Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 16:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಲೋಚನೆ ಹೇಳಿರಿ, ತೀರ್ಮಾನಿಸಿರಿ; ನಡು ಮಧ್ಯಾಹ್ನದಲ್ಲಿ ನಿಮ್ಮ ನೆರಳು ರಾತ್ರಿಯ ಕತ್ತಲಿನಂತೆ ದಟ್ಟವಾದ ನೆರಳನ್ನು ಕೊಡಲಿ. ನಿಮ್ಮಲ್ಲಿರುವ ದೀನದಲಿತರನ್ನು ಸಂರಕ್ಷಿಸು, ತಪ್ಪಿಸಿಕೊಂಡು ಹೋಗುವ ಜನರ ವಿಷಯವನ್ನು ಬಯಲುಮಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಂತೆನ್ನುವರವರು ಯೆಹೂದ ಜನತೆಗೆ : “ನೀಡಿ ಸಲಹೆಯೊಂದನ್ನು ನಮಗೆ, ಕೊಡಿ ನ್ಯಾಯತೀರ್ಪನೆಮಗೆ, ಇರುಳಿನಂತಿರಲಿ ನಿಮ್ಮ ನೆರಳು ಉರಿಬಿಸಿಲೊಳೆಮಗೆ, ನೆಲೆನೀಡಿ ವಲಸಿಗರಿಗೆ, ದೂಡಬೇಡಿ ಅಲೆಯುವವರನು ಬಯಲಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಲೋಚನೆಹೇಳಿರಿ, ತೀರ್ಮಾನಿಸಿರಿ; ಮಟ್ಟ ಮಧ್ಯಾಹ್ನದಲ್ಲಿ ನಿಮ್ಮ ನೆರಳು ರಾತ್ರಿಯ ಕತ್ತಲಿನಂತೆ ದಟ್ಟವಾಗಿರಲಿ; ದೇಶ ಭ್ರಷ್ಟರನ್ನು ಮರೆಮಾಜಿರಿ, ಅಲೆಯುವವರನ್ನು ಬೈಲಿಗೆ ತರಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು, “ನಮಗೆ ಸಹಾಯ ಮಾಡಿರಿ! ನಾವು ಮಾಡಬೇಕಾದದ್ದನ್ನು ತಿಳಿಸಿರಿ! ವೈರಿಗಳಿಂದ ನಮ್ಮನ್ನು ರಕ್ಷಿಸಿರಿ. ನಮ್ಮನ್ನು ನಡುಮಧ್ಯಾಹ್ನದ ಸೂರ್ಯನ ಶಾಖದಿಂದ ನೆರಳು ಕಾಪಾಡುವಂತೆ ನಮ್ಮನ್ನು ಕಾಪಾಡಿರಿ. ನಾವು ನಮ್ಮ ಶತ್ರುಗಳಿಂದ ಓಡಿಹೋಗುತ್ತಿದ್ದೇವೆ. ನಮ್ಮನ್ನು ಅಡಗಿಸಿಡಿರಿ, ವೈರಿಗಳ ಕೈಗೆ ನಮ್ಮನ್ನು ಕೊಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಲೋಚಿಸಿ, ತೀರ್ಮಾನಿಸಿರಿ. ಮಟ್ಟ ಮಧ್ಯಾಹ್ನದಲ್ಲಿ ನಿಮ್ಮ ನೆರಳನ್ನು ರಾತ್ರಿಯಂತೆ ಮಾಡಿರಿ. ವಲಸಿಗರನ್ನು ಅಡಗಿಸಿರಿ. ಅಲೆಯುವವರನ್ನು ಬಯಲಿಗೆ ತರಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 16:3
18 ತಿಳಿವುಗಳ ಹೋಲಿಕೆ  

ಆಗ ಪ್ರತಿ ಮನುಷ್ಯನು ಗಾಳಿಯಲ್ಲಿ ಅಡಗಿಕೊಳ್ಳುವಂತೆಯೂ, ಅತಿವೃಷ್ಟಿಯಲ್ಲಿ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿನ ನೀರಿನ ಕಾಲುವೆಗಳ ಹಾಗೂ, ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.


ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.


ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ;


“ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಷ್ಠೆಯಿಂದ ನ್ಯಾಯತೀರಿಸಿರಿ,


ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.


ಯೆಹೋವನು, ನೀತಿ, ನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ವಿದೇಶಿ, ಅನಾಥ, ವಿಧವೆ ಇವರಿಗೆ ಯಾವ ಅನ್ಯಾಯವನ್ನೂ ಮತ್ತು ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿರಿ” ಎಂದು ಹೇಳುತ್ತಾನೆ.


ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ, ಮುಂಜಾನೆಯಲ್ಲಿ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ” ಎಂಬುದೇ.


ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನೆಂದರೆ, ‘ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು’” ಎಂಬುದೇ.


ನೀನು ದೀನರಿಗೆ ಕೋಟೆಯು, ಇಕ್ಕಟ್ಟಿನಲ್ಲಿ ದಿಕಿಲ್ಲದವರಿಗೆ ರಕ್ಷಣಾದುರ್ಗವೂ, ಬಿಸಿಲಿಗೆ ನೆರಳೂ, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.


ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.”


ಅದು, ‘ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡುವುದು’ ಎಂದಿತು.


ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು