Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಸ್ವರವೆತ್ತಿ ಹಾಡಬೇಕು: “ಆಹಾ, ಹಿಂಸಕನು ಕೊನೆಗೊಂಡನು, ಕೋಪವು ನಿಂತು ಹೋಯಿತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬಿದ್ದುಹೋದನಿದೊ ವಿಧ್ವಂಸಕ ಸದ್ದಿಲ್ಲದಾಗಿದೆ ಅವನ ಅಟ್ಟಹಾಸದ ಬಿಂಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಎತ್ತಿ ಹೇಳಬೇಕು - ಆಹಾ, ಹಿಂಸಕನು ಕೊನೆಗೊಂಡನು, ರೇಗಾಟವು ನಿಂತಿತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ಸಮಯದಲ್ಲಿ ಬಾಬಿಲೋನಿನ ಅರಸನ ಬಗ್ಗೆ ನೀವು ಹೀಗೆ ಹಾಡುವಿರಿ: ಅರಸನು ನಮ್ಮನ್ನಾಳುವಾಗ ಬಹಳ ಕ್ರೂರವಾಗಿದ್ದನು. ಆದರೆ ಈಗ ಅವನ ಆಳ್ವಿಕೆಯು ಅಂತ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬಿಲೋನಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಸ್ವರವೆತ್ತಿ ಹಾಡಬೇಕು: ಹೀಗೆ ದಬ್ಬಾಳಿಕೆಗಾರನು ಕೊನೆಗೊಂಡನು. ಅವನ ಕೋಪ ಹೀಗೆ ಮುಗಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:4
35 ತಿಳಿವುಗಳ ಹೋಲಿಕೆ  

ನಿನ್ನ ಹಿಂಸಕರು ತಮ್ಮ ಮಾಂಸವನ್ನೇ ತಿನ್ನುವಂತೆ ಮಾಡುವೆನು, ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು” ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವುದು.


ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.


‘ಅಯ್ಯೋ ಅಯ್ಯೋ ನಯವಾದ ನಾರುಮಡಿಯನ್ನೂ, ಧೂಮ್ರವರ್ಣದ ವಸ್ತ್ರಗಳನ್ನೂ, ಕಡುಗೆಂಪು ಉಡುಪನ್ನೂ ಧರಿಸಿಕೊಂಡು, ಚಿನ್ನ, ರತ್ನ, ಮುತ್ತು ಇವುಗಳಿಂದ ತನ್ನನ್ನು ಅಲಂಕರಿಸಿಕೊಂಡಿದ್ದ ಈ ಮಹಾಪಟ್ಟಣಕ್ಕೆ ಎಂಥ ದುರ್ಗತಿ ಸಂಭವಿಸಿತು.’


ಆ ಸ್ತ್ರೀಯು ನೀತಿವಂತರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.


ಲೆಬನೋನಿಗೆ ಆದಂಥ ಹಿಂಸೆಯ ಬಾರವು ನಿನ್ನನ್ನು ಕಾಡುವುದು, ಮೃಗಪಶುಗಳ ನಾಶನವು ನಿನ್ನನ್ನು ಹೆದರಿಸುವುದು; ನೀನು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಹಿಂಸಿಸಿದ ಕಾರಣ ಅದು ನಿನ್ನನ್ನು ಕಾಡುವುದು.


ನರಜಾತಿಯವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ, ಭೂಜಂತುಗಳನ್ನೂ ನಿನ್ನ ಕೈಗೆ ಒಪ್ಪಿಸಿ ನೀನು ಅವುಗಳನ್ನೆಲ್ಲಾ ಆಳುವಂತೆ ಮಾಡಿದ್ದಾನೆ; ನೀನೇ ಆ ಬಂಗಾರದ ತಲೆ.


“ನಾನು ಕೋಪದಿಂದಲೂ, ರೋಷದಿಂದಲೂ, ಕಠಿಣವಾದ ಖಂಡನೆಯಿಂದಲೂ, ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣೆಗೂ, ಪರಿಹಾಸ್ಯಗಳಿಗೂ, ಬುದ್ಧಿವಾದಗಳಿಗೂ ಆಸ್ಪದವಾಗುವವು; ಇದು ಯೆಹೋವನಾದ ನನ್ನ ನುಡಿ.


ಅಯ್ಯೋ, ಬಂಗಾರವು ಎಷ್ಟೋ ಮಸುಕಾಯಿತು! ಚೊಕ್ಕ ಚಿನ್ನವು ಕಾಂತಿಹೀನವಾಗಿದೆಯಲ್ಲಾ! ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದುಬಿಟ್ಟಿವೆ.


ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಗ್ರಸ್ತರಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.


ನಿನ್ನನ್ನು ಬಾಧಿಸುವವರ ಕೈಗೆ ಅದನ್ನು ಕೊಡುವೆನು. ಅವರು ನಿನಗೆ, ‘ನೀನು ಬಿದ್ದುಕೋ, ನಿನ್ನನ್ನು ತುಳಿಯುತ್ತಾ ಹೋಗುವೆವು’ ಎಂದು ಹೇಳಲು, ನೀನು ಹಾದುಹೋಗುವ ಅವರಿಗೆ ನಿನ್ನ ಬೆನ್ನನ್ನು ನೆಲವನ್ನಾಗಿಯೂ, ಬೀದಿಯ ಮಣ್ಣನ್ನಾಗಿಯೂ ಮಾಡಿಕೊಂಡೆಯಲ್ಲಾ.”


ಕಸ್ದೀಯರ ಯುವತಿಯೇ (ನಗರವೇ), ಮೌನವಾಗಿ ಕುಳಿತುಕೋ, ಕತ್ತಲೊಳಗೆ ಹೋಗು. ಏಕೆಂದರೆ ನೀನು ಇನ್ನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವುದಿಲ್ಲ.


ಲೋಕವನ್ನು ಕಾಡನ್ನಾಗಿ ಮಾಡಿ, ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಈ ಮನುಷ್ಯನೋ?’ ಎಂದುಕೊಳ್ಳುವರು.


ಜನಗಳನ್ನು ಕೋಪೋದ್ರೇಕದಿಂದ ಎಡೆಬಿಡದೆ ಹೊಡೆದು, ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ, ಅಧೀನಮಾಡಿಕೊಂಡರು.


ರಾಜ್ಯಗಳ ಘನತೆಯೂ, ಕಸ್ದೀಯರ ಮಹಿಮೆಯ ಭೂಷಣವೂ ಆದ ಬಾಬಿಲೋನಿಗೆ, ದೇವರು ನಾಶಮಾಡಿದ ಸೊದೋಮ್ ಗೋಮೋರಗಳ ಗತಿಯೇ ಸಂಭವಿಸುವುದು.


ದೇವಾಲಯದ ಎಲ್ಲಾ ಚಿಕ್ಕ, ದೊಡ್ಡ ಸಾಮಾನುಗಳನ್ನೂ ಯೆಹೋವನ ಮಂದಿರದ ಭಂಡಾರದ ಹಾಗೂ ಅರಸನ ಮತ್ತು ಅವನ ಸರದಾರರ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ದನು.


ಅವರಿಗೆ ಭಾರವಾದ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ ಮಿದ್ಯಾನಿನ ನಾಶನದ ದಿನದಲ್ಲಿ ಮುರಿದುಬಿಟ್ಟಂತೆ ಮುರಿದು ಬಿಟ್ಟಿದ್ದೀ.


ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡು ಬಂದ ದೈವೋಕ್ತಿ.


ಯೆಹೋವನು ಆಳುತ್ತಿದ್ದ ದುಷ್ಟರ ಕೋಲನ್ನೂ, ಅರಸರ ದಂಡವನ್ನೂ ಮುರಿದುಬಿಟ್ಟನು.


ನಿಮ್ಮ ದೇಶದಿಂದ ವಲಸೆಹೋದವರು ನಿಮ್ಮಲ್ಲಿ ವಾಸಿಸಲಿ; ಮೋವಾಬ್ಯರು ಬಲತ್ಕಾರಿಗಳಿಗೆ ವಶವಾಗದ ಹಾಗೆ ಆಶ್ರಯವಾಗಿರಿ. ಹಿಂಸಿಸುವವರು ನಿಮ್ಮ ದೇಶದಿಂದ ನಿರ್ಮುಲವಾಗುವರು, ನಾಶನವು ನಿಂತುಹೋಗುವುದು. ಪೀಡಿಸುವವರು ನಿಮ್ಮ ದೇಶದಿಂದ ನಿರ್ಮೂಲರಾಗುವರು.


ಆಕಾಶಮಂಡಲವನ್ನು ಹರಡಿ, ಭೂಲೋಕವನ್ನು ಸ್ಥಾಪಿಸಿದ ನಿನ್ನ ಸೃಷ್ಟಿಕರ್ತನಾದ ಯೆಹೋವನನ್ನು ಮರೆತುಬಿಟ್ಟೆಯಾ? ನಾಶಮಾಡಬೇಕೆಂದು ಬಾಣವನ್ನು ಹೂಡುವ ಹಿಂಸಕನ ಕ್ರೋಧಕ್ಕೆ ದಿನವೆಲ್ಲಾ ಎಡೆಬಿಡದೆ ಅಂಜುತ್ತೀಯಾ? ಆ ಹಿಂಸಕನ ಕ್ರೋಧವು ಎಲ್ಲಿ ಇದೆ?


ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವುದಿಲ್ಲ, ನಾಶನವು ದೂರವಾಗಿರುವುದು, ನಿನ್ನ ಹತ್ತಿರಕ್ಕೆ ಬಾರದು.


ಘೋರದರ್ಶನವು ನನಗೆ ತಿಳಿಯ ಬಂದಿದೆ; ಬಾಧಕನು ಬಾಧಿಸುತ್ತಿದ್ದಾನೆ, ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ, ಮುತ್ತಿಗೆ ಹಾಕು! ನಿಮ್ಮ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.


ಮೋವಾಬಿನ ನೆರೆಹೊರೆಯವರೇ, ಅದರ ಹೆಸರನ್ನೂ, ಪ್ರಖ್ಯಾತಿಯನ್ನು ಬಲ್ಲವರೇ, ನೀವೆಲ್ಲರೂ ಅದಕ್ಕಾಗಿ ಎದೆಬಡುಕೊಳ್ಳಿರಿ. ‘ಅಯ್ಯೋ, ಬಲವಾದ ಕೋಲು, ಮಹಿಮೆಯ ದಂಡವು ಮುರಿದುಹೋಯಿತಲ್ಲಾ’ ಎಂದು ಪ್ರಲಾಪಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು