ಯೆಶಾಯ 17:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ದಿನದಲ್ಲಿ ಜನರು ತಮ್ಮ ಸೃಷ್ಟಿಕರ್ತನನ್ನೇ ದೃಷ್ಟಿಸುವರು ಮತ್ತು ಇಸ್ರಾಯೇಲಿನ ಸದಮಲಸ್ವಾಮಿಯ ಕಡೆಗೆ ಕಣ್ಣುಗಳನ್ನು ತಿರುಗಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7-8 ಆ ದಿನದಂದು ಜನರು ತಮ್ಮ ಕೈಯಿಂದ ಕಟ್ಟಿದ ಬಲಿಪೀಠಗಳನ್ನಾಗಲೀ, ಬೆರಳುಗಳಿಂದ ನಿರ್ಮಿಸಿದ ಆಶೇರಾ ದೇವತೆಯ ಸ್ತಂಭಗಳನ್ನಾಗಲೀ, ಧೂಪವೇದಿಕೆಗಳನ್ನಾಗಲೀ ಪೂಜಿಸದೆ ತಮ್ಮ ಸೃಷ್ಟಿಕರ್ತನನ್ನೇ ಲಕ್ಷಿಸಿ, ಇಸ್ರಯೇಲಿನ ಪರಮಪಾವನ ಸ್ವಾಮಿಯ ಕಡೆ ತಿರುಗಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆ ದಿನದಲ್ಲಿ ಜನರು ತಮ್ಮ ಕೈಯಿಂದ ಮಾಡಿದ ಬಲಿಪೀಠಗಳನ್ನು ಲಕ್ಷಿಸದೆಯೂ ತಮ್ಮ ಬೆರಳುಗಳಿಂದ ನಿರ್ಮಿಸಿದ ಅಶೇರವೆಂಬ ವಿಗ್ರಹಸ್ತಂಭಗಳನ್ನಾಗಲಿ ಸೂರ್ಯಸ್ತಂಭಗಳನ್ನಾಗಲಿ ದೃಷ್ಟಿಸದೆಯೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಮಯಗಳಲ್ಲಿ ಜನರು ತಮ್ಮ ನಿರ್ಮಾಣಿಕನಾದ ದೇವರ ಕಡೆಗೆ ದೃಷ್ಟಿಸಿ ನೋಡುವರು. ಅವರ ಕಣ್ಣುಗಳು ಇಸ್ರೇಲಿನ ಪರಿಶುದ್ಧನನ್ನು ನೋಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆ ದಿನದಲ್ಲಿ ಜನರು ತಮ್ಮನ್ನು ಉಂಟುಮಾಡಿದವರ ಮೇಲೆ ದೃಷ್ಟಿಯಿಡುವರು ಮತ್ತು ಇಸ್ರಾಯೇಲಿನ ಪರಿಶುದ್ಧರ ಕಡೆಗೆ ತಿರುಗಿಕೊಳ್ಳುವರು. ಅಧ್ಯಾಯವನ್ನು ನೋಡಿ |
ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಲ್ಲದೆ ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಆ ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.