ಯೆಶಾಯ 15:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನನ್ನ ಹೃದಯವು ಮೋವಾಬಿನ ನಿಮಿತ್ತವಾಗಿ ಮೊರೆಯಿಡುತ್ತದೆ, ಅಲ್ಲಿಂದ ಪಲಾಯನವಾದವರು ಚೋಯರಿಗೂ, ಎಗ್ಲತ್ ಶೆಲಿಶೀಯಕ್ಕೂ ಓಡಿಹೋಗುತ್ತಾರೆ, ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ, ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಧ್ವನಿಗೈಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮೊರೆಯಿಡುತ್ತಿದೆ ಎನ್ನ ಮನ ಮೋವಾಬಿನ ನಿಮಿತ್ತ, ಪಲಾಯನ ಗೈದವರು ಓಡುತಿಹರು ಚೋಯರತ್ತ, ಎಗ್ಲತ್ ಶೆಲಿಶೀಯ ದತ್ತ, ಹತ್ತಿಹರು ಲೂಹೀತ್ ದಿಣ್ಣೆಯನ್ನು ಅಳುತ್ತ, ಪಿಡಿದಿಹರು ಹೊರೋನಯಿಮಿನ ದಾರಿಯನು ಹಾಳಾದೆವೆಂದು ಧ್ವನಿಗೈಯುತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನನ್ನ ಹೃದಯವು ಮೋವಾಬಿನ ನಿವಿುತ್ತವಾಗಿ ಮೊರೆಯಿಡುತ್ತದೆ; ಅಲ್ಲಿಂದ ಪಲಾಯನವಾದವರು ಚೋಯರಿಗೂ ಎಗ್ಲತ್ ಶೆಲಿಶೀಯಕ್ಕೂ ಓಡಿಹೋಗುತ್ತಾರೆ, ಅಳುತ್ತಾ ಲೂಹೀಥ್ ದಿಣ್ಣೆಯನ್ನು ಹತ್ತುತ್ತಾರೆ, ಹೊರೊನಯಿವಿುನ ದಾರಿಯಲ್ಲಿ ನಡೆಯುತ್ತಾ ನಾಶನವಾದೆವಲ್ಲಾ ಎಂದು ದನಿಗೈಯುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಮೋವಾಬಿನ ಬಗ್ಗೆ ನನ್ನ ಹೃದಯವು ಮರುಗುತ್ತಿದೆ. ಜನರು ಸುರಕ್ಷತೆಗಾಗಿ ಅತ್ತಿತ್ತ ಓಡಾಡುತ್ತಿದ್ದಾರೆ. ಅವರು ಬಹುದೂರವಿರುವ ಚೋಯರಿಗೆ ಓಡುತ್ತಿದ್ದಾರೆ. ಎಗ್ಲತ್ ಶೆಲಿಶೀಯಕ್ಕೂ ಓಡುತ್ತಾರೆ. ಪರ್ವತಮಾರ್ಗವಾಗಿ ಲೂಹೀಥ್ ಗೆ ಹೋಗುತ್ತಿರುವಾಗ ಜನರು ಅಳುತ್ತಾ ಹೋಗುತ್ತಾರೆ. ಹೊರೊನಯಿಮಿಗೆ ಹೋಗುವ ಮಾರ್ಗದಲ್ಲಿ ಜನರು ಜೋರಾಗಿ ಅಳುತ್ತಾ ಹೋಗುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗುತ್ತದೆ. ಅಲ್ಲಿಂದ ಪಲಾಯನವಾದವರು ಚೋಗರ್ ಕಡೆಗೂ ಎಗ್ಲತ್ ಶೆಲಿಶೀಯ ಕಡೆಗೂ ಓಡಿಹೋಗುವರು. ಲೂಹೀತ್ ದಿಣ್ಣೆಯನ್ನು ಅಳುತ್ತಾ ಹತ್ತುವರು. ಏಕೆಂದರೆ ಹೊರೊನಯಿಮ್ ಊರಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ದನಿಗೈಯುವರು. ಅಧ್ಯಾಯವನ್ನು ನೋಡಿ |