Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 2:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸೇನಾಧೀಶ್ವರನಾದ ಯೆಹೋವನ ನ್ಯಾಯನಿರ್ಣಯದ ದಿನವು ಗರ್ವದಿಂದ ಹೆಚ್ಚಿಕೊಂಡಿರುವ ಪ್ರತಿಯೊಬ್ಬನ ಮೇಲೆ ಬರುವುದು. ಆಗ ಅವನು ತಗ್ಗಿಸಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸೇನಾಧೀಶ್ವರ ಸರ್ವೇಶ್ವರ ದಿನವೊಂದನ್ನು ಗೊತ್ತುಮಾಡಿದ್ದಾರೆ. ಅಹಂಕಾರದಿಂದ ಉಬ್ಬಿಹೋದವರಿಗೆ, ಉದ್ಧಟತನದಿಂದ ಕೊಬ್ಬಿಹೋದವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸೇನಾಧೀಶ್ವರನಾದ ಯೆಹೋವನ [ನ್ಯಾಯನಿರ್ಣಯ] ದಿವಸವು ಗರ್ವದಿಂದ ಹೆಚ್ಚಿಕೊಂಡಿರುವ ಸಮಸ್ತಕ್ಕೂ ಸಂಭವಿಸುವದು; ಆಗ ಅದೆಲ್ಲಾ ತಗ್ಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸರ್ವಶಕ್ತನಾದ ಯೆಹೋವನು ಒಂದು ವಿಶೇಷ ದಿನವನ್ನು ಯೋಜಿಸಿರುತ್ತಾನೆ. ಆ ದಿನದಲ್ಲಿ ಯೆಹೋವನು ಅಹಂಕಾರಿಗಳನ್ನೂ ಜಂಬಕೊಚ್ಚಿಕೊಳ್ಳುವವರನ್ನೂ ಶಿಕ್ಷಿಸುವನು. ಆಗ ಆ ಅಹಂಕಾರಿಗಳನ್ನು ಜನರು ದೊಡ್ಡಜನರೆಂದು ಪರಿಗಣಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಸೇನಾಧೀಶ್ವರ ಯೆಹೋವ ದೇವರ ದಿನವು ಗರ್ವ ಹಾಗೂ ಅಹಂಭಾವದಿಂದ ತುಂಬಿರುವವರ ಮೇಲೆಯೂ, ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವುದು, ದೇವರು ಅವರನ್ನು ತಗ್ಗಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 2:12
42 ತಿಳಿವುಗಳ ಹೋಲಿಕೆ  

“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.


ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ, ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ.


ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.


ಅಹಂಕಾರಿಗಳೆಲ್ಲಾ ಯೆಹೋವನಿಗೆ ಅಸಹ್ಯ, ಅವರಿಗೆ ದಂಡನೆ ಖಂಡಿತ.


ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.


ರಾತ್ರಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವುದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.


ಅವನನ್ನು ಸೈತಾನನಿಗೆ ಒಪ್ಪಿಸಿರಿ ಯಾಕೆಂದರೆ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವುದಕ್ಕಾಗಿ ಅವನ ಶರೀರಭಾವವು ನಾಶವಾಗುವಂತೆ ಕರ್ತನಾದ ಯೇಸುವಿನ ಶಕ್ತಿಯಿಂದ ತೀರ್ಪು ಮಾಡಿದ್ದೇನೆ.


ತನ್ನನ್ನು ಹೆಚ್ಚಿಸಿಕೊಳ್ಳುವವನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.


ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವುದಕ್ಕೆ ಮೊದಲೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು;


ಯೆಹೋವನ ದಿನವನ್ನು ನಿರೀಕ್ಷಿಸಿಕೊಂಡವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನ ದಿನವು ನಿಮಗೇಕೆ? ಅದು ಬೆಳಕಲ್ಲ ಕತ್ತಲೆಯೇ.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಯೆಹೋವನ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ನೀವು ಪೌಳಿ ಗೋಡೆಯ ಒಡಕುಗಳನ್ನೇರಲಿಲ್ಲ, ಇಸ್ರಾಯೇಲ್ ವಂಶದ ರಕ್ಷಣೆಗಾಗಿ ಗೋಡೆಯನ್ನು ಭದ್ರ ಮಾಡಲೂ ಇಲ್ಲ. ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿ,


ಆದರೆ ಆ ಯುದ್ಧ ದಿನವು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ದಿನವಾಗಿದೆ; ಅದು ದಂಡನೆಯ ದಿನ; ಆಗ ಖಡ್ಗವು ನುಂಗಿ ತಣಿಯುವುದು, ಅವರ ರಕ್ತವನ್ನು ತುಂಬಾ ಹೀರುವುದು. ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಉತ್ತರ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿದ್ದಾನಲ್ಲಾ.


ಆ ದಿನದಲ್ಲಿ ಯೆಹೋವನು ಆಕಾಶಮಂಡಲದ ದೂತಸೈನ್ಯವನ್ನೂ, ಭೂಮಂಡಲದ ಒಡೆಯರನ್ನೂ ದಂಡಿಸುವನು.


ಭೂಮಿಯು ಪ್ರಲಾಪಿಸುತ್ತಾ ಬಳಲಿದೆ, ಲೋಕವು ಕುಗ್ಗಿಹೋಗಿದೆ, ಲೋಕದ ಉನ್ನತರು ಕಂಗೆಟ್ಟಿದ್ದಾರೆ.


ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭೂಮಿಯನ್ನು ಹಾಳು ಮಾಡಿ, ಪಾಪಿಗಳನ್ನು ನಿರ್ಮೂಲಮಾಡುವುದಕ್ಕೆ ಆತನ ಕೋಪೋದ್ರೇಕದಿಂದಲೂ, ತೀಕ್ಷ್ಣವಾದ ರೋಷದಿಂದಲೂ ಕ್ರೂರವಾಗಿರುವುದು.


ಗೋಳಾಡಿರಿ! ಏಕೆಂದರೆ ಯೆಹೋವನ ದಿನವು ಸಮೀಪಿಸಿತು. ಅದು ಸರ್ವಶಕ್ತನಿಂದ ನಾಶವಾಗುವಂತೆ ಬರುವುದು.


ದೀನರನ್ನು ಉದ್ಧರಿಸುತ್ತಿ. ಹಮ್ಮಿನವರನ್ನು ಕಂಡುಹಿಡಿದು ತಗ್ಗಿಸಿಬಿಡುತ್ತಿ.


“ಸರ್ವಶಕ್ತನಾದ ದೇವರು ಏಕೆ ದುಷ್ಟರಿಗೆ ದಂಡನೆಯ ಕಾಲಗಳನ್ನು ನೇಮಿಸಿ ಇಟ್ಟುಕೊಂಡಿಲ್ಲ? ಆತನನ್ನು ಅರಿತವರಿಗೆ ಆತನ ನ್ಯಾಯತೀರ್ಪಿನ ದಿನಗಳು ಏಕೆ ಗೋಚರವಾಗುವುದಿಲ್ಲ?


ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ; ನನಗೆ ಸೊಕ್ಕಿನ ಕಣ್ಣುಗಳಿಲ್ಲ; ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ.


ಬೆಟ್ಟಗುಡ್ಡಗಳನ್ನು ನಾಶಪಡಿಸಿ ಅಲ್ಲಿಯ ಮೇವನ್ನೆಲ್ಲಾ ಒಣಗಿಸಿ, ನದಿಗಳನ್ನು ಒಣ ದಿಣ್ಣೆಮಾಡಿ ಕೆರೆಗಳನ್ನು ಬತ್ತಿಸುವೆನು.


ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ,


ಅಯ್ಯೋ, ಆ ದಿನವು ಘೋರವಾದದ್ದು, ಅಂಥ ದಿನ ಮತ್ತೊಂದಿಲ್ಲ, ಅದು ಯಾಕೋಬರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.”


ಆದಕಾರಣ ಯೆಹೋವನು ಇಂತೆನ್ನುತ್ತಾನೆ, “ಇಗೋ ಈ ವಂಶಕ್ಕೆ ನಾನೇ ಕೇಡನ್ನು ಕಲ್ಪಿಸುತ್ತೇನೆ, ಅದರ ಭಾರದಿಂದ ನಿಮ್ಮ ಕುತ್ತಿಗೆಗಳನ್ನು ತಪ್ಪಿಸಿಕೊಳ್ಳಲಾರಿರಿ, ನೀವು ತಲೆಯೆತ್ತಿ ನಡೆಯುವುದಕ್ಕಾಗದು. ಅದು ಕೆಟ್ಟ ಕಾಲವೇ ಸರಿ.


ನಿನ್ನ ದೇಶದ ಪಟ್ಟಣಗಳನ್ನು ಹಾಳುಮಾಡಿ, ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.


ಕೋಟೆಗಳನ್ನೂ, ದೊಡ್ಡ ಕೊತ್ತಲುಗಳನ್ನೂ ಹಿಡಿಯಲು, ಆರ್ಭಟಿಸಿ ಕೊಂಬೂದುವ ದಿನ.


“ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೆ ಈಡಾಗುವವು; ಆಗ ತಮ್ಮ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.


ನೀನೇ ನನ್ನ ದೀಪವನ್ನು ಹೊತ್ತಿಸುವವನಲ್ಲವೇ; ನನ್ನ ದೇವರಾದ ಯೆಹೋವನು ನನಗೆ ಬೆಳಕನ್ನು ಕೊಟ್ಟು ಕತ್ತಲನ್ನು ಪರಿಹರಿಸುವವನು.


ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ.


ಲೋಕದ ನ್ಯಾಯಾಧಿಪತಿಯೇ, ಏಳು; ಗರ್ವಿಷ್ಠರಿಗೆ ತಕ್ಕ ಶಿಕ್ಷೆಯನ್ನು ಕೊಡು.


ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು.


ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”


ಆಹಾ, ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಂಬೆಗಳನ್ನು ಕತ್ತರಿಸುವನು. ಅವು ಧಡಮ್ಮನೆ ಬೀಳುವವು. ಉನ್ನತವಾದ ವೃಕ್ಷಗಳು ಕಡಿದು ಕೆಳಗೆ ಬೀಳುವವು. ಎತ್ತರವಾದ ಮರಗಳು ನೆಲದ ಪಾಲಾಗುವವು.


ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು.


ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧ ಸ್ಥಳಗಳಿಗೆ ತಳ್ಳಲ್ಪಡುವೆ.


ಪ್ರಭುಗಳನ್ನು ನಿರ್ನಾಮ ಮಾಡುತ್ತಾನೆ, ಭೂಪತಿಗಳನ್ನು ಶೂನ್ಯಗೊಳಿಸುತ್ತಾನೆ.


ನನ್ನ ಸ್ವಾಸ್ತ್ಯವಾದ ಜನವು ನನ್ನ ದೃಷ್ಟಿಗೆ ಬೇಟೆಯ ಹಕ್ಕಿಯಂತಿದೆ, ಹದ್ದುಗಳು ಅದರ ಸುತ್ತಲೂ ವಿರುದ್ಧವಾಗಿ ಕುಳಿತಿವೆಯೋ? ಹೋಗಿರಿ, ಅದನ್ನು ತಿಂದುಬಿಡುವುದಕ್ಕೆ ಎಲ್ಲಾ ಕಾಡುಮೃಗಗಳನ್ನು ಕರೆತನ್ನಿರಿ.


“ಇದು ಯೆಹೋವನಾದ ನನ್ನ ನುಡಿ, ಈ ನಡುಕಟ್ಟಿನಂತೆ ನಾನು ಯೆಹೂದದ ದೊಡ್ಡಸ್ತಿಕೆಯನ್ನೂ ಮತ್ತು ಯೆರೂಸಲೇಮಿನ ಬಲು ದೊಡ್ಡಸ್ತಿಕೆಯನ್ನೂ ಕೆಡಿಸಿಬಿಡುವೆನು.


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ, “ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನ್ನ ವಿರುದ್ಧವಾಗಿದ್ದೇನೆ; ನಿನಗೆ ಹೊತ್ತು ಬಂದಿದೆ, ನಿನ್ನನ್ನು ದಂಡಿಸತಕ್ಕ ಕಾಲ ಸಂಭವಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು