Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬೆಸ್ತರು ದುಃಖಿಸುವರು ಮತ್ತು ನೈಲ್ ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು. ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಬೆಸ್ತರು ಕಣ್ಣೀರಿಡುವರು; ಗಾಳ ಹಾಕುವವರು ಗೋಳಿಡುವರು; ಬಲೆ ಬೀಸುವವರು ಸೊರಗಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಬೆಸ್ತರು ಪ್ರಲಾಪಿಸುವರು, ನದಿಯಲ್ಲಿ ಗಾಳಹಾಕುವವರು ಶೋಕಪಡುವರು, ನೀರಿನ ಮೇಲೆ ಬಲೆಬೀಸುವವರು ಕುಗ್ಗುವರು, ನಯವಾದ ನಾರಿನ ಕೆಲಸದವರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬೆಸ್ತರೂ ಮೀನು ಹಿಡಿಯುವವರೂ ನೈಲ್ ನದಿಯ ನೀರು ಬತ್ತಿಹೋದದ್ದಕ್ಕಾಗಿ ದುಃಖಿಸುತ್ತಾ ಅಳುವರು. ಅವರು ಜೀವನೋಪಾಯಕ್ಕಾಗಿ ನೈಲ್ ನದಿಯನ್ನು ಆಧಾರ ಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮೀನುಗಾರರು ಕೂಡ ದುಃಖಿಸುವರು ಮತ್ತು ನೈಲ್ ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು. ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:8
6 ತಿಳಿವುಗಳ ಹೋಲಿಕೆ  

ನಲಿದಾಡುತ್ತಾ ಶತ್ರುಗಳು ನಮ್ಮನ್ನು ಗಾಳಗಳಿಂದ ಹಿಡಿದು ತಮ್ಮ ಬಲೆಗಳಲ್ಲಿ ರಾಶಿ ರಾಶಿಯಾಗಿ ಬಾಚಿಕೊಂಡು ಹೋಗಬೇಕೋ?


ಆಗ ಆ ಸಮುದ್ರದ ತೀರದಲ್ಲಿ ಬೆಸ್ತರು ನಿಂತಿರುವರು; ಏನ್ ಗೆದಿಯಿಂದ ಏನ್ ಎಗ್ಲಯಿಮಿನವರೆಗೆ ದಡವೆಲ್ಲಾ ಬಲೆ ಹಾಸುವ ಸ್ಥಳವಾಗುವುದು; ಬಗೆಬಗೆಯ ಮೀನುಗಳು ಮಹಾಸಾಗರದ ಮೀನುಗಳಂತೆ ಅವರಿಗೆ ರಾಶಿ ರಾಶಿಯಾಗಿ ಸಿಕ್ಕುವವು.


ಐಗುಪ್ತ ದೇಶದಲ್ಲಿ ನಾವು ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯಿ, ಕರ್ಬೂಜ, ಈರುಳ್ಳಿ ಹಾಗೂ ಬೆಳ್ಳುಳ್ಳಿ ಇವು ನೆನಪಿಗೆ ಬರುತ್ತವೆ.


ಅದರಲ್ಲಿದ್ದ ಮೀನುಗಳು ಸತ್ತುಹೋದವು. ನದಿಯು ದುರ್ವಾಸನೆಗೊಂಡಿದ್ದರಿಂದ ಐಗುಪ್ತರು ನೈಲ್ ನದಿಯ ನೀರನ್ನು ಕುಡಿಯಲಾರದೆ ಹೋದರು. ಐಗುಪ್ತ ದೇಶದಲ್ಲೆಲ್ಲಾ ರಕ್ತವೇ ಕಾಣುತಿತ್ತು.


‘ನಿಮಗೋಸ್ಕರ ಕೊಳಲೂದಿದೆವು ನೀವು ಕುಣಿಯಲಿಲ್ಲ. ಶೋಕಿಸಿದೆವು ನೀವು ಗೋಳಾಡಲಿಲ್ಲ’ ಎಂದು ಕೂಗಿ ಹೇಳುವಂಥ ಮಕ್ಕಳಿಗೆ ಸಮಾನವಾಗಿದೆ.


ಹೀಗಿರಲು, ತಮ್ಮ ಬಲೆಗೆ ಸಿಕ್ಕಿದ್ದನ್ನು ಅವರು ನಿತ್ಯವೂ ಸುರಿಯುತ್ತಿರಲೋ, ಜನಾಂಗಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು