ಯೆಶಾಯ 14:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಹಾ, ಉದಯನಕ್ಷತ್ರವೇ, ಉದಯಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ! ಜನಾಂಗಗಳನ್ನು ಸ್ವಾಧೀನಪಡಿಸಿಕೊಂಡ ನೀನು ಭೂಮಿಗೆ ಹೇಗೆ ತಳಲ್ಪಟ್ಟಿದ್ದೀ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಮುಂಜಾನೆಯ ನಕ್ಷತ್ರವೆ, ಉದಯ ಕುಮಾರನೆ, ಆಗಸದಿಂದ ಹೇಗೆ ಬಿದ್ದೆ? ರಾಷ್ಟ್ರಗಳನ್ನು ಗೆದ್ದ ನೀನು, ನೆಲಕ್ಕೆ ಅದು ಹೇಗೆ ಉರುಳಿದೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆಹಾ, ಉದಯನಕ್ಷತ್ರವೇ, ಬೆಳ್ಳಿಯೇ, ಆಕಾಶದಿಂದ ಹೇಗೆ ಬಿದ್ದೆ! ಜನಾಂಗಗಳನ್ನು ಕೆಡವಿದ ನೀನು ಕಡಿಯಲ್ಪಟ್ಟು ನೆಲಕ್ಕೆ ಉರುಳಿದೆಯಲ್ಲಾ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನೀನು ಉದಯ ನಕ್ಷತ್ರದಂತೆ ಇರುವೆ. ಆದರೆ ನೀನು ಆಕಾಶದಿಂದ ಕೆಳಗೆ ಬಿದ್ದಿರುವೆ. ಹಿಂದಿನ ಕಾಲದಲ್ಲಿ ಲೋಕದ ಎಲ್ಲಾ ರಾಜ್ಯಗಳು ನಿನಗೆ ಅಡ್ಡಬಿದ್ದವು. ಆದರೆ ಈಗ ನೀನು ಉರುಳಿಸಲ್ಪಟ್ಟಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಮುಂಜಾನೆಯ ನಕ್ಷತ್ರವೇ, ಉದಯ ಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಬಿದ್ದೆ? ಅಧ್ಯಾಯವನ್ನು ನೋಡಿ |