Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಯಾಕೋಬ್ಯನನ್ನು ಕನಿಕರಿಸಿ, ಪುನಃ ಇಸ್ರಾಯೇಲರನ್ನು ಆರಿಸಿಕೊಂಡು, ಅವರನ್ನು ಅವರ ಸ್ವದೇಶಕ್ಕೆ ಸೇರಿಸುವನು; ಪರದೇಶಿಗಳು ಅವರೊಂದಿಗೆ ಕೂಡಿ ಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದಯೆತೋರಿಸುವರು ಸರ್ವೇಶ್ವರ ಯಕೋಬ್ಯರಿಗೆ, ಆರಿಸಿಕೊಳ್ಳುವರು ಮತ್ತೆ ಇಸ್ರಯೇಲರನ್ನೆ, ನೆಲೆಗೊಳಿಸುವರವರನ್ನು ತಾಯಿನಾಡಿನಲ್ಲೆ. ಹೊರನಾಡಿಗರು ಕೂಡಿಕೊಳ್ಳುವರು ಅವರೊಡನೆ, ಸೇರಿಕೊಳ್ಳುವರವರು ಯಕೋಬ ಮನೆತನಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಯಾಕೋಬ್ಯರನ್ನು ಕನಿಕರಿಸಿ ಮತ್ತೆ ಇಸ್ರಾಯೇಲ್ಯರನ್ನು ಆರಿಸಿಕೊಂಡು ಸ್ವದೇಶದಲ್ಲಿ ತಂಗಿಸಬೇಕೆಂದಿದ್ದಾನಷ್ಟೆ; ಪರದೇಶಿಗಳು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮುಂದಿನ ದಿವಸಗಳಲ್ಲಿ ಯೆಹೋವನು ಯಾಕೋಬನ ಮೇಲೆ ಮತ್ತೆ ಪ್ರೀತಿತೋರುವನು. ಯೆಹೋವನು ಮತ್ತೆ ಇಸ್ರೇಲರನ್ನು ಆರಿಸುವನು. ಆ ಸಮಯದಲ್ಲಿ ಅವರ ದೇಶವನ್ನು ಅವರಿಗೆ ಹಿಂತಿರುಗಿಸುವನು. ಆಗ ಯೆಹೂದ್ಯರಲ್ಲದವರು ಯೆಹೂದ್ಯರೊಂದಿಗೆ ಸೇರಿಕೊಳ್ಳುವರು. ಅವರೆಲ್ಲರೂ ಒಂದೇ ವಂಶದವರಾಗುವರು. ಅದು ಯಾಕೋಬನ ವಂಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಯಾಕೋಬ್ಯರನ್ನು ಕರುಣಿಸುವರು. ಇಸ್ರಾಯೇಲರನ್ನು ಪುನಃ ಆಯ್ದುಕೊಳ್ಳುವರು. ಅವರನ್ನು ಅವರ ಸ್ವಂತ ದೇಶದಲ್ಲಿ ಸೇರಿಸುವರು. ಪರದೇಶದವರು ಅವರೊಂದಿಗೆ ಕೂಡಿಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:1
65 ತಿಳಿವುಗಳ ಹೋಲಿಕೆ  

ನೀನು ಎದ್ದು ಚೀಯೋನನ್ನು ಕರುಣಿಸುವಿ. ಅದಕ್ಕೆ ಕೃಪೆತೋರಿಸುವ ಸಮಯ ಇದೇ; ನಿಯಮಿತ ಕಾಲವು ಬಂದಿದೆ.


ಮತ್ತೊಮ್ಮೆ ಹೀಗೆ ಸಾರಿ ಹೇಳು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ನನ್ನ ಪಟ್ಟಣಗಳಲ್ಲಿ ಶುಭವು ತುಂಬಿ ತುಳುಕುವುದು; ಯೆಹೋವನು ಇನ್ನು ಚೀಯೋನನ್ನು ಸಂತೈಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.”


“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮತ್ತು ಯೆಹೂದ್ಯರು ಉಭಯರೂ ಹಿಂಸೆಗೆ ಗುರಿಯಾಗಿದ್ದಾರೆ; ಅವರನ್ನು ಸೆರೆ ಒಯ್ದವರೆಲ್ಲರೂ ಅವರನ್ನು ಬಿಡಿಸಲೊಲ್ಲದೆ ಬಿಗಿಹಿಡಿದಿದ್ದಾರೆ.


ಆಕಾಶವೇ, ಹರ್ಷಧ್ವನಿಗೈ! ಭೂಮಿಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ, ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುವನು.”


ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ, ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ತಿರುಗಿ ಬರಮಾಡುವೆನು, ಇದು ಯೆಹೋವನ ನುಡಿ” ಎಂಬುದೇ.


ಯೆಹೋವನು ಹೀಗೆನ್ನುತ್ತಾನೆ, “ಇಸ್ರಾಯೇಲರು ಯೆಹೋವನ ಆಲಯಕ್ಕೆ ಶುದ್ಧಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವ ಪ್ರಕಾರ ಸಮಸ್ತ ಜನಾಂಗಗಳಲ್ಲಿ ಚದರಿಹೋಗಿರುವ ನಮ್ಮ ಸಹೋದರರನ್ನು ಕುದುರೆ, ತೇರು, ಪಲ್ಲಕಿ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಯೆಹೋವನ ನೈವೇದ್ಯಕ್ಕಾಗಿ ಯೆರೂಸಲೇಮೆಂಬ ನನ್ನ ಪರಿಶುದ್ಧಪರ್ವತಕ್ಕೆ ಕರೆತರುವರು.


ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಸಹ್ಯನೂ, ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆ ಹೇಳುತ್ತಾನೆ, “ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನನ್ನು ಪರಿಗ್ರಹಿಸಿರುವುದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.”


ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಇಸ್ರಾಯೇಲೇ, ಈಗ ಕೇಳು:


ನನ್ನ ಸೇವಕನಾದ ಇಸ್ರಾಯೇಲೇ, ನಾನು ಆರಿಸಿಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,


ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು, ಇಸ್ರಾಯೇಲು ಹೂಬಿಟ್ಟು ಚಿಗುರುವುದು, ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವುದು.”


ನನಗೆ ಕೃಪೆತೋರಿಸಿ ನನ್ನ ವೈರಿಗಳನ್ನು ಖಂಡಿಸಿಬಿಡು. ನನ್ನ ಪ್ರಾಣಕಂಟಕರನ್ನೆಲ್ಲಾ ಕಡಿದುಹಾಕು; ನಾನು ನಿನ್ನ ಸೇವಕನಲ್ಲವೇ.


ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ, ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ, ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ.


ರಾಜನಿರ್ಣಯ ಶಾಸನಗಳು ಪ್ರಕಟಿಸಲ್ಪಟ್ಟ ಪ್ರತಿಯೊಂದು ಸಂಸ್ಥಾನದಲ್ಲಿಯೂ ಪಟ್ಟಣದಲ್ಲಿಯೂ ಇದ್ದ ಯೆಹೂದ್ಯರಿಗೆ ಶುಭದಿನ ಉಂಟಾಯಿತು; ಅವರು ಸಂತೋಷದಿಂದಲೂ, ಉಲ್ಲಾಸದಿಂದಲೂ ಭಕ್ಷ್ಯಭೋಜನಮಾಡಿದರು. ದೇಶದ ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.


ಆತನು ಅನ್ಯಜನರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ” ಅಂದನು.


ಆತನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ಅಬ್ರಹಾಮನಿಗೂ ಅವನ ವಂಶದವರಿಗೂ ಯಾವಾಗಲೂ ದಯೆ ತೋರಿಸಬೇಕೆಂಬುದನ್ನು ನೆನಪಿಸಿಕೊಂಡು, ತನ್ನ ಸೇವಕನಾದ ಇಸ್ರಾಯೇಲನಿಗೆ ನೆರವಾಗಿದ್ದಾನೆ” ಎಂದಳು.


ನಾನು ಭೂಮಿಯ ಕಟ್ಟಕಡೆಯಲ್ಲಿ ಹಿಡಿದು ದಿಗಂತಗಳಿಂದ ಕರೆದ ಜನವೇ, “ನೀನು ನನ್ನ ಸೇವಕನು, ನಾನು ನಿನ್ನನ್ನು ಆರಿಸಿಕೊಂಡೆನು, ತಳ್ಳಲಿಲ್ಲ” ಎಂದು ನಾನು ಹೇಳಿ ಸಂಬೋಧಿಸಿದ ಪ್ರಜೆಯೇ,


ಯೆಹೋವನ ಈ ಮಾತನ್ನು ಕೇಳಿರಿ, “ಐಗುಪ್ತದ ಆದಾಯವೂ, ಕೂಷಿನ ವ್ಯಾಪಾರವೂ, ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು, ‘ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.’”


ಅವರಿಗೆ ಹಸಿವೆ ಬಾಯಾರಿಕೆಗಳು ಆಗುವುದಿಲ್ಲ, ಝಳವೂ ಬಿಸಿಲೂ ಬಡಿಯುವುದಿಲ್ಲ. ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರು ಸಿಕ್ಕುವ ಒರತೆಗಳ ಬಳಿಯಲ್ಲಿ ನಡೆಸುವನು.


ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ? ಒಂದು ವೇಳೆ ಮರೆತರು ಮರೆತಾಳು, ಆದರೆ ನಾನು ನಿನ್ನನ್ನು ಮರೆಯುವುದಿಲ್ಲ.


ಯೆಹೋವನು ಹೀಗೆನ್ನುತ್ತಾನೆ, “ಶೂರನ ಸೆರೆಯವರೂ ಅಪಹರಿಸಲ್ಪಡುವರು. ಭಯಂಕರನ ಕೊಳ್ಳೆಯೂ ತೆಗೆಯಲ್ಪಡುವುದು. ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು.


ನೀನು ಎಲ್ಲಾ ಕಡೆಗಳಲ್ಲಿಯೂ ಹಬ್ಬಿಕೊಳ್ಳುವಿ; ನಿನ್ನ ಸಂತಾನದವರು ಜನಾಂಗಗಳನ್ನು ವಶಮಾಡಿಕೊಂಡು ಹಾಳು ಪಟ್ಟಣಗಳನ್ನು ಜನಭರಿತವಾಗುವಂತೆ ಮಾಡುವರು.


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.


ಯೆಹೋವನನ್ನು ಅವಲಂಬಿಸಿದ ವಿದೇಶೀಯನು, ‘ಯೆಹೋವನು ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಅಗಲಿಸುವನು’ ಎಂದು ಮಾತನಾಡದಿರಲಿ; ಮತ್ತು ನಪುಂಸಕನು, ‘ಅಯ್ಯೋ, ನಾನು ಗೊಡ್ಡುಮರ’” ಎಂದು ಅಂದುಕೊಳ್ಳದಿರಲಿ.


ವಿದೇಶೀಯರು ನಿನ್ನ ಪೌಳಿಗೋಡೆಗಳನ್ನು ಪುನಃ ಕಟ್ಟುವರು, ಅವರ ಅರಸರು ನಿನ್ನನ್ನು ಆರಾಧಿಸುವರು; ನನ್ನ ಕೋಪದಿಂದ ನಿನ್ನನ್ನು ಹೊಡೆದು, ನನ್ನ ಕೃಪೆಯಿಂದ ನಿನ್ನನ್ನು ಕರುಣಿಸಿದ್ದೇನಷ್ಟೆ.


ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು.


ನಿಮಗೂ, ನಿಮ್ಮ ಮಧ್ಯದಲ್ಲಿ ಪ್ರವಾಸ ಮಾಡುತ್ತಾ, ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ದೇಶವನ್ನು ಬಾಧ್ಯವಾಗಿ ಹಂಚಬೇಕು. ಅವರು ಇಸ್ರಾಯೇಲರ ಮಧ್ಯದಲ್ಲಿ ನಿಮಗೆ ಸ್ವದೇಶಿಗಳಂತೆಯೇ ಇರಬೇಕು. ಇಸ್ರಾಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸ್ವಾಸ್ತ್ಯವಾಗಲಿ.


ಅದು ಕಲ್ಲುಕುಪ್ಪೆಯಾಗಿ ಹೋಗಿದ್ದರೂ, ಅದು ನಿನ್ನ ಸೇವಕರಿಗೆ ಅತಿಪ್ರಿಯವಾಗಿದೆ; ಅದರ ಧೂಳಿಗೆ ಅವರು ಮರಗುತ್ತಾರೆ.


ಆ ದಿನದಲ್ಲಿ, ಸೇನಾಧೀಶ್ವರನಾದ ಯೆಹೋವನ ಭಕ್ತರೆಂದು ಪ್ರಮಾಣಮಾಡಿ, ಕಾನಾನಿನ ಭಾಷೆಯನ್ನು ಆಡುವವರಿಂದ ತುಂಬಿದ ಐದು ಪಟ್ಟಣಗಳು ಐಗುಪ್ತ ದೇಶದಲ್ಲಿರುವವು. ಇವುಗಳಲ್ಲಿ ಒಂದರ ಹೆಸರು “ನಾಶಪುರ.”


ಸಮುದ್ರ ಹಾಗೂ ಅಡವಿಯ ವಿಷಯವಾದ ದೈವೋಕ್ತಿ. ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿಯಂತೆ ಅರಣ್ಯದ ಕಡೆಯ ಭಯಂಕರ ದೇಶದಿಂದ (ದೊಡ್ಡ ಅಪಾಯ) ಬರುತ್ತದೆ ಎಂಬ


ಯುವತಿಯೇ, ಬಾಬೆಲ್ ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕುಳಿತುಕೋ, ಕಸ್ದೀಯರ ಯುವತಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ! ನಿನ್ನನ್ನು ಇನ್ನು ಕೋಮಲೆ ಮತ್ತು ಸುಕುಮಾರಿ ಎಂದು ಕರೆಯುವುದಿಲ್ಲ.


‘ಇಸ್ರಾಯೇಲರನ್ನು ಬಡಗಣ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಉದ್ಧರಿಸಿದ ಯೆಹೋವನ ಜೀವದಾಣೆ’ ಎಂದು ಪ್ರಮಾಣಮಾಡುವರು; ನಾನು ಅವರ ಪೂರ್ವಿಕರಿಗೆ ದಯಪಾಲಿಸಿದ ದೇಶಕ್ಕೆ ಅವರನ್ನು ಹಿಂದಿರುಗಿಸುವೆನಷ್ಟೆ” ಎಂದು ಯೆಹೋವನು ಘೋಷಿಸುತ್ತಾನೆ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಆ ದಿನದಲ್ಲಿ ಅವರ ಮೇಲೆ ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದುಬಿಟ್ಟು, ಕಣ್ಣಿಗಳನ್ನು ಕಿತ್ತುಹಾಕುವೆನು; ಇನ್ನು ಅನ್ಯರು ಅವರನ್ನು ಅಡಿಯಾಳಾಗಿ ಮಾಡಿಕೊಳ್ಳರು.


ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.


ನಾವು ನಿಂದೆಯನ್ನು ಕೇಳಿ ನಾಚಿಕೆಗೊಂಡೆವು, ‘ಯೆಹೋವನ ಆಲಯದ ಪವಿತ್ರಸ್ಥಾನಗಳನ್ನು ಮ್ಲೇಚ್ಛರು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಮುಚ್ಚಿಕೊಂಡಿದೆ’ ಎಂಬುದಾಗಿ ಅಂದುಕೊಳ್ಳುತ್ತಿರೋ?


ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೊಂಡು, ನಿನ್ನ ಸಂಗಡ ಎಂದಿಗೂ ತಪ್ಪದ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು