Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಚೋಯನಿನ ಪ್ರಭುಗಳು ಮೂರ್ಖರಾಗಿದ್ದಾರೆ. ನೋಫಿನ ಪ್ರಧಾನರು ಮೋಸ ಹೋಗಿದ್ದಾರೆ. ಐಗುಪ್ತದ ಕುಲಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಚೋಯನಿನ ಅಧಿಪತಿಗಳು ಮಂದಮತಿಗಳು. ನೋಫಿನ ಮುಖ್ಯಮಂತ್ರಿಗಳು ಮೋಸಗಾರರು. ಈಜಿಪ್ಟ್ ಜನಾಂಗದ ಮೂಲೆಗಲ್ಲಿನಂತಿದ್ದವರೇ ಜನರನ್ನು ತಪ್ಪುದಾರಿಗೆ ಎಳೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಚೋಯನಿನ ಪ್ರಭುಗಳು ಬುದ್ಧಿಗೆಟ್ಟಿದ್ದಾರೆ, ನೋಫಿನ ಪ್ರಧಾನರು ಮೋಸಹೋಗಿದ್ದಾರೆ, ಐಗುಪ್ತದ ಕುಲಗಳ ಪ್ರಮುಖರು ಅದನ್ನು ಭ್ರಮಗೊಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಚೋಯನಿನ ಅಧಿಪತಿಗಳು ಮೋಸಹೋದರು. ನೋಫಿನ ಪ್ರಮುಖರು ಸುಳ್ಳನ್ನು ನಂಬಿದರು. ಆದ್ದರಿಂದ ನಾಯಕರು ಈಜಿಪ್ಟನ್ನು ತಪ್ಪುದಾರಿಗೆ ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಚೋವನಿನ ಶ್ರೇಷ್ಠರು ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಈಜಿಪ್ಟಿನ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿದ್ದಾರೆ. ಅದನ್ನು ತಪ್ಪು ದಾರಿಗೆಳೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:13
14 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನೋಫಿನ ವಿಗ್ರಹಗಳನ್ನೆಲ್ಲ ಒಡೆದು ಕೊನೆಗಾಣಿಸುವೆನು; ಐಗುಪ್ತ ದೇಶದಲ್ಲಿ ಇನ್ನು ಯಾವ ಅರಸನೂ ಇರಲಾರನು; ನಾನು ಆ ದೇಶಕ್ಕೆ ಭಯವನ್ನು ಉಂಟುಮಾಡುವೆನು.


ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.


ಆ ವಂಶದಿಂದ ಮೂಲೆಗಲ್ಲು, ಆ ವಂಶದಿಂದ ಮೊಳೆ, ಆ ವಂಶದಿಂದ ಯುದ್ಧದ ಬಿಲ್ಲು, ಅಂತು ಆ ವಂಶದೊಳಗಿಂದ ಸಕಲ ಅಧಿಕಾರಿಗಳು ಉಂಟಾಗುವರು.


ಐಗುಪ್ತದಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೋ; ನೋಫ್ ಪಟ್ಟಣವು ಹಾಳಾಗಿ ಸುಟ್ಟು ನಿರ್ಜನವಾಗುವುದು.


“ಐಗುಪ್ತದಲ್ಲಿ ಪ್ರಕಟಿಸಿರಿ, ಮಿಗ್ದೋಲ್, ತಹಪನೇಸ್, ನೋಫ್, ಎಂಬ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ, ‘ಐಗುಪ್ತವೇ, ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ’ ಎಂದು ಸಾರಿರಿ.


ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿರುತ್ತದೆ. ನೀನು ಫರೋಹನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ.


ಆದ್ದರಿಂದ ನಂಬುವವರಾದ ನಿಮಗೇ ಈ ಕಲ್ಲು ಅತ್ಯಮೂಲ್ಯವಾದುದು. ಆದರೆ ನಂಬದೆಯಿರುವವರಿಗೆ, “ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು”


ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.


ನಾನು ಐಗುಪ್ತಕ್ಕೆ ಕಿಚ್ಚನ್ನು ಹತ್ತಿಸಲು ಸೀನು ಪ್ರಾಣ ಸಂಕಟಪಡುವುದು; ನೋಪುರವು ಭಂಗಕ್ಕೆ ಈಡಾಗುವುದು; ನೋಫಿನ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು.


ಆಗ ಸೌಲನು ಪ್ರಜೆಗಳ ಮುಖಂಡರಿಗೆ, “ನೀವೆಲ್ಲರೂ ಇಲ್ಲಿ ಬಂದು, ಈ ಹೊತ್ತು ಪಾಪ ಯಾವುದರಿಂದ ಉಂಟಾಯಿತು ಎಂದು ವಿಚಾರಿಸಿ ಗೊತ್ತುಮಾಡಿರಿ.


ನಾನು ಅವನನ್ನು ನೋಡುವೆನು, ಈಗಲ್ಲ. ಆತನನ್ನು ದೃಷ್ಟಿಸುವೆನು, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬ ವಂಶದವರಲ್ಲಿ ನಕ್ಷತ್ರವು ಉದಯಿಸುವುದು. ಇಸ್ರಾಯೇಲರಲ್ಲಿ ರಾಜದಂಡವು ಏಳುವುದು. ಅದು ಮೋವಾಬ್ಯರ ತಲೆಯನ್ನು ಸೀಳಿಹಾಕುವುದು ಸೇತನ ಎಲ್ಲಾ ಮಕ್ಕಳನ್ನು ಸಂಹರಿಸಿವುದು.


ಐಗುಪ್ತ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ಪಟ್ಟಣಗಳಲ್ಲಿಯೂ, ಪತ್ರೋಸ್ ಪ್ರಾಂತ್ಯದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ,


ನಾನು ಪತ್ರೋಸನ್ನು ಹಾಳುಮಾಡಿ, ಚೋವನಿಗೆ ಬೆಂಕಿಯಿಡುವೆನು. ನೋಪುರವನ್ನು ದಂಡಿಸಿ,


ಆಹಾ, ಅವರು ವಿನಾಶದ ದೇಶವನ್ನು ಬಿಟ್ಟುಹೋಗುವರು; ಐಗುಪ್ತವು ಅವರಿಗೆ ಸ್ಮಶಾನವಾಗುವುದು, ಮೋಫ್ ಪಟ್ಟಣವು ಅವರನ್ನು ಹೂಣಿಡುವುದು; ಅವರ ಇಷ್ಟದ ಬೆಳ್ಳಿಯ ಒಡವೆಗಳು ಮುಳ್ಳು ಪೊದೆಗಳ ಪಾಲಾಗುವವು; ಮುಳ್ಳುಗಿಡಗಳು ಅವರ ಗುಡಾರಗಳಲ್ಲಿ ಹುಟ್ಟಿಕೊಳ್ಳುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು