ಯೆಶಾಯ 2:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸರ್ವೇಶ್ವರನ ಶ್ರೀನಿವಾಸದ ಪರ್ವತವು ಅಂತಿಮ ಕಾಲದಂದು ಪ್ರತಿಷ್ಠೆಗೊಳ್ಳುವುದು, ಗುಡ್ಡಬೆಟ್ಟಗಳಿಗಿಂತ ಎತ್ತರವಾಗಿ ಬೆಳೆದು ಬರುವುವು ಅದರತ್ತ ಸಕಲ ರಾಷ್ಟ್ರಗಳು ಜಲಧಾರೆಯಂತೆ ಹರಿದು ಬರುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವದು; ಆಗ ಸಕಲದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಕೊನೆಯ ದಿನಗಳಲ್ಲಿ ಯೆಹೋವನಾಲಯದ ಪರ್ವತವು ಎಲ್ಲಾ ಬೆಟ್ಟಗಳಿಗಿಂತಲೂ ಮಹೋನ್ನತವಾದ ಪರ್ವತವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆ ಅಂತ್ಯಕಾಲದಲ್ಲಿ, ಯೆಹೋವ ದೇವರ ಮಂದಿರದ ಪರ್ವತವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಎಲ್ಲಾ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು. ಅಧ್ಯಾಯವನ್ನು ನೋಡಿ |
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.