Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿನ್ನನ್ನು ನೋಡುವವರು ನಿನ್ನನ್ನು ದಿಟ್ಟಿಸಿ ನೋಡಿ, ಯೋಚಿಸುತ್ತಾ, ‘ಭೂಮಿಯನ್ನು ನಡುಗಿಸಿ, ರಾಜ್ಯಗಳನ್ನು ಕದಲಿಸಿ ಪಟ್ಟಣಗಳನ್ನು ನಾಶಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸತ್ತವರು ದಿಟ್ಟಿಸಿ ನಿನ್ನನು: ‘ಭುವಿಯನು ನಡುಗಿಸಿದವನು, ರಾಜ್ಯಗಳನು ಕದಲಿಸಿದವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿನ್ನನ್ನು ಕಂಡವರು ದಿಟ್ಟಿಸಿ ನೋಡಿ ಯೋಚಿಸುತ್ತಾ - ಭೂವಿುಯನ್ನು ನಡುಗಿಸಿ ರಾಜ್ಯಗಳನ್ನು ಕದಲಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಿನ್ನನ್ನು ನೋಡುವ ಜನರು ನಿನ್ನ ಬಗ್ಗೆ ಯೋಚಿಸುವರು. ನೀನು ಕೇವಲ ಸತ್ತ ಹೆಣವೆಂದು ತಿಳಿದು, “ಭೂಮಿಯ ಮೇಲಿನ ರಾಜ್ಯಗಳಲ್ಲಿ ಮಹಾಭೀತಿಯನ್ನುಂಟು ಮಾಡಿದವನು ಇವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಿನ್ನನ್ನು ಕಂಡವರು ದಿಟ್ಟಿಸಿ ನೋಡಿ, ನಿನ್ನ ಗತಿಯನ್ನು ಯೋಚಿಸುತ್ತಾ, “ಭೂಮಿಯನ್ನು ನಡುಗಿಸಿ, ರಾಜ್ಯಗಳನ್ನು ಕದಲಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:16
13 ತಿಳಿವುಗಳ ಹೋಲಿಕೆ  

ಆಹಾ, ಲೋಕವನ್ನೆಲ್ಲಾ ಹೊಡೆದ ಚಮಟಿಗೆಯು ಮುರಿದು ತುಂಡುತುಂಡಾಯಿತು! ಬಾಬೆಲ್ ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ!


ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ, ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು.


“ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು, ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ” ಎಂದು ಹೇಳುವರು.


ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧ ಸ್ಥಳಗಳಿಗೆ ತಳ್ಳಲ್ಪಡುವೆ.


ಲೋಕವನ್ನು ಕಾಡನ್ನಾಗಿ ಮಾಡಿ, ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಈ ಮನುಷ್ಯನೋ?’ ಎಂದುಕೊಳ್ಳುವರು.


ನಿನ್ನ ಮೇಲೆ ಹೊಲಸನ್ನು ಹಾಕಿ ಮಾನಕಳೆದು ನಿನ್ನನ್ನು ಎಲ್ಲರೂ ಪರಿಹಾಸ್ಯ ಮಾಡುವಂತೆ ಮಾಡುವೆನು.


ಅವರು ಅರಸರನ್ನು ಧಿಕ್ಕರಿಸಿ ಅಪಹಾಸ್ಯ ಮಾಡುವರು. ಸರದಾರರು ಅಧಿಪತಿಗಳು ಅವರ ಪರಿಹಾಸ್ಯಕ್ಕೆ ಗುರಿಯಾಗುವರು. ಒಂದೊಂದು ಕೋಟೆಯನ್ನೂ ಆಕ್ರಮಿಸಿ ಧೂಳಿಪಟ ಮಾಡುವರು.


ಅವರ ಗೋರಿಗಳು ಅಧೋಲೋಕದ ಅಗಾಧ ಸ್ಥಳಗಳಲ್ಲಿ ಹರಡಿಕೊಂಡಿವೆ; ಸಂಹೃತರಾದವರು, ಖಡ್ಗದಿಂದ ಹತರಾದವರು ಗೋರಿಯ ಸುತ್ತಲಿದ್ದಾರೆ; ಜೀವಲೋಕದಲ್ಲಿ ಹತರಾದವರು ಜೀವಿತರ ದೇಶದಲ್ಲಿ ಭಯವನ್ನು ಉಂಟುಮಾಡಿದ್ದಾರೆ.


ಸುನ್ನತಿಯಿಲ್ಲದವರಲ್ಲಿ ಶೂರರು ಜೀವಲೋಕದೊಳಗೆ ಬಲಿಷ್ಠರಿಗೂ ಭೀಕರರಾಗಿದ್ದು ಹತರಾಗಿ, ಆಯುಧ ಸಹಿತ ಪಾತಾಳಕ್ಕೆ ಇಳಿದು, ಕತ್ತಿಗಳನ್ನು ತಲೆದಿಂಬು ಮಾಡಿಕೊಂಡು, ತಮ್ಮ ಎಲಬುಗಳ ಮೇಲೆ ತಮ್ಮ ದುಷ್ಕೃತ್ಯಗಳ ಭಾರವನ್ನು ಹೊತ್ತುಕೊಂಡಿದ್ದಾರೋ ಅವರ ನಡುವೆ ಮೆಷೆಕಿನವರೂ ತೂಬಲಿನವರೂ ಒರಗದೆ ಹೋಗುವರೇ?


ಹೀಗಿರಲು, ತಮ್ಮ ಬಲೆಗೆ ಸಿಕ್ಕಿದ್ದನ್ನು ಅವರು ನಿತ್ಯವೂ ಸುರಿಯುತ್ತಿರಲೋ, ಜನಾಂಗಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು