Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 16:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮೋವಾಬ್ಯರ ಅಹಂಕಾರವನ್ನು, ಗರ್ವವನ್ನು, ಕೊಚ್ಚಿಕೊಳ್ಳುವಿಕೆಯನ್ನು, ಕೋಪವನ್ನು ನಾವು ಕೇಳಿದ್ದೇವೆ. ಅವರು ಕೊಚ್ಚಿಕೊಳ್ಳುವುದೆಲ್ಲಾ ಬರೀ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯೆಹೂದ ಜನತೆ ಪೇಳ್ವರವರಿಗೆ : “ನಮ್ಮ ಕಿವಿಗೆ ಬಿದ್ದಿದೆ ಮೋವಾಬ್ಯರ ಮದ, ತಿಳಿದಿದೆ ನಮಗೆ ಅವರ ದುರಹಂಕಾರ, ಅವರ ಒಣ ಡಂಭಾಚಾರ, ಗರ್ವೋದ್ರೇಕ".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮೋವಾಬ್ಯರಿಗೆ ಬಹು ಸೊಕ್ಕೇರಿದೆ ಎಂಬ ಅವರ ಹೆಮ್ಮೆಯ ಸುದ್ದಿಯೂ ಅವರ ಅಹಂಕಾರದಂಭ ಗರ್ವೋದ್ರೇಕ ಇವುಗಳ ಸಮಾಚಾರವೂ ನಮ್ಮ ಕಿವಿಗೆ ಬಿದ್ದಿವೆ. ಅವರು ಕೊಚ್ಚಿಕೊಳ್ಳುವದೆಲ್ಲಾ ಬರೀ ಬುರುಡೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಮೋವಾಬಿನ ಜನರು ತುಂಬ ಹೆಚ್ಚಳಪಡುವವರೂ ಜಂಬದವರೂ ಎಂದು ನಾವು ಕೇಳಿದ್ದೇವೆ. ಇವರು ಹಿಂಸಕರಾಗಿದ್ದಾರೆ; ಬಡಾಯಿ ಕೊಚ್ಚುವವರಾಗಿದ್ದಾರೆ, ಅವರ ಬಡಾಯಿ ಕೇವಲ ಮಾತುಗಳಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಮೋವಾಬಿನ ಗರ್ವವನ್ನು ನಾವು ಕೇಳಿದ್ದೇವೆ. ಆಕೆಗೆ ಬಹಳ ಗರ್ವ. ಆಕೆಯ ಅಹಂಕಾರವು, ಆಕೆಯ ಗರ್ವವು ಮತ್ತು ಆಕೆಗೆ ಕೋಪವು ಸಹ ಉಂಟು. ಆದರೆ ಆಕೆಯ ಕೊಚ್ಚಿಕೊಳ್ಳುವಿಕೆ ಬರಿದಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 16:6
17 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ, “ಮೋವಾಬಿನವರು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಅದು ಎದೋಮಿನ ಅರಸನ ಎಲುಬುಗಳನ್ನು ಸುಟ್ಟು ಬೂದಿಮಾಡಿತು.


ಮೋವಾಬು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿದ್ದರಿಂದ ಅದು ಹಾಳಾಗಿ ಇನ್ನು ಜನಾಂಗವೆನಿಸಿಕೊಳ್ಳದು.”


“ಮೋವಾಬಿಗೆ ತಲೆಗೇರುವಂತೆ ಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಪರಿಹಾಸ್ಯಕ್ಕೆ ಗುರಿಯಾಗುವುದು.


ಖಡ್ಗವು ಕೊಚ್ಚಿಕೊಳ್ಳುವವರನ್ನು ಇರಿಯಲಿ! ಅವರ ಬುದ್ಧಿಹೀನತೆಯು ಬಯಲಿಗೆ ಬರುವುದು. ಖಡ್ಗವು ಬಾಬೆಲಿನ ಶೂರರನ್ನು ಸಂಹರಿಸಲಿ! ಅವರು ಬೆಚ್ಚಿಬೀಳುವರು.


ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ, ಕಣಿಹೇಳುವವರನ್ನು ಮರುಳುಗೊಳಿಸಿ, ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳಿವಳಿಕೆಯನ್ನು ಹುಚ್ಚುತನವಾಗ ಮಾಡುವೆನು.


ಮೃತ್ಯುವಿನಿಂದ ನೀವು ಪಡೆದುಕೊಂಡ ಒಡಂಬಡಿಕೆಯು ಸಾಗದು, ಪಾತಾಳದೊಡನೆ ನೀವು ಮಾಡಿಕೊಂಡ ಒಪ್ಪಂದವು ನಿಲ್ಲದು; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ನಿಮ್ಮನ್ನು ತುಳಿದುಬಿಡುವುದು.


ನೀವು ನಿಮ್ಮೊಳಗೆ, “ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ” ಎಂದು ಅಂದುಕೊಂಡಿದ್ದೀರಿ.


ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”


“ಧರ್ಮನಿಂದಕ” ಎನ್ನಿಸಿಕೊಳ್ಳುವವನು ಸೊಕ್ಕೇರಿದ ಅಹಂಕಾರಿಯಾಗಿ, ಗರ್ವ ಮತ್ತು ಮದದಿಂದ ಪ್ರವರ್ತಿಸುವನು.


ಈಜುವವನು ಕೈಯಾಡಿಸುವಂತೆ ಅವರು ಅದರಲ್ಲಿಯೇ ಕೈಯಾಡಿಸುವರು; ಆದರೆ ಯೆಹೋವನು ಅವರ ಗರ್ವವನ್ನೂ, ಕೈಯ ಚಮತ್ಕಾರವನ್ನೂ ತಗ್ಗಿಸಿಬಿಡುವನು.


ಮೋವಾಬಿನ ಬಗ್ಗೆ ದೈವೋಕ್ತಿ. ಒಂದು ರಾತ್ರಿಯಲ್ಲಿ ಮೋವಾಬಿನ ಆರ್ ಪಟ್ಟಣವು ಹಾಳಾಗಿ ನಿರ್ಮೂಲವಾಯಿತು; ಹೌದು, ಒಂದು ರಾತ್ರಿಯಲ್ಲಿ ಮೋವಾಬಿನ ಕೀರ್ ಪಟ್ಟಣವೂ ಹಾಳಾಗಿ ನಿರ್ಮೂಲವಾಯಿತು.


ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವುದು; ಮೋವಾಬ್ಯರೋ ತಿಪ್ಪೆಗುಂಡಿಯ ಕೆಸರಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾವಿದ್ದಲ್ಲೇ ತುಳಿಯಲ್ಪಡುವರು.


“‘ನಾವು ಶೂರರು, ಯುದ್ಧಪ್ರವೀಣರಾದ ಪರಾಕ್ರಮಶಾಲಿಗಳು’ ಎಂದು ನೀವು ಅಂದುಕೊಳ್ಳುವುದು ಹೇಗೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು