Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 17:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ. ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರ ಗಾಳಿಯಿಂದ ಸುತ್ತಾಡುವ ಧೂಳಿನಂತೆಯೂ ಅಟ್ಟಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹೌದು, ಪ್ರಚಂಡ ಜಲಪ್ರವಾಹಗಳಂತೆ ಪ್ರಬಲ ರಾಷ್ಟ್ರಗಳು ಆರ್ಭಟಿಸುತ್ತವೆ. ಆದರೆ ದೇವರು ಅವರನ್ನು ಗದರಿಸುವರು. ಅವರು ಬಿರುಗಾಳಿಗೆ ಸಿಕ್ಕಿದ ಬೆಟ್ಟದ ಹೊಟ್ಟಿನಂತೆ, ಸುಂಟರಗಾಳಿಗೆ ಸುತ್ತುವ ಧೂಳಿನಂತೆ ಓಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ! ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿಯಾಡುವ ದೂಳಿನಂತೆಯೂ ಅಟ್ಟಲ್ಪಡುವರು. ಇಗೋ, ಸಂಜೆಯಲ್ಲಿ ದಿಗಿಲುಬಿದ್ದು ಉದಯದೊಳಗಾಗಿ ಇಲ್ಲವಾಗುವರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವರು ಗದರಿಸಿದಾಗ ಜನರು ಓಡಿಹೋಗುವರು. ಆ ಜನರು ಗಾಳಿಯಲ್ಲಿ ಹಾರಿಹೋಗುವ ಹೊಟ್ಟಿನಂತಿರುವರು; ಬಿರುಗಾಳಿಯು ಬಹುದೂರಕ್ಕೆ ಕೊಂಡೊಯ್ಯುವ ಬೇರಿಲ್ಲದ ಹಣಜಿಗಳಂತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಪ್ರಚಂಡ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ, ಅವರು ದೂರಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರಗಾಳಿಯಿಂದ ಸುತ್ತಿ ಆಡುವ ಧೂಳಿನಂತೆಯೂ ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 17:13
33 ತಿಳಿವುಗಳ ಹೋಲಿಕೆ  

ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ, ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದಿ.


ದುಷ್ಟರೋ ಹಾಗಲ್ಲ; ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ.


ಅವರು ಗಾಳಿಗೆ ಸಿಕ್ಕಿಬಿದ್ದ ಹುಲ್ಲಿನಂತೆ ಆದದ್ದು ಎಷ್ಟು ಸಾರಿ? ಎಷ್ಟು ಸಾರಿ ಬಿರುಗಾಳಿಯು ಕೊಚ್ಚಿಕೊಂಡು ಹೋಗುವ ಹೊಟ್ಟಿನಂತಿದ್ದರು?


ಗುಂಪು ಗುಂಪಾಗಿ ಕೂಡಿರುವ ನಿನ್ನ ಶತ್ರುಗಳು ಸೂಕ್ಷ್ಮವಾದ ಧೂಳಿನಂತೆಯೂ, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನಂತೆಯೂ ಇರುವರು; ಅವರು ಕ್ಷಣ ಮಾತ್ರದಲ್ಲಿ ಲಯಹೊಂದುವರು.


ಹೀಗಿರಲು ಅವರು ಪ್ರಾತಃಕಾಲದ ಮೋಡದ ಹಾಗೆ, ಬೇಗನೆ ಮಾಯವಾಗುವ ಇಬ್ಬನಿಯಂತೆಯೂ, ಬಿರುಗಾಳಿಯು ಕಣದಿಂದ ಬಡಿದುಕೊಂಡುಹೋಗುವ ಹೊಟ್ಟಿನ ಹಾಗೂ, ಚಿಮಿಣಿಯಿಂದ ಹೊರಡುವ ಹೊಗೆಯೋಪಾದಿಯಲ್ಲಿಯೂ ಇರುವರು.


ಆಗ ಕಬ್ಬಿಣ, ಮಣ್ಣು, ತಾಮ್ರ, ಬೆಳ್ಳಿ ಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.


ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ, ಮತ್ತು ಮಹಾನದಿಯಲ್ಲಿ ಘಟಸರ್ಪವನ್ನೂ ಕೊಂದುಹಾಕುವನು.


ಅಶ್ಶೂರ್ಯರನ್ನು ನನ್ನ ದೇಶದಲ್ಲಿ ಮುರಿದು, ನನ್ನ ಬೆಟ್ಟಗಳ ಮೇಲೆ ತುಳಿದುಬಿಡುವೆನು. ಆಗ ಅವರು ಹೂಡಿದ ನೊಗವು ನನ್ನ ಜನರಿಂದ ತೊಲಗಿ, ಹೊರಿಸಿದ ಹೊರೆಯು ನನ್ನ ಜನರ ಹೆಗಲ ಮೇಲಿನಿಂದ ದೂರವಾಗುವುದು.


ಅವರು ಗಾಳಿ ಹಾರಿಸುವ ಹೊಟ್ಟಿನಂತಾಗಲಿ; ಯೆಹೋವನ ದೂತನು ಅವರನ್ನು ಅಟ್ಟಿಬಿಡಲಿ.


‘ಇಲ್ಲಿಯ ತನಕ ಬರಬಹುದು; ಮೀರಿ ಬರಬೇಡ, ನಿನ್ನ ತೆರೆಗಳ ಹೆಮ್ಮೆಗೆ ಇಲ್ಲೇ ತಡೆಯಾಗುವುದು’ ಎಂದು ಅಪ್ಪಣೆಕೊಟ್ಟೆನು.


ನೀನು ಸಮುದ್ರ ತರಂಗಗಳ ಘೋಷವನ್ನು ತಡೆಯುವವನೂ, ಜನಾಂಗಗಳ ಗೊಂದಲವನ್ನು ಶಾಂತಿಪಡಿಸುವವನೂ ಆಗಿದೀ.


ಇಗೋ ಕರ್ತನು ಪೂರ್ಣ ಪ್ರತಾಪದಿಂದ ಕೂಡಿದ ಅಶ್ಶೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು. ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ,


ಏಕೆಂದರೆ ಹಿರಿದ ಕತ್ತಿ, ಬಾಗಿದ ಬಿಲ್ಲು, ಯುದ್ಧದ ಬಾಧೆ ಇವುಗಳಿಂದ ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ.


ನಿನ್ನನ್ನು ಚೆಂಡಿನಂತೆ ಸುತ್ತಿ ಸುತ್ತಿ ವಿಸ್ತಾರವಾದ ದೇಶಕ್ಕೆ ಬಿಸಾಡುವನು; ದಣಿಯ ಮನೆಗೆ ಅವಮಾನ ತಂದವನೇ, ಅಲ್ಲೇ ಸಾಯುವಿ, ನಿನ್ನ ವೈಭವದ ರಥಗಳು ಅಲ್ಲೇ ಇರುವವು.


ಆತನೇ ಇವುಗಳಿಗೆ ಪಾಲು ಮಾಡಿಕೊಟ್ಟಿದ್ದಾನೆ. ಆತನ ಕೈಯೇ ಗೆರೆ ಹಾಕಿ ದೇಶವನ್ನು ಹಂಚಿಕೊಟ್ಟಿದೆ. ಅದು ಇವುಗಳಿಗೆ ನಿತ್ಯ ಸ್ವಾಸ್ತ್ಯವಾಗುವುದು, ಅವು ತಲಾತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.


ಆಹಾ, ಆತನ ಗಣನೆಯಲ್ಲಿ ಜನಾಂಗಗಳು ಕಪಿಲೆಯಿಂದ ಉದುರುವ ತುಂತುರಿನಂತೆಯೂ, ತಕ್ಕಡಿಯಲ್ಲಿನ ಧೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಎತ್ತುತ್ತಾನೆ.


ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂಮಿಯಲ್ಲಿ ಬೇರೂರಿದಾಗಲೇ, ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವುದು.


ಆಹಾ, ನಿನ್ನ ಮೇಲೆ ಕಿಡಿಕಿಡಿಯಾದವರು ಆಶಾಭಂಗಪಟ್ಟು ಅವಮಾನಹೊಂದುವರು, ನಿನ್ನ ಸಂಗಡ ವ್ಯಾಜ್ಯವಾಡಿದವರು ನಾಶವಾಗಿ ಇಲ್ಲದೆ ಹೋಗುವರು.


ಆ ಕಾಲವು ಹೊಟ್ಟಿನಂತೆ ಹಾರಿಹೋಗುತ್ತದಲ್ಲಾ.


ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರೂ, ನಿನ್ನ ಅದ್ಭುತಕೃತ್ಯಗಳಿಗಾಗಿ ಭಯಪಡುತ್ತಾರೆ; ಪೂರ್ವದಿಂದ ಪಶ್ಚಿಮದವರೆಗೆ ಇರುವವರನ್ನು ಹರ್ಷಗೊಳಿಸುವಿ.


ಆತನ ಶ್ವಾಸವು ತುಂಬಿ ತುಳುಕಿ ಕಂಠದವರೆಗೂ ಏರುವ ತೊರೆಯಂತಿದೆ. ಜನಾಂಗಗಳನ್ನೂ ಸ್ವಲ್ಪವೂ ಉಳಿಸದೆ ಜರಡಿಯಿಂದ ಜಾಲಿಸುವುದಕ್ಕೆ ಬರುತ್ತಾನೆ. ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆಗಳಲ್ಲಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು