ಯೆಶಾಯ 14:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ; ಏಕೆಂದರೆ ನಾಗರ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಸಂತತಿಯು ಹಾರುವ ಸರ್ಪವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 “ನಲಿಯದಿರಿ, ಎಲೈ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿಯಿತೆಂದು. ಹಾವು ಸತ್ತರೂ ಅದರ ಮೂಲದಿಂದ ಹುಟ್ಟುವುದು ಕ್ರೂರ ಕಾಳಿಂಗವು, ಅದರ ಮೊಟ್ಟೆಯಿಂದ ಹೊರಬರುವುದು ಹಾರುವ ಘಟಸರ್ಪವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ; ಹಾವಿನ ಬೀಜದಿಂದ ಮಹಾ ನಾಗವುಂಟಾಗುವದು, ಆ ಬೀಜದ ಸಂತತಿಯು ಹಾರುವ ಅಗ್ನಿಮಯಸರ್ಪವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಫಿಲಿಷ್ಟಿಯ ದೇಶವೇ, ನಿನ್ನನ್ನು ಹೊಡೆದ ಅರಸನು ಸತ್ತದ್ದಕ್ಕಾಗಿ ನೀನು ಸಂತೋಷಗೊಂಡಿರುವೆ. ಆದರೆ ನೀನು ಸಂತೋಷಗೊಳ್ಳಬಾರದು. ಅವನ ರಾಜ್ಯಭಾರವು ಅಂತ್ಯವಾಯಿತು ಎಂಬುದು ಸತ್ಯ. ಆದರೆ ಅರಸನ ಮಗನು ರಾಜ್ಯವಾಳುವನು. ಒಂದು ಹಾವು ಇನ್ನೊಂದು ಭಯಂಕರ ಹಾವನ್ನು ಹೆರುವಂತೆ ಅದು ಇರುವದು. ಈ ಹೊಸ ಅರಸನು ನಿಮಗೆ ವೇಗವಾದ ಮತ್ತು ಅಪಾಯಕರವಾದ ಹಾವಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದು ಹೋಯಿತೆಂದು ನೀವು ಉಲ್ಲಾಸಿಸಬೇಡಿರಿ. ಏಕೆಂದರೆ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಫಲವು ಹಾರುವ ವಿಷಸರ್ಪವೇ. ಅಧ್ಯಾಯವನ್ನು ನೋಡಿ |