ಯೆಶಾಯ 14:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹೌದು, ತುರಾಯಿ ಮರಗಳೂ, ಲೆಬನೋನಿನ ದೇವದಾರು ವೃಕ್ಷಗಳೂ, ‘ನೀನು ಸುಮ್ಮನಿರುವುದರಿಂದ ನಮ್ಮನ್ನು ಕಡಿಯಲು ಯಾರೂ ಬರುವುದಿಲ್ಲ’ ಎಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಲಿಯುತಿಹವು ತುರಾಯಿ, ಲೆಬನೋನಿನ ದೇವದಾರು ವೃಕ್ಷಗಳು ಕೂಡಾ, ‘ಮಡಿದು ಹೋದನಿವನು, ಇನ್ನು, ಕಡಿವವರಾರು ನಮ್ಮನು?’ ಎನ್ನುತಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಹೌದು, ತುರಾಯಿಮರಗಳೂ ಲೆಬನೋನಿನ ದೇವದಾರು ವೃಕ್ಷಗಳೂ ನೀನು ಬಿದ್ದುಕೊಂಡ ಮೇಲೆ ಕಡಿಯುವವನು ಯಾವನೂ ನಮ್ಮ ತಂಟೆಗೆ ಬಂದಿಲ್ಲವೆಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀನು ದುಷ್ಟ ಅರಸನಾಗಿದ್ದೆ, ಈಗ ನಿನಗೆ ಅಂತ್ಯವು ಬಂತು. ತುರಾಯಿ ಮರಗಳೂ ಲೆಬನೋನಿನ ದೇವದಾರು ವೃಕ್ಷಗಳೂ ಹರ್ಷಗೊಂಡಿವೆ. ಆ ಮರಗಳು ಹೀಗೆ ಹೇಳುತ್ತಿವೆ: ಅರಸನು ನಮ್ಮನ್ನು ಕಡಿದುರುಳಿಸಿದನು. ಈಗ ಅರಸನೇ ಉರುಳಿಬಿದ್ದಿದ್ದಾನೆ. ಅವನು ಮತ್ತೆಂದಿಗೂ ಏಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ತುರಾಯಿ ಮರಗಳೂ, ಲೆಬನೋನಿನ ದೇವದಾರು ಮರಗಳೂ, “ಈಗ ನೀನು ಬಿದ್ದದ್ದರಿಂದ ನಮ್ಮನ್ನು ಕಡಿಯಲು ಯಾರೂ ಬರುವುದಿಲ್ಲ,” ಎಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ. ಅಧ್ಯಾಯವನ್ನು ನೋಡಿ |