Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ನಾನು ಆ ಪ್ರದೇಶವನ್ನು ಜವುಗು ನೆಲವನ್ನಾಗಿಯೂ, ಗೂಬೆಗಳ ಸೊತ್ತನ್ನಾಗಿಯೂ ಮಾಡುವೆನು. ನಾಶವೆಂಬ ಬರಲಿನಿಂದ ಗುಡಿಸಿಬಿಡುವೆನು” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಪರಿವರ್ತಿಸುವೆನಾ ನಾಡನು ಜವುಗು ನೆಲವನ್ನಾಗಿ, ಅಹುದು, ಮುಳ್ಳುಹಂದಿಗಳ ರೊಪ್ಪವನ್ನಾಗಿ, ಗುಡಿಸಿಬಿಡುವೆನು ನಾಶವೆಂಬ ಪೊರಕೆಯಿಂದ ಪೂರ್ತಿಯಾಗಿ".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮತ್ತು ಆ ಪ್ರದೇಶವನ್ನು ಜವುಗುನೆಲವನ್ನಾಗಿಯೂ ಮುಳ್ಳುಹಂದಿಗೆ ಸೊತ್ತನ್ನಾಗಿಯೂ ಮಾಡಿ ನಾಶನವೆಂಬ ಬರಲಿನಿಂದ ಗುಡಿಸಿಬಿಡುವೆನು ಎಂದು ಸೇನಾಧೀಶ್ವರನಾದ ಯೆಹೋವನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆಹೋವನು ಹೇಳುವುದೇನೆಂದರೆ: “ನಾನು ಬಾಬಿಲೋನನ್ನು ಪ್ರಾಣಿಗಳ ವಾಸಸ್ಥಳವನ್ನಾಗಿ ಬದಲಾಯಿಸುವೆನು. ಆ ಸ್ಥಳವು ಜವುಗು ನೆಲವಾಗಿರುವುದು. ‘ನಾಶನವೆಂಬ ಪೊರಕೆಯಿಂದ’ ಅದನ್ನು ಗುಡಿಸುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ಅದನ್ನು ಮುಳ್ಳುಹಂದಿಗಳ ನಿವಾಸವಾಗಿಯೂ, ಕೊಳಚೆ ಪ್ರದೇಶವನ್ನಾಗಿಯೂ ಪರಿವರ್ತಿಸುವೆನು. ನಾಶನದ ಕಸಬರಿಗೆಯಿಂದ ಅದನ್ನು ಗುಡಿಸುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:23
17 ತಿಳಿವುಗಳ ಹೋಲಿಕೆ  

ಜನಾಂಗಗಳ ಪಶುಗಳೆಲ್ಲಾ ಮಂದೆಮಂದೆಯಾಗಿ ಅದರ ಮಧ್ಯದಲ್ಲಿ ಮಲಗಿಕೊಳ್ಳುವವು; ಕೊಕ್ಕರೆಯೂ, ಮುಳ್ಳುಹಂದಿಯೂ ಹಟ್ಟಿಗಳಲ್ಲಿ ವಾಸಮಾಡಿಕೊಳ್ಳುವವು. ಗೂಬೆಯು ಕಿಟಕಿಗಳಲ್ಲಿ ಮನೆಕಂಬಗಳ ಮೇಲೆ ಚಿಲಿಪಿಲಿ ಗಾನವು ತಂಗುವವು; ಕಾಗೆಗಳ ಕೂಗು ಹೊಸ್ತಿಲುಗಳಲ್ಲಿ ಕೇಳುವುದು; ದೇವದಾರು ಹಲಿಗೆಯ ಹೊದಿಕೆಯು ಕೀಳಲ್ಪಡುವುದು.


ಅವನ ಹಿಂದೆ ಎರಡನೆಯ ದೇವದೂತನು ಬಂದು, “ಬಿದ್ದಳು! ಬಿದ್ದಳು! ಬಾಬೆಲೆಂಬ ಮಹಾನಗರಿಯು ಬಿದ್ದಳು, ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು.


ಆದುದರಿಂದ ಯಾರೊಬ್ಬಾಮನೇ ಕೇಳು, ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು. ನಿನ್ನ ಕುಟುಂಬದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಸಂಹರಿಸಿಬಿಡುವೆನು. ಒಬ್ಬನು ಕಸವನ್ನು ಗುಡಿಸಿ ತೆಗೆದುಹಾಕುವಂತೆ ನಾನು ನಿನ್ನ ಮನೆಯವರನ್ನು ತೆಗೆದುಹಾಕುವೆನು.


ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು.


ನೂಲು ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರ್ಯವನ್ನೂ, ಅಹಾಬನ ಮನೆಯನ್ನೂ ನೆಲಸಮಮಾಡಿದಂತೆ, ಯೆರೂಸಲೇಮನ್ನೂ ಅದರಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿ ಬೋರಲು ಹಾಕುವೆನು.


ಗೋಳಾಡಿರಿ! ಏಕೆಂದರೆ ಯೆಹೋವನ ದಿನವು ಸಮೀಪಿಸಿತು. ಅದು ಸರ್ವಶಕ್ತನಿಂದ ನಾಶವಾಗುವಂತೆ ಬರುವುದು.


ಅದು ಎಂದಿಗೂ ನಿವಾಸ ಸ್ಥಳವಾಗದು. ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಯಾವ ಅರಬಿಯನೂ ಗುಡಾರ ಹಾಕನು ಅಥವಾ ಕುರುಬರು ಮಂದೆಯನ್ನು ತಂಗಿಸರು.


ಸಮುದ್ರ ಹಾಗೂ ಅಡವಿಯ ವಿಷಯವಾದ ದೈವೋಕ್ತಿ. ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿಯಂತೆ ಅರಣ್ಯದ ಕಡೆಯ ಭಯಂಕರ ದೇಶದಿಂದ (ದೊಡ್ಡ ಅಪಾಯ) ಬರುತ್ತದೆ ಎಂಬ


ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬರುತ್ತಿದೆ, ಅದು ಬಾಬೆಲ್ ದೇಶವನ್ನು ಹಾಳುಮಾಡುವುದು, ಅಲ್ಲಿ ಯಾರೂ ವಾಸಿಸರು, ಪಶುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ.


ಲೋಕದ ಕಟ್ಟಕಡೆಯಿಂದ ಬಾಬಿಲೋನಿಗೆ ಬನ್ನಿರಿ, ಅದರ ಕಣಜಗಳನ್ನು ತೆರೆಯಿರಿ; ಪಟ್ಟಣವನ್ನು ಹಾಳುದಿಬ್ಬಗಳಾಗಿ ಮಾಡಿ ಪೂರ್ಣವಾಗಿ ನಾಶಪಡಿಸಿರಿ; ಏನೂ ಉಳಿಯದಿರಲಿ.


‘ಯೆಹೋವನೇ, ನೀನು ಈ ಸ್ಥಳವನ್ನು ನಿರ್ಮೂಲಮಾಡಬೇಕೆಂದು ಉದ್ದೇಶಿಸಿ, ಇದು ಜನರಿಗೂ ಪಶುಗಳಿಗೂ ನೆಲೆಯಾಗದೆ ಸದಾ ಹಾಳಾಗಿಯೇ ಇರಲಿ ಎಂದು ನುಡಿದಿದ್ದೀಯಲ್ಲಾ’ ಎಂಬುದಾಗಿ ಅರಿಕೆಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು