Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕಾಲುವೆಗಳು ನಾರುವವು. ಐಗುಪ್ತದ ಹೊಳೆಗಳು ಇಳಿದು, ನೀರಿಲ್ಲದೆ ಒಣಗಿ ಹೋಗುವವು. ಆಪು ಮತ್ತು ಜಂಬುಹುಲ್ಲುಗಳು ಬಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಕಾಲುವೆಗಳು ನಾರುವುವು. ಈಜಿಪ್ಟಿನ ಉಪನದಿಗಳು ಇಳಿದು ಇಂಗಿಹೋಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಪ್ರವಾಹವು ಇಂಗಿ ಒಣಗುವದು, ಕಾಲುವೆಗಳು ನಾರುವವು, ಐಗುಪ್ತದ ಹೊಳೆಗಳು ಇಳಿದು ನೀರಿಲ್ಲದೆ ಹೋಗುವವು, ಆಪೂ ಜಂಬುಹುಲ್ಲೂ ಬಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಎಲ್ಲಾ ನದಿಗಳಿಂದ ದುರ್ವಾಸನೆ ಹೊರಡುವದು. ಈಜಿಪ್ಟಿನ ಕಾಲಿವೆಗಳು ಬತ್ತಿಹೋಗುತ್ತವೆ; ಜಲಸಸ್ಯಗಳೆಲ್ಲ ಒಣಗಿಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಕಾಲುವೆಗಳು ನಾರುವುವು. ಈಜಿಪ್ಟನ ಉಪನದಿಗಳು ದೂರಕ್ಕೆ ಇಳಿದು ನೀರಿಲ್ಲದೆ ಹೋಗುವುವು. ಜಂಬು ಹುಲ್ಲು ಬಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:6
10 ತಿಳಿವುಗಳ ಹೋಲಿಕೆ  

ಪರದೇಶಗಳಲ್ಲಿ ಅಗೆದು ನೀರು ತೆಗೆದುಕೊಂಡು ಕುಡಿದಿದ್ದೇನೆ; ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ’ ಎಂಬುದಾಗಿ ನೀನು ಕೊಚ್ಚಿಕೊಂಡಿದ್ದಿ.


ಜವುಗು ಇಲ್ಲದೆ ಜಂಬುಹುಲ್ಲು ಬೆಳೆಯುವುದೇ? ನೀರಿಲ್ಲದೆ ಆಪುಹುಲ್ಲು ಮೊಳೆಯುವುದೇ?


ನಾನು ಅನ್ಯದೇಶದಲ್ಲಿ ಬಾವಿಗಳನ್ನು ಅಗೆದು ನೀರು ತೆಗೆದು ಕುಡಿದಿದ್ದೇನೆ! ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ನದಿಗಳನ್ನು ಬತ್ತಿಸಿದ್ದೇನೆ ಎಂಬುದಾಗಿ ನೀನು ಕೊಚ್ಚಿಕೊಂಡಿದ್ದೀಯಲ್ಲವೇ?”


ನದಿಯಲ್ಲಿರುವ ಮೀನುಗಳು ಸಾಯುವವು. ನದಿಯು ಹೊಲಸಾಗಿ ನಾರುವುದು. ಅದನ್ನು ಕುಡಿಯುವುದಕ್ಕೆ ಐಗುಪ್ತರಿಗೆ ಹೇಸಿಗೆಯಾಗುವುದು’ ಎಂದು ಹೇಳಬೇಕು” ಅಂದನು.


ಆಕೆ ಅದನ್ನು ಇನ್ನು ಹೆಚ್ಚುಕಾಲ ಮರೆಮಾಡಲಾಗದೆ, ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು ಜೇಡಿಮಣ್ಣನ್ನೂ ರಾಳವನ್ನು ಹಚ್ಚಿ, ಕೂಸನ್ನು ಅದರಲ್ಲಿ ಮಲಗಿಸಿ, ನೈಲ್ ನದಿಯ ಅಂಚಿನಲ್ಲಿರುವ ಜಂಬುಹುಲ್ಲಿನಲ್ಲಿ ಇಟ್ಟಳು.


ರಾಯಭಾರಿಗಳನ್ನು ನೀರಿನ ಮೇಲೆ ಬೆಂಡಿನ ದೋಣಿಗಳಲ್ಲಿ ನದಿಯ ಮಾರ್ಗವಾಗಿ ಕಳುಹಿಸುವ ದೇಶ, ವೇಗವಾಗಿ ಬರುತ್ತಿರುವ ದೂತರೇ, ಎತ್ತರವಾದವರೂ, ನಯವಾದ ಚರ್ಮವುಳ್ಳವರೂ, ಸರ್ವ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರ ಬಳಿಗೆ ಹೋಗಿರಿ.


ನಿಮ್ರೀಮ್ ಹೊಳೆಯು ಹಾಳಾಯಿತು, ಹಸಿಹುಲ್ಲು ಬಾಡಿತು, ಮೇವು ತೀರಿತು, ಯಾವ ಹಸಿರೂ ಇಲ್ಲ.


ಅಷ್ಟರಲ್ಲಿ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಆ ನೈಲ್ ನದಿಯೊಳಗಿಂದ ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.


ನೀನು ನೋ ಆಮೋನ್ ಪಟ್ಟಣಗಿಂತ ಭದ್ರವಾಗಿದ್ದೀಯೋ? ಅದು ನೈಲಿನ ಪ್ರವಾಹಗಳಲ್ಲಿ ನೆಲೆಯಾಗಿತ್ತು. ನೀರು ಅದನ್ನು ಸುತ್ತಿಕೊಂಡಿತ್ತು, ಮಹಾ ನದಿಯು ಅದಕ್ಕೆ ಪೌಳಿಗೋಡೆ, ಜಲಾಶಯವು ಅದರ ದುರ್ಗ.


ಇನ್ನೂ ಎಳೆಯದಾಗಿರುವಾಗಲೇ ಮಿಕ್ಕ ಎಲ್ಲಾ ಸಸಿಗಳಿಗಿಂತಲೂ ಮುಂಚಿತವಾಗಿ, ಯಾರೂ ಕೊಯ್ಯದೆ ಇದು ಒಣಗಿ ಹೋಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು