Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 17:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆರೋಯೇರಿನ ಪಟ್ಟಣಗಳು ನಿರ್ಜನವಾಗಿ, ಮಂದೆಗಳಿಗೆ ಆಸರೆಯಾಗುವವು. ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ತಂಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸಿರಿಯದ ನಗರಗಳೆಲ್ಲ ನಿರ್ಜನ ಪ್ರದೇಶಗಳಾಗಿ ಗೋಮಾಳವಾಗುವುವು. ಅಲ್ಲಿ ದನಕರುಗಳು ನಿರ್ಭಯದಿಂದ ತಂಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆರೋಯೇರಿನ ಪಟ್ಟಣಗಳು ನಿರ್ಜನವಾಗಿ ಮಂದೆಗಳಿಗೆ ಆಸರೆಯಾಗುವವು; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ತಂಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅರೋಯೇರ್ ಪ್ರಾಂತ್ಯದ ನಗರಗಳನ್ನು ಜನರು ಬಿಟ್ಟುಹೋಗುವರು. ಆ ಪಾಳುಬಿದ್ದ ನಗರಗಳಲ್ಲಿ ಕುರಿಮಂದೆಗಳು ತಿರುಗಾಡುವವು. ಅವುಗಳಿಗೆ ತೊಂದರೆ ಕೊಡಲು ಯಾರೂ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅರೋಯೇರ್ ಪ್ರಾಂತದ ಪಟ್ಟಣಗಳು ನಿರ್ಜನವಾಗಿ, ಅವು ಯಾರ ಹೆದರಿಕೆಯೂ ಇಲ್ಲದೆ ಮಲಗುವ ಮಂದೆಗಳಿಗೆ ಸ್ಥಳವಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 17:2
17 ತಿಳಿವುಗಳ ಹೋಲಿಕೆ  

ನಾನು ರಬ್ಬಾ ಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿಯೂ, ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ತಂಗುವ ಸ್ಥಳವನ್ನಾಗಿಯೂ ಮಾಡುವೆನು. ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’”


ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಹಾಗು ಭೂಜಂತುಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವುದಿಲ್ಲ.


ಸಮುದ್ರ ತೀರದ ಆ ಪ್ರಾಂತ್ಯವು ಹುಲ್ಲುಗಾವಲಾಗಿ, ಕುರುಬರ ಗುಡಿಸಲಾಗಿ, ಹಿಂಡುಗಳ ದೊಡ್ಡಿಗಳು ಇವೇ ಅಲ್ಲಿರುವವು.


ಒಬ್ಬೊಬ್ಬನು ತನ್ನ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರನ್ನು ಯಾರೂ ಹೆದರಿಸರು. ಸೇನಾಧೀಶ್ವರನಾದ ಯೆಹೋವನೇ ಇದನ್ನು ನುಡಿದಿದ್ದಾನೆ.


ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇರುವ ಪಟ್ಟಣವು ಇವುಗಳು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೂ ಯಾವ ಪಟ್ಟಣವನ್ನು ಜಯಿಸಲು ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲಾ ನಮ್ಮ ಕೈಗೆ ಸಿಕ್ಕುವಂತೆ ಮಾಡಿದನು.


ಗಾದ್ಯನ ಮಕ್ಕಳು ದೀಬೋನ್, ಅಟಾರೋತ್, ಅರೋಯೇರ್ ಊರುಗಳನ್ನು ಹೊಸದಾಗಿ ಕಟ್ಟಿಸಿದರು.


ಅರೋಯೇರಿನವರೇ, ದಾರಿಯ ಮಗ್ಗುಲಲ್ಲಿ ನಿಂತುಕೊಂಡು ನೋಡಿರಿ; ಓಡಿಹೋಗುವವನನ್ನೂ ಮತ್ತು ತಪ್ಪಿಸಿಕೊಳ್ಳುವವಳನ್ನೂ ‘ಏನಾಯಿತು?’ ಎಂದು ವಿಚಾರಿಸಿರಿ.


ಆ ಕಾಲದಲ್ಲಿ ನಾವು ಆ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡೆವು. ಅರ್ನೋನ್ ಹಳ್ಳದ ಬಳಿಯಲ್ಲಿರುವ ಅರೋಯೇರ್ ಮೊದಲುಗೊಂಡು ಗಿಲ್ಯಾದ್ ಸೀಮೆಯ ಮಧ್ಯದ ವರೆಗೂ ಇರುವ ಪ್ರದೇಶವನ್ನೆಲ್ಲಾ ಅದರ ಪಟ್ಟಣಗಳ ಸಹಿತವಾಗಿ ನಾನು ರೂಬೇನ್ಯರಿಗೂ ಮತ್ತು ಗಾದ್ಯರಿಗೂ ಕೊಟ್ಟೆನು.


ಆ ಕಾಲದಲ್ಲಿ ಮನುಷ್ಯನು ಒಂದು ಹಸುವಿನ ಕರುವನ್ನು ಮತ್ತು ಎರಡು ಕುರಿಗಳನ್ನು ಸಾಕುವನು.


ಪಟ್ಟಣ ಪ್ರದೇಶಗಳು ಹಾಳಾಗಿ ಪಶುಪಾಲಕರಿಗೆ ಹುಲ್ಲುಗಾವಲುಗಳಾಗುವವು. ಕುರಿಮರಿಗಳು ಅಲ್ಲಿ ಮೇಯುವವು.


ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ;


ಮಲಗಿಕೊಂಡಾಗ ನಿನ್ನನ್ನು ಯಾರೂ ಹೆದರಿಸುವುದಿಲ್ಲ. ಅನೇಕರು ನಿನ್ನ ಮುಖ ಪ್ರಸನ್ನತೆಯನ್ನು ಅಪೇಕ್ಷಿಸುವರು.


ಅವು ಸಮೃದ್ಧಿಯಾಗಿ ಹೆಚ್ಚು ಹಾಲನ್ನು ಕೊಡುವುದರಿಂದ ಅವನು ಮೊಸರನ್ನು ತಿನ್ನುವನು. ಏಕೆಂದರೆ ಆ ದೇಶದಲ್ಲಿ ಉಳಿದ ಪ್ರತಿಯೊಬ್ಬನೂ ಮೊಸರನ್ನು ಮತ್ತು ಜೇನುತುಪ್ಪವನ್ನು ತಿಂದು ಜೀವಿಸುವನು.


ಕೋಟೆಕೊತ್ತಲದ ಪಟ್ಟಣವು ಹಾಳಾಗಿ, ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸ ಸ್ಥಾನವಾಗಿದೆ; ಅಲ್ಲಿ ಕರುಗಳು ಮೇದು ಮಲಗುವುದು, ಅಲ್ಲಿನ ಚಿಗುರುಗಳನ್ನು ತಿಂದುಬಿಡುವುದು.


ನಾನು ನನ್ನ ಜನರನ್ನು ದೇವದ್ರೋಹಿಗಳಾದ ಅನ್ಯಜನಾಂಗಗಳ ವಶದಿಂದ ತಪ್ಪಿಸಿ, ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಅನೇಕ ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ಹೆಷ್ಬೋನಿನ ಅರಸನಾದ ಸೀಹೋನಿನ ರಾಜ್ಯದ ಉಳಿದ ಭಾಗವಾಗಿರುವ ಯಗ್ಜೇರ್, ಮೊದಲಾದ ಗಿಲ್ಯಾದಿನ ಎಲ್ಲಾ ಪಟ್ಟಣಗಳು, ರಬ್ಬಾ ಊರಿನ ಪೂರ್ವದಲ್ಲಿರುವ ಅರೋಯೇರ್ ಪಟ್ಟಣದ ವರೆಗೆ ವಿಸ್ತರಿಸಿಕೊಂಡಿರುವ ಅಮ್ಮೋನಿಯರ ಅರ್ಧ ರಾಜ್ಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು