ಯೆಶಾಯ 19:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗವಾದ ಮೇಘವಾಹನವಾಗಿ ಐಗುಪ್ತಕ್ಕೆ ಬರುವನು. ಆತನು ಅವರಿಗೆ ಎದುರಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತರ ಹೃದಯವು ತಮ್ಮೊಳಗೆ ಕರಗಿ ನೀರಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಈಜಿಪ್ಟಿನ ವಿಷಯವಾಗಿ ದೈವೋಕ್ತಿ : ಇಗೋ, ಸರ್ವೇಶ್ವರ ವೇಗವಾಗಿ ಚಲಿಸುವ ಮೇಘಗಳ ಮೇಲೆ ಈಜಿಪ್ಟಿಗೆ ಬರುವರು. ಅವರ ಮುಂದೆ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯ ಕರಗಿ ನೀರಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗಮೇಘವಾಹನನಾಗಿ ಐಗುಪ್ತಕ್ಕೆ ಬರುವನು; ಆತನು ಸಮ್ಮುಖನಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತ್ಯರ ಹೃದಯವು ತಮ್ಮೊಳಗೆ ಕರಗಿ ನೀರಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಈಜಿಪ್ಟಿನ ವಿಷಯವಾಗಿ ದುಃಖಕರವಾದ ಸಂದೇಶ: ಯೆಹೋವನು ವೇಗವಾಗಿ ಬರುವ ಮೋಡದೊಂದಿಗೆ ಬರುತ್ತಿದ್ದಾನೆ. ಆತನು ಈಜಿಪ್ಟನ್ನು ಪ್ರವೇಶಿಸುವಾಗ ಈಜಿಪ್ಟಿನ ಸುಳ್ಳುದೇವರುಗಳೆಲ್ಲಾ ಹೆದರಿ ನಡುಗುವವು. ಈಜಿಪ್ಟು ಧೈರ್ಯಶಾಲಿ ದೇಶವಾಗಿದ್ದರೂ, ಅದರ ಧೈರ್ಯ ಮೇಣದಂತೆ ಕರಗಿಹೋಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಈಜಿಪ್ಟಿನವರ ವಿಷಯವಾದ ಪ್ರವಾದನೆ: ಇಗೋ, ಯೆಹೋವ ದೇವರು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಈಜಿಪ್ಟಿಗೆ ಬರುತ್ತಾರೆ. ಅವರು ಸಮ್ಮುಖರಾದಾಗ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯಗಳು ಅದರ ಮಧ್ಯೆ ಭಯದಿಂದ ಕರಗುವುವು. ಅಧ್ಯಾಯವನ್ನು ನೋಡಿ |