Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆ ದಿನದಲ್ಲಿ, ಇಸ್ರಾಯೇಲರು ಐಗುಪ್ತ, ಅಶ್ಶೂರಗಳೊಂದಿಗೆ ಮೂರನೆಯದಾಗಿ ಬೆರೆತು ಲೋಕದ ಮಧ್ಯದಲ್ಲಿ ಆಶೀರ್ವಾದ ನಿಧಿಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆ ದಿನದಂದು ಇಸ್ರಯೇಲ್ ಈಜಿಪ್ಟಿನೊಂದಿಗೂ ಅಸ್ಸೀರಿಯದೊಂದಿಗೂ ಸೇರುವುದು. ಈ ಮೂರು ರಾಷ್ಟ್ರಗಳು ಇಡೀ ಜಗಕ್ಕೆ ಆಶೀರ್ವಾದದ ಕೇಂದ್ರವಾಗಿ ಪರಿಣಮಿಸುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆ ದಿನದಲ್ಲಿ ಇಸ್ರಾಯೇಲು ಐಗುಪ್ತ ಅಶ್ಶೂರಗಳೊಂದಿಗೆ ಕಲೆತು ಈ ಮೂರೂ ಲೋಕದ ಮಧ್ಯದಲ್ಲಿ ಆಶೀರ್ವಾದದ ನಿಧಿಯಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆ ಸಮಯದಲ್ಲಿ ಇಸ್ರೇಲ್, ಅಶ್ಶೂರ ಮತ್ತು ಈಜಿಪ್ಟು ಒಟ್ಟಾಗಿ ಸೇರಿ ದೇಶವನ್ನು ನಿಯಂತ್ರಿಸುವರು. ಇದು ದೇಶಕ್ಕೆ ಆಶೀರ್ವಾದದಾಯಕವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆ ದಿನದಲ್ಲಿ ಇಸ್ರಾಯೇಲು ಈಜಿಪ್ಟಿನವರ ಮತ್ತು ಅಸ್ಸೀರಿಯದವರ ಸಂಗಡ ಮೂರನೆಯದಾಗಿ ದೇಶದ ಮಧ್ಯದಲ್ಲಿ ಆಶೀರ್ವಾದವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:24
22 ತಿಳಿವುಗಳ ಹೋಲಿಕೆ  

ಯೆಹೋವನು ಹೀಗನ್ನುತ್ತಾನೆ, “ರಸ ದೊರೆಯಬಹುದಾದ ದ್ರಾಕ್ಷಿಯ ಗೊಂಚಲನ್ನು ಒಬ್ಬನು ನೋಡಿ, ‘ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ’ ಎನ್ನುವಂತೆ, ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು, ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು,


ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.


ಅಬ್ರಹಾಮನಿಗೆ ಉಂಟಾದ ಆಶೀರ್ವಾದವು, ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆಲ್ಲ ಸಿಗುವಂತೆಯೂ ಮತ್ತು ದೇವರು ವಾಗ್ದಾನ ಮಾಡಿದ ಪರಿಶುದ್ಧಾತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ, ತನ್ನ ಮರಣದ ಮೂಲಕ ಕ್ರಿಸ್ತನು ನಮ್ಮನ್ನು ಕೊಂಡುಕೊಂಡನು.


ಇದನ್ನು ಮಾಡುವುದಕ್ಕೆ ಇವರು ಇಷ್ಟಪಟ್ಟಿದ್ದಲ್ಲದೆ ಇವರು ಅವರ ಹಂಗಿನವರಾಗಿದ್ದಾರೆ. ಹೇಗೆಂದರೆ ಅನ್ಯಜನರು ಅವರ ಆತ್ಮ ಸಂಬಂಧವಾದ ಸಂಪತ್ತಿಗೆ ಪಾಲುಗಾರರಾದ ಮೇಲೆ ಲೋಕಸಂಬಂಧವಾದ ಕಾರ್ಯಗಳಲ್ಲಿ ಅವರಿಗೆ ಸೇವೆ ಮಾಡುವ ಹಂಗಿನಲ್ಲಿದ್ದಾರಲ್ಲವೇ.


ಆತನು ಅನ್ಯಜನರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ” ಅಂದನು.


ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ, ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿ ಆಶೀರ್ವದಿಸುವೆನು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!”


ನಾನು ಅವರನ್ನೂ, ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯು ಆಗುವುದು.


ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ, ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು; ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು.


ಒಬ್ಬನು ಕಟ್ಟಿದ ಮನೆಯಲ್ಲಿ ಬೇರೊಬ್ಬನು ವಾಸಿಸನು; ಒಬ್ಬನು ಮಾಡಿದ ತೋಟದ ಫಲವು ಇನ್ನೊಬ್ಬನಿಗೆ ವಶವಾಗದು; ನನ್ನ ಜನರ ಆಯುಸ್ಸು ವೃಕ್ಷದ ಆಯುಸ್ಸಿನಂತಿರುವುದು; ನನ್ನ ಆಪ್ತರು ತಮ್ಮ ಕೈಕೆಲಸದ ಆದಾಯವನ್ನು ಸಂಪೂರ್ಣವಾಗಿ ಅನುಭವಿಸುವರು.


ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಜನಾಂಗಗಳಿಗೆ ಕೈಸನ್ನೆಮಾಡಿ ದೇಶಾಂತರಗಳಿಗೆ ನನ್ನ ಧ್ವಜವನ್ನು ಎತ್ತುವೆನು. ಅವರು ನಿನ್ನ ಕುಮಾರರನ್ನು ಎದೆಗಪ್ಪಿಕೊಂಡು ಬರುವರು. ನಿನ್ನ ಕುಮಾರ್ತೆಯರನ್ನು ಹೆಗಲ ಮೇಲೆ ಕರೆದುತರುವರು.


ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”


ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು.


ಜನಾಂಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ಮತ್ತು ದೇಶಕ್ಕೋಸ್ಕರವೂ ದೋಷ ಪರಿಹಾರಮಾಡುತ್ತಾನೆ.


ಆ ದಿನದಲ್ಲಿ, ಐಗುಪ್ತದಿಂದ ಅಶ್ಶೂರಕ್ಕೆ ಹೋಗಲು ರಾಜಮಾರ್ಗವಿರುವುದು. ಅಶ್ಶೂರ್ಯರು ಐಗುಪ್ತಕ್ಕೂ, ಐಗುಪ್ತರು ಅಶ್ಶೂರಕ್ಕೂ ಹೋಗಿ ಬರುವರು. ಐಗುಪ್ತರು ಅಶ್ಶೂರ್ಯರೊಂದಿಗೆ ಯೆಹೋವನನ್ನು ಆರಾಧಿಸುವರು.


“ನನ್ನ ಪ್ರಜೆಯಾದ ಐಗುಪ್ತಕ್ಕೂ, ನನ್ನ ಕೈಯಿಂದ ಸೃಷ್ಟಿಸಲ್ಪಟ್ಟ ಅಶ್ಶೂರಕ್ಕೂ, ನನ್ನ ಸ್ವತ್ತಾದ ಇಸ್ರಾಯೇಲಿಗೂ ಶುಭವಾಗಲಿ” ಎಂದು ಸೇನಾಧೀಶ್ವರನಾದ ಯೆಹೋವನು ಅವುಗಳನ್ನು ಆಶೀರ್ವದಿಸುವನು.


ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ, ಐಗುಪ್ತದಲ್ಲಿ ದೇಶಭ್ರಷ್ಟರಾದವರೂ ಬಂದು ಪರಿಶುದ್ಧ ಪರ್ವತವಾದ ಯೆರೂಸಲೇಮಿನಲ್ಲಿ ಯೆಹೋವನನ್ನು ಆರಾಧಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು