ಯೆಶಾಯ 14:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆದರೆ ನೀನಾದರೋ ನಿನ್ನ ಸಮಾಧಿಗೆ ದೂರವಾಗಿ ಕೆಟ್ಟ ಕೊಂಬೆಯಂತೆ ಬಿಸಾಡಲ್ಪಟ್ಟಿದ್ದೀ; ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಹೊದಿಕೆಯಂತೆಯೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಿನ್ನನ್ನಾದರೊ ಕೊಳೆತ ಕಡ್ಡಿಯಂತೆ ಬಿಸಾಡಿಹರು ಕೆಳಕೆ ಗೋರಿಯಿಲ್ಲದ ನಿನ್ನ ಶವ ಈಡಾಗಿದೆ ಪರರ ತುಳಿತಕ್ಕೆ, ಕತ್ತಿ ತಿವಿದ, ಕಲ್ಲುಗುಂಡಿಗೆ ಪಾಲಾದ ಹೆಣಗಳೇ ನಿನ್ನ ಹೊದಿಕೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನೀನಾದರೋ ನಿನ್ನ ಗೋರಿಗೆ ದೂರವಾಗಿ ಕೆಟ್ಟ ಮೊಳಿಕೆಯಂತೆ ಬಿಸಾಡಲ್ಪಟ್ಟಿದ್ದೀ; ನಿನ್ನ ಶವವು ತುಳಿತಕ್ಕೆ ಈಡಾಗಿದೆ, ಕತ್ತಿ ತಿವಿದು ಗುಂಡಿಯ ಕಲ್ಲುಗಳ ಪಾಲಾದ ಹತರೇ ಅದಕ್ಕೆ ಹೊದಿಕೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದರೆ ದುಷ್ಟ ಅರಸನಾದ ನೀನು ನಿನ್ನ ಸಮಾಧಿಯಿಂದ ತೆಗೆದುಹಾಕಲ್ಪಟ್ಟಿರುವೆ. ಮರದಿಂದ ಬೇರ್ಪಡಿಸಿದ ಕೊಂಬೆಯಂತೆ ನೀನಿರುವೆ. ಯುದ್ಧದಲ್ಲಿ ಸತ್ತ ಸೈನಿಕನಂತೆ ನೀನಿರುವೆ. ಬೇರೆ ಸೈನಿಕರು ಅವನ ಮೇಲೆ ನಡೆದಾಡುವರು. ಈಗ ನೀನು ಸಾಧಾರಣ ಹೆಣದಂತೆ ಇರುವೆ. ಸಮಾಧಿಯ ಬಟ್ಟೆಗಳಿಂದ ನೀನು ಸುತ್ತಲ್ಪಟ್ಟಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದರೆ ನೀನು ತಿರಸ್ಕರಿಸಿದ ಕೊಂಬೆಯಂತೆಯೂ, ಖಡ್ಗ ತಿವಿದು ಕಲ್ಲುಗುಂಡಿಗೆ ಪಾಲಾದ ಹೆಣಗಳ ಹೊದಿಕೆಯಂತೆಯೂ, ಪರರ ತುಳಿತಕ್ಕೆ ಈಡಾಗಿ, ಸಮಾಧಿಯೊಳಗಿಂದ ಹೊರಗೆ ಬಿಸಾಡಿರುವ ಶವದ ಹಾಗಿದ್ದೀ. ಅಧ್ಯಾಯವನ್ನು ನೋಡಿ |