆಶಾಯ 13:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭೂಮಿಯನ್ನು ಹಾಳು ಮಾಡಿ, ಪಾಪಿಗಳನ್ನು ನಿರ್ಮೂಲಮಾಡುವುದಕ್ಕೆ ಆತನ ಕೋಪೋದ್ರೇಕದಿಂದಲೂ, ತೀಕ್ಷ್ಣವಾದ ರೋಷದಿಂದಲೂ ಕ್ರೂರವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇಗೋ, ಸರ್ವೇಶ್ವರನ ದಿನ ಬರುತ್ತಿದೆ ! ಭೂಮಿಯನ್ನು ಹಾಳುಮಾಡಲು, ಪಾಪಿಗಳನ್ನು ನಿರ್ಮೂಲಮಾಡಲು; ಕೋಪೋದ್ರೇಕದಿಂದ, ರೋಷಾವೇಶದಿಂದ, ಕ್ರೂರವಾಗಿ ಬರುತ್ತಿದೆ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇಗೋ, ಯೆಹೋವನ ದಿನವು ಬರುತ್ತಿದೆ; ಅದು ಭೂವಿುಯನ್ನು ಹಾಳುಮಾಡಿ ಪಾಪಿಗಳನ್ನು ನಿರ್ಮೂಲಪಡಿಸುವದಕ್ಕೆ [ಆತನ] ಕೋಪೋದ್ರೇಕದಿಂದಲೂ ತೀಕ್ಷ್ಣರೋಷದಿಂದಲೂ ಕ್ರೂರವಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭಯಂಕರವಾದ ದಿನವಾಗಿದೆ. ದೇವರು ಅತ್ಯಂತ ಕೋಪದಿಂದ ದೇಶವನ್ನೆಲ್ಲಾ ನಾಶಮಾಡುವನು; ದುಷ್ಟಜನರನ್ನೆಲ್ಲಾ ದೇಶವನ್ನು ಬಿಟ್ಟುಹೋಗುವಂತೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇಗೋ, ಯೆಹೋವ ದೇವರ ದಿನವು ಬರುತ್ತದೆ. ಅದು ಭೂಮಿಯನ್ನು ಹಾಳು ಮಾಡುವುದಕ್ಕೂ, ಅಲ್ಲಿಂದ ಪಾಪಿಗಳನ್ನು ನಿರ್ಮೂಲ ಮಾಡುವುದಕ್ಕೂ, ಕಡುಕೋಪದಿಂದಲೂ, ತೀಕ್ಷ್ಣರೋಷದಿಂದಲೂ ಕ್ರೂರವಾಗಿರುವುದು. ಅಧ್ಯಾಯವನ್ನು ನೋಡಿ |