Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 18:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ನನಗೆ ಹೇಳುವುದೇನೆಂದರೆ, “ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ, ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ : “ಬಿಸಿಹಗಲಿನ ಸೂರ್ಯನಂತೆ, ಕೊಯಿಲುಗಾಲದಲ್ಲಿರುವ ಮಂಜಿನಂತೆ, ನಾನು ನನ್ನ ನಿವಾಸಸ್ಥಾನದಿಂದ ಸುಮ್ಮನೆ ನೋಡುತ್ತಿರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ನನಗೆ ಹೇಳಿರುವದೇನಂದರೆ, ಬಿಸಿಲಿನಲ್ಲಿ ಜಳಜಳಿಸುವ ದಗೆಯಂತೆಯೂ ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ಹೀಗೆನ್ನುತ್ತಾನೆ: “ನನಗಾಗಿ ಸಿದ್ಧಪಡಿಸಲ್ಪಟ್ಟ ಸ್ಥಳದಲ್ಲಿ ಮೌನವಾಗಿದ್ದು ಇವುಗಳನ್ನೆಲ್ಲಾ ವೀಕ್ಷಿಸುವೆನು. ಬೇಸಿಗೆಯ ಮಧ್ಯಾಹ್ನದ ಹೊತ್ತಿನಲ್ಲಿ ಜನರು ವಿಶ್ರಮಿಸುತ್ತಿರುವರು. ಅದು ಬೇಸಿಗೆಯ ಸುಗ್ಗಿಕಾಲವಾಗಿರುವದು; ಮಳೆ ಇರುವದಿಲ್ಲ, ಕೇವಲ ಮುಂಜಾನೆಯ ಇಬ್ಬನಿ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ನನಗೆ ಹೀಗೆ ಹೇಳಿದರು, “ನಾನು ನನ್ನ ವಿಶ್ರಾಂತಿಯನ್ನು ತೆಗೆದುಕೊಳ್ಳುವೆನು. ಬಿಸಿಹಗಲಿನ ಸೂರ್ಯನಂತೆಯೂ ಸುಗ್ಗಿಯಲ್ಲಿನ ಮಂಜಿನ ಮೋಡದಂತೆಯೂ ನಾನು ನನ್ನ ನಿವಾಸಸ್ಥಾನದಲ್ಲಿ ಸುಮ್ಮನೆ ನೋಡುತ್ತಿರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 18:4
17 ತಿಳಿವುಗಳ ಹೋಲಿಕೆ  

ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ, ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೆ ನನ್ನನ್ನು ಆಶ್ರಯಿಸುವರು.


ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪ ಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂಮಿಯು ತನ್ನಲ್ಲಿ ಇಂಗಿದ್ದ ರಕ್ತವನ್ನು ಪ್ರಕಟಮಾಡುವುದು, ತನ್ನ ನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಡುವುದಿಲ್ಲ.”


ಆ ಕಾಲದಲ್ಲಿ ಎತ್ತರವಾದವರೂ, ನುಣುಪಾದ ಚರ್ಮವುಳ್ಳವರೂ, ಸರ್ವದಾ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮ ಮಹತ್ವದ ಚೀಯೋನ್ ಪರ್ವತಕ್ಕೆ, ಆತನಿಗೋಸ್ಕರ ಕಾಣಿಕೆಯನ್ನು ತರುವರು.


ಹೀಗಿರಲು ಜನಾಂಗಗಳ ರಾಯಭಾರಿಗಳಿಗೆ ಏನು ಉತ್ತರ ಕೊಡಬೇಕೆಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಬಾಧೆಪಟ್ಟ ಆತನ ಜನರು ಅದನ್ನು ಆಶ್ರಯಿಸಿಕೊಳ್ಳುವರು ಎಂಬುದೇ.


ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.


ಮೋಡಗಳಿಲ್ಲದ ಪ್ರಾತಃಕಾಲದಲ್ಲಿ ತೇಜೋಮಯನಾಗಿ ಉದಯಿಸಿ, ಮೋಡಗಳನ್ನು ಚದುರಿಸಿಬಿಟ್ಟು, ಮಳೆಬಿದ್ದ ಭೂಮಿಯಿಂದ ಹುಲ್ಲನ್ನು ಮೊಳೆಯಿಸುವ ಸೂರ್ಯನಿಗೆ ಸಮಾನನಾಗಿದ್ದಾನೆ.


ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; ಅದು ತಾವರೆಯಂತೆ ಅರಳುವುದು; ಲೆಬನೋನಿನ ದೇವದಾರು ಮರಗಳ ಹಾಗೆ ಬೇರು ಬಿಟ್ಟುಕೊಳ್ಳುವುದು.


ನನ್ನ ನೀತಿಯನ್ನು ಹತ್ತಿರಕ್ಕೆ ಬರ ಮಾಡುವೆನು. ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು, ಚೀಯೋನಿನಲ್ಲಿ ರಕ್ಷಣಾ ಕಾರ್ಯವನ್ನು ನಡೆಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.”


ಅವರು ಭಯದಿಂದ ತಮ್ಮ ಭರವಸೆಯನ್ನು ಕಳೆದುಕೊಳ್ಳುವರು. ಅವರ ಪ್ರಧಾನರು ಹೆದರಿ ಧ್ವಜಸ್ಥಾನದಿಂದ ದಿಕ್ಕಾಪಾಲಾಗುವರು” ಚೀಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವನ ನುಡಿ ಇದೇ.


ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ! ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು.


ಹುಲ್ಲುಕೊಯ್ದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ, ಭೂಮಿಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ.


ನಿಮ್ಮ ದೇವರಾದ ಯೆಹೋವನು ನಾನೇ ಎಂದು ನಿಮಗೆ ಮನದಟ್ಟಾಗುವುದು. ಆಗ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಸುವುದರಿಂದ, ಯೆರೂಸಲೇಮ್ ಪವಿತ್ರವಾಗಿರುವುದು. ಅನ್ಯರು ಇನ್ನು ಅದರಲ್ಲಿ ಹಾದುಹೋಗುವುದಿಲ್ಲ.


ರಾಜನ ರೋಷವು ಸಿಂಹದ ಗರ್ಜನೆ, ಅವನ ದಯೆಯು ಪೈರಿನ ಇಬ್ಬನಿ.


ಇದಲ್ಲದೆ, ನೀನು ನಿನ್ನ ಸೇವಕನ ಹಾಗೂ ನಿನ್ನ ಪ್ರಜೆಗಳಾದ ಇಸ್ರಾಯೇಲರ ವಿಜ್ಞಾಪನೆಯನ್ನು ಲಾಲಿಸು. ಅವರು ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವಾಗ ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ವಿಜ್ಞಾಪನೆಯನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಯೆಹೋವನಾದ ದೇವರು ಏನನ್ನೂ ಮಾಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು