Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರೆಲ್ಲರು ನಿನ್ನನ್ನು ಕುರಿತು, ‘ನೀನು ಸಹ ನಮ್ಮ ಹಾಗೆ ಬಲಹೀನನಾಗಿದ್ದೀ? ನಮಗೆ ಸರಿಸಮಾನನಾಗಿದ್ದೀ?’ ಎಂದು ಮಾತನಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇವರೆಲ್ಲರು ಇಂತೆನ್ನುವರು ನಿನಗೆ : ‘ನೀನು ಸಹ ದುರ್ಬಲ ನಾದೆ ನಮ್ಮ ಹಾಗೆ ನೀನೂ ಸರಿಸಮಾನನಾದೆ ನಮಗೆ’.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇವರೆಲ್ಲಾ ನಿನ್ನನ್ನು ಕುರಿತು - ನೀನು ಸಹ ನಮ್ಮ ಹಾಗೆ ಬಲಹೀನನಾದೆಯಾ? ನಮಗೆ ಸರಿಸಮಾನನಾದೆಯೋ? ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಈಗ ನೀನು ನಮ್ಮಂತೆಯೇ ಸತ್ತ ಶರೀರವಾಗಿರುವೆ. ಈಗ ನೀನು ನಮ್ಮಂತೆಯೇ ಆಗಿರುವೆ” ಎಂದು ಅವರು ನಿನ್ನನ್ನು ಗೇಲಿ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರೆಲ್ಲರು, “ನಮ್ಮ ಹಾಗೆ ನೀನು ಸಹ ಬಲಹೀನನಾಗಿದ್ದೀ. ನೀನು ನಮ್ಮ ಸಮಾನನಾಗಿದ್ದೀ,” ಎಂದು ಮಾತನಾಡಿ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:10
7 ತಿಳಿವುಗಳ ಹೋಲಿಕೆ  

ಪಾತಾಳದೊಳಗಿನ ಬಲಿಷ್ಠ ಶೂರರು ಅದನ್ನೂ, ಅದರ ಸಹಾಯಕರನ್ನೂ ನೋಡಿ, ‘ಇವರು ಸುನ್ನತಿಯಿಲ್ಲದವರಾಗಿಯೂ, ಖಡ್ಗದಿಂದ ಹತರಾದವರಾಗಿಯೂ ಇಳಿದು ಬಂದಿದ್ದಾರೆ’ ಅಂದುಕೊಳ್ಳುವರು.


ಏಕೆಂದರೆ ಮೂಢನು ಹೇಗೋ ಹಾಗೆಯೇ ಜ್ಞಾನಿಯೂ ಬಹಳ ದಿನಗಳವರೆಗೆ ಮರೆತುಹೋಗುವನು. ಈಗಿನ ಜನರು ಮುಂದಿನ ಕಾಲದೊಳಗಾಗಿಯೇ ಮರೆತುಹೋಗುವರು. ಆಹಾ! ಮೂಢನಂತೆ ಜ್ಞಾನಿಯೂ ಸಾಯುವನು.


ವಿವೇಕಹೀನ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ, ನಶಿಸಿ ಹೋಗುವ ಪಶುಗಳಿಗೆ ಸಮಾನವಾಗಿ ಇಲ್ಲವಾಗುತ್ತಾನೆ.


“ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲಿ ಸೇರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು