Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಬಡವರಲ್ಲಿ ಹಿರಿಯ ಮಕ್ಕಳು ಆಹಾರವನ್ನು ಕಂಡುಕೊಳ್ಳುವರು. ದಿಕ್ಕಿಲ್ಲದವರೂ ನಿರ್ಭಯವಾಗಿ ಮಲಗಿಕೊಳ್ಳುವರು. ಆದರೆ ನಿಮ್ಮ ಸಂತಾನವನ್ನೋ ಕ್ಷಾಮದಿಂದ ಸಾಯಿಸುವೆನು, ನಿಮ್ಮಲ್ಲಿ ಉಳಿದವರನ್ನು (ಆ ಸರ್ಪವೇ) ಕ್ಷಾಮವು ಕೊಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಪೋಷಣೆ ಪಡೆಯುವರು ದೀನದಲಿತರು, ನಿರ್ಭಯದಿಂದ ನಿದ್ರಿಸುವರು ದಿಕ್ಕಿಲ್ಲದವರು. ನಿನ್ನ ಸಂತಾನದವರಾದರೋ ಸಾಯುವರು ಕ್ಷಾಮದಿಂದ, ಅಳಿದುಳಿದವರು ಹತರಾಗುವರು ಆ ಘಟಸರ್ಪದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 [ನನ್ನ ಜನರಲ್ಲಿ] ಬಡತನದ ಹಿರಿಯ ಮಕ್ಕಳಿಗೂ ಪೋಷಣೆಯಾಗುವದು, ದಿಕ್ಕಿಲ್ಲದವರೂ ನಿರ್ಭಯವಾಗಿ ಮಲಗಿಕೊಳ್ಳುವರು; ನಿಮ್ಮ ಸಂತಾನವನ್ನೋ ಕ್ಷಾಮದಿಂದ ಸಾಯಿಸುವೆನು, ನಿಮ್ಮಲ್ಲಿ ಉಳಿದವರನ್ನು [ಆ ಸರ್ಪವೇ] ಕೊಲ್ಲುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದರೆ ನನ್ನ ಬಡಜನರು ಸುರಕ್ಷಿತವಾಗಿ ಊಟಮಾಡುವರು. ಅವರ ಮಕ್ಕಳೂ ಸುರಕ್ಷಿತವಾಗಿರುವರು. ನನ್ನ ಬಡಜನರು ಹಾಯಾಗಿ ಮಲಗಿ ಸುರಕ್ಷಿತರಾಗಿರುವರು. ಆದರೆ ನಿಮ್ಮ ಸಂತಾನದವರು ಹಸಿವೆಯಿಂದ ಸಾಯುವಂತೆ ಮಾಡುವೆನು. ನಿಮ್ಮ ದೇಶದಲ್ಲಿ ಉಳಿದಿರುವ ಜನರೆಲ್ಲರೂ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಬಡವರಲ್ಲಿ ಬಡವರಾದವರು ಆಹಾರ ಕಂಡುಕೊಳ್ಳುವರು. ಕೊರತೆಯಲ್ಲಿರುವವರು ಸುರಕ್ಷಿತವಾಗಿ ನಿದ್ರಿಸುವರು. ಆದರೆ ನಿನ್ನ ಸಂತಾನದವರೋ ಕ್ಷಾಮದಿಂದ ಹತರಾಗುವರು. ನಿನ್ನಲ್ಲಿ ಉಳಿದವರನ್ನು ಅದು ಹತಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:30
21 ತಿಳಿವುಗಳ ಹೋಲಿಕೆ  

ನಿನಗೆ ಈ ಎರಡು ಬಾಧೆಗಳು ಬಂದಿವೆ, ನಿನಗೋಸ್ಕರ ಸಂತಾಪವನ್ನು ತೋರಿಸುವವರು ಯಾರಿದ್ದಾರೆ? ನಾಶವೋ, ಸಂಹಾರವೋ, ಕ್ಷಾಮವೋ, ಶಕ್ತಿಯೋ. ನಾನು ನಿನ್ನನ್ನು ಹೇಗೆ ಸಂತೈಸಲಿ?


ಈ ಮಾತುಗಳು ನೆರವೇರುವುದು ಎಂಬುದಕ್ಕೆ, ನೀವು ಈ ವರ್ಷದಲ್ಲಿ ಕೂಳೆಬೆಳೆಯನ್ನೂ, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದದ್ದನ್ನೂ, ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.


ಇವನಿಗೆ ಗಿರಿದುರ್ಗಗಳೇ, ಆಶ್ರಯ ಅನ್ನವು ಉಚಿತವಾಗಿ ಒದಗುವುದು, ನೀರು ನಿಸ್ಸಂದೇಹವಾಗಿ ದೊರಕುವುದು.


ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು. ಎಡಗಡೆಯಲ್ಲಿರುವುದನ್ನು ತಿಂದರೂ ತೃಪ್ತಿಯಾಗುವುದಿಲ್ಲ. ಒಬ್ಬೊಬ್ಬನು ತನ್ನ ತೋಳಿನ ಮಾಂಸವನ್ನೇ ತಿನ್ನುವನು.


ಅವರು ಘೋರ ಕಷ್ಟಕ್ಕೊಳಗಾಗಿ ಹಸಿವೆಯಿಂದ ದೇಶದಲ್ಲಿ ಅಲೆಯುವರು. ಅವರು ಹಸಿದಾಗ ಸಿಟ್ಟುಗೊಂಡು ತಮ್ಮ ಅರಸನನ್ನೂ, ತಮ್ಮ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.


ಪಟ್ಟಣ ಪ್ರದೇಶಗಳು ಹಾಳಾಗಿ ಪಶುಪಾಲಕರಿಗೆ ಹುಲ್ಲುಗಾವಲುಗಳಾಗುವವು. ಕುರಿಮರಿಗಳು ಅಲ್ಲಿ ಮೇಯುವವು.


ನೀವು ನನ್ನ ಜನರನ್ನು ಜಜ್ಜಿ, ಬಡವರನ್ನು ದುಃಖದಿಂದ ಹಿಂಸಿಸುವುದೇಕೆ?” ಎಂದು ಕರ್ತನಾದ ಸೇನಾಧೀಶ್ವರ ಯೆಹೋವನು ವಾದಿಸುವನು.


ಮೃತ್ಯುವಿನ ಹಿರಿಯ ಮಗನು ಅವನ ಚರ್ಮವನ್ನು ಚೂರು ಚೂರಾಗಿ ತಿಂದು, ಅವನ ಅಂಗಗಳನ್ನು ನುಂಗಿಬಿಡುವನು.


ಯೆಹೋವನು ತನ್ನ ಜನರ ಹಿರಿಯರನ್ನು, ಅಧಿಕಾರಿಗಳನ್ನೂ ನ್ಯಾಯವಿಚಾರಣೆಗೆ ತರುವನು. ಏಕೆಂದರೆ, “ನೀವು ದ್ರಾಕ್ಷಿಯ ತೋಟವನ್ನು ನುಂಗಿಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.


ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು. ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು.


ದೀನರು ಯೆಹೋವನಲ್ಲಿ ಹೆಚ್ಚಾಗಿ ಆನಂದಿಸುವರು, ಬಡವರು ಇಸ್ರಾಯೇಲರ ಸದಮಲಸ್ವಾಮಿಯಲ್ಲಿ ಉಲ್ಲಾಸಿಸುವರು.


ದೀನದರಿದ್ರ ಜನರನ್ನು ನಿನ್ನಲ್ಲಿ ಉಳಿಸುವೆನು; ಅವರು ಯೆಹೋವನ ನಾಮವನ್ನು ಆಶ್ರಯಿಸಿಕೊಳ್ಳುವರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು