Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕಾಲ ಕೆಳಗೆ ತುಳಿಯಲ್ಪಟ್ಟ ಹೆಣದಂತೆಯೂ, ನೀನು ಆ ಅರಸರೊಡನೆ ಸಮಾಧಿಗೆ ಸೇರುವುದಿಲ್ಲ, ಏಕೆಂದರೆ ನೀನು ದೇಶವನ್ನು ಹಾಳುಮಾಡಿ, ನಿನ್ನ ಪ್ರಜೆಯನ್ನು ಕೊಂದುಹಾಕಿದಿ. ದುಷ್ಟರ ಸಂತಾನವು ಎಂದೆಂದಿಗೂ ಜ್ಞಾಪಕಕ್ಕೆ ಬರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸ್ವಂತ ಜನರನೇ ಕೊಂದ ನಿನಗೆ ಸ್ವಂತ ನಾಡನೇ ನಾಶಗೈದ ನಿನಗೆ ಸಿಗದು ರಾಜ್ಯವೈಭವದ ಸಂಸ್ಕಾರ ಗೋರಿಗೆ, ‘ಹೇಳಹೆಸರಿಲ್ಲದ ಗತಿ ದುರುಳರ ಸಂತಾನಕೆ’.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನೀನು ಆ ರಾಜರಂತೆ ಗೋರಿಗೆ ಸೇರುವದಿಲ್ಲ; ನಿನ್ನ ಪ್ರಜೆಯನ್ನು ಕೊಂದು ನಿನ್ನ ದೇಶವನ್ನು ಹಾಳುಮಾಡಿದ್ದೀ, ದುಷ್ಟರ ಸಂತಾನವು ನಿರಂತರವೂ ನಿರ್ನಾಮವಾಗಿರುವದಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಬೇರೆ ಅನೇಕ ಅರಸರು ಸತ್ತುಹೋದರು. ಅವರೆಲ್ಲರಿಗೂ ಸ್ವಂತ ಸಮಾಧಿ ಇದೆ. ಆದರೆ ನೀನು ಅವರೊಂದಿಗೆ ಸೇರಲಾರೆ. ಯಾಕೆಂದರೆ ನಿನ್ನ ರಾಜ್ಯವನ್ನು ನೀನೇ ನಾಶಮಾಡಿರುವೆ. ನೀನು ನಿನ್ನ ಜನರನ್ನೇ ಸಾಯಿಸಿರುವೆ. ಆದರೆ ನೀನು ನಾಶಮಾಡಿದಂತೆ ನಾಶಮಾಡಲು ನಿನ್ನ ಮಕ್ಕಳಿಗೆ ಅವಕಾಶಕೊಡಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೀನು ಆ ರಾಜರಂತೆ ಸಮಾಧಿಗೆ ಸೇರದಿರುವಿ. ಏಕೆಂದರೆ ನಿನ್ನ ದೇಶವನ್ನು ನೀನು ನಾಶಮಾಡಿ, ನಿನ್ನ ಜನರನ್ನು ಕೊಂದುಹಾಕಿದಿ. ದುಷ್ಟರ ಸಂತಾನವು ನಿರಂತರವೂ ನಿರ್ನಾಮವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:20
13 ತಿಳಿವುಗಳ ಹೋಲಿಕೆ  

ನೀನು ಅವರನ್ನು ಸಂಹರಿಸಿ, ಭೂಮಿಯ ಮೇಲೆ ಅವರ ಸಂತತಿಯೇ ಇಲ್ಲದಂತೆ ಮಾಡುವಿ; ಅವರ ವಂಶದವರು ಮನುಷ್ಯರೊಳಗೆ ಉಳಿಯುವುದೇ ಇಲ್ಲ.


ಅವನಿಗೆ ಸ್ವಜನರಲ್ಲಿ ಮಗನಾಗಲಿ, ಮೊಮ್ಮಗನಾಗಲಿ ಇರುವುದಿಲ್ಲ. ಅವನು ವಾಸಿಸುವ ಸ್ಥಳದಲ್ಲಿ ಯಾರೂ ಉಳಿಯುವುದಿಲ್ಲ.


ಅವನ ಸಂತತಿಯು ನಿರ್ಮೂಲವಾಗಲಿ; ಎರಡನೆಯ ತಲೆಯಲ್ಲಿಯೇ ಅದು ನಿರ್ನಾಮವಾಗಿ ಹೋಗಲಿ.


ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು.


ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.


ಅವನ ವಂಶವೃಕ್ಷದ ಬೇರುಗಳು ಒಣಗುವುದು, ಅದರ ರೆಂಬೆಯು ಮೇಲೆ ಬಾಡುವುದು.


ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹಳ ವರ್ಷ ಬದುಕಿದವನಿಗೆ ಸಂತೃಪ್ತಿಯೂ, ಉತ್ತರಕ್ರಿಯೆಯೂ ಇಲ್ಲದಿದ್ದರೆ, ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು.


ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.


ಇಗೋ, ಆತನು ವಿವೇಕಿ, ತನ್ನ ಮಾತನ್ನು ಹಿಂದಕ್ಕೆ ತೆಗೆಯದೆ ಕೇಡನ್ನು ಬರಮಾಡುವನು. ಕೆಡುಕರ ಮನೆತನಕ್ಕೂ, ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.


ಸೇವಕರು ಶವವನ್ನು ಸಮಾಧಿಮಾಡುವುದಕ್ಕಾಗಿ ಹೋದರು. ಆದರೆ ಅವರಿಗೆ ಆಕೆಯ ತಲೆಬುರುಡೆ, ಕೈಕಾಲುಗಳ ಹೊರತಾಗಿ ಬೇರೇನೂ ಸಿಕ್ಕಲಿಲ್ಲ.


ಅವನ ಸ್ಮರಣೆಯು ಭೂಮಿಯಲ್ಲಿ ಅಳಿದುಹೋಗುವುದು, ಅವನ ಹೆಸರು ಹೊರಗಣ ಪ್ರಾಂತ್ಯಗಳಲ್ಲಿಯೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು