Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 2:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ, ಬಂಗಾರದ ವಿಗ್ರಹಗಳನ್ನೂ, ಇಲಿ, ಬಾವಲಿಗಳಿಗಾಗಿ ಬಿಸಾಡಿ ಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆ ದಿನ ಬಂದಾಗ ಮಾನವರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಬಂಗಾರದ ವಿಗ್ರಹಗಳನ್ನೂ ಇಲಿ ಹೆಗ್ಗಣಗಳ ಬಿಲಗಳಲ್ಲಿ ಬಿಸಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಬಂಗಾರದ ವಿಗ್ರಹಗಳನ್ನೂ ಇಲಿಕಣ್ಣು ಕಪಟಗಳಿಗಾಗಿ ಬಿಸಾಟುಬಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆ ಸಮಯದಲ್ಲಿ ಜನರು ತಮ್ಮ ಬೆಳ್ಳಿಬಂಗಾರಗಳ ವಿಗ್ರಹಗಳನ್ನೆತ್ತಿ ಬಿಸಾಡಿಬಿಡುವರು. ಈ ವಿಗ್ರಹಗಳನ್ನು ಜನರು ಪೂಜಿಸುವದಕ್ಕಾಗಿ ಮಾಡಿಕೊಂಡರು. ಬಾವಲಿಗಳೂ, ಇಲಿಗಳೂ ವಾಸಿಸುವ ಸಂದುಗಳಲ್ಲಿ ಈ ವಿಗ್ರಹಗಳನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆ ದಿನದಲ್ಲಿ ಮನುಷ್ಯರು ಪೂಜಿಸುವುದಕ್ಕೋಸ್ಕರ ಮಾಡಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಚಿನ್ನದ ವಿಗ್ರಹಗಳನ್ನೂ ಇಲಿ ಬಾವಲಿಗಳಿಗಾಗಿ ಬಿಸಾಡಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 2:20
17 ತಿಳಿವುಗಳ ಹೋಲಿಕೆ  

ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ಬೊಂಬೆಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಗಳನ್ನು, “ತೊಲಗಿ ಹೋಗಿರಿ” ಎಂದು ಹೊಲೆಯಾದ ಬಟ್ಟೆಯಂತೆ ಬಿಸಾಡುವಿರಿ.


ಏಕೆಂದರೆ ನೀವು ನಿಮ್ಮ ಸ್ವಂತ ಕೈಯಿಂದ ರೂಪಿಸಿಕೊಂಡಿರುವ ಪಾಪದ ಗುರುತಾದ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನೂ ಬಿಸಾಡುವನು.


ಎಫ್ರಾಯೀಮು, “ವಿಗ್ರಹಗಳ ಗೊಡವೆ ನನಗೆ ಇನ್ನೇಕೆ?” ಎಂದು ಅವುಗಳನ್ನು ತ್ಯಜಿಸುವುದು; ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ; ನನ್ನಿಂದಲೇ ನೀನು ಫಲಿಸುವಿ.


ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೊಟ್ಟು ಕೂಲಿಯನ್ನು ಗೊತ್ತುಮಾಡಿದಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆಮಾಡುವರು.


ಬೇಲ್ ದೇವತೆಯು ಬಾಗಿದೆ, ನೆಬೋ ದೇವತೆಯು ಕುಗ್ಗಿದೆ, ಅವುಗಳ ವಿಗ್ರಹಗಳು ಪಶುಗಳ ಮೇಲೆ ಹೊರಿಸಲ್ಪಟ್ಟಿವೆ, ನೀವು ಮೆರವಣಿಗೆಯಾಗಿ ಹೊರುತ್ತಿದ್ದವುಗಳು ಪಶುಗಳಿಗೆ ಭಾರವಾದ ಹೊರೆಯಾಗಿ ಅವುಗಳು ಬಳಲಿದವು.


ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ, ಕಣ್ಣಕಪಡಿ. ಇವುಗಳ ಮಾಂಸವನ್ನು ತಿನ್ನಬಾರದು.


ಆ ಕಾಲದಲ್ಲಿ ಜನರು, ‘ಬೆಟ್ಟಗಳೇ ನಮ್ಮ ಮೇಲೆ ಬೀಳಿರಿ. ಗುಡ್ಡಗಳೇ ನಮ್ಮನ್ನು ಮುಚ್ಚಿಕೊಳ್ಳಿರಿ’ ಅನ್ನುವರು.


ತಮ್ಮ ಕೈಯಿಂದ ಮಾಡಿದ ಬಲಿಪೀಠಗಳನ್ನು ಲಕ್ಷಿಸದೆ, ತಮ್ಮ ಬೆರಳುಗಳಿಂದ ನಿರ್ಮಿಸಿದ ಅಶೇರವೆಂಬ ವಿಗ್ರಹಸ್ತಂಭಗಳನ್ನಾಗಲಿ, ಸೂರ್ಯಸ್ತಂಭಗಳನ್ನಾಗಲಿ ದೃಷ್ಟಿಸುವುದಿಲ್ಲ.


ವಿಗ್ರಹವಾದರೋ, ಶಿಲ್ಪಿಯು ಅದನ್ನು ಎರಕಹೊಯ್ಯುವನು, ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ, ಬೆಳ್ಳಿಯ ಸರಪಣಿಗಳನ್ನು ಹಾಕುವನು.


ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ಪದಾರ್ಥದಂತಿರುವುದು; ಯೆಹೋವನು ತನ್ನ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರವು ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರುವುದಿಲ್ಲ, ಅವರ ಹೊಟ್ಟೆ ತುಂಬುವುದಿಲ್ಲ; ಏಕೆಂದರೆ ಅವರ ಆಸ್ತಿಯು ಅವರಿಗೆ ಪಾಪಕಾರಿ ವಿಘ್ನವಾಗಿದೆ.


ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನಿಮ್ಮ ವಿಗ್ರಹಗಳನ್ನು ತೊರೆದುಬಿಟ್ಟು ಹಿಂದಿರುಗಿ, ನಿಮ್ಮ ಎಲ್ಲಾ ಅಸಹ್ಯ ವಸ್ತುಗಳ ಕಡೆಗೆ ಬೆನ್ನುಮಾಡಿರಿ.


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಆಗ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯ ದೇವರುಗಳನ್ನು, ತಮ್ಮ ಕಿವಿಯಲ್ಲಿದ್ದ ಓಲೆಗಳನ್ನು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರವಿರುವ ಏಲಾ ಮರದ ಕೆಳಗೆ ಹೂಣಿಟ್ಟನು.


ಸಂಪಾದಿಸುವ ಸಮಯ, ಕಳೆದುಕೊಳ್ಳುವ ಸಮಯ, ಕಾಪಾಡುವ ಸಮಯ, ಬಿಸಾಡುವ ಸಮಯ,


ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?


ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು