Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 2:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೀಗಿರಲು ಜನರು ಅಧರ್ಮಿಗಳಾಗಲಿ, ಉತ್ತಮರಾಗಲಿ ತಗ್ಗಿಸಲ್ಪಡುವರು, ಪ್ರತಿ ಮನುಷ್ಯನು ಬಿದ್ದುಹೋಗುವನು. ನೀನು ಅವರನ್ನು ಸ್ವೀಕರಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮಾನವನು ತಗ್ಗಿಹೋಗಿದ್ದಾನೆ, ಅಧೋಗತಿಗೆ ಇಳಿದಿದ್ದಾನೆ. ಸ್ವಾಮೀ, ಅವನಿಗೆ ಕ್ಷಮೆ ನೀಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹೀಗಿರಲು ಅಧಮರಾಗಲಿ ಉತ್ತಮರಾಗಲಿ ತಗ್ಗಿಸಲ್ಪಡುವರು; (ಅವರನ್ನು ಕ್ಷವಿುಸಬೇಡ).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜನರು ಕೆಟ್ಟದಾರಿಯಲ್ಲಿ ಹೋಗುತ್ತಿದ್ದಾರೆ; ಹೀನಸ್ಥಿತಿಯಲ್ಲಿ ಮುಂದುವರಿಯುತ್ತಿದ್ದಾರೆ. ದೇವರೇ, ನೀನು ಅವರನ್ನು ಖಂಡಿತವಾಗಿಯೂ ಕ್ಷಮಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದ್ದರಿಂದ ಮನುಷ್ಯರು ನಮ್ರರಾಗುತ್ತಾರೆ; ಎಲ್ಲರೂ ತಲೆಬಾಗುತ್ತಾರೆ; ಅವರನ್ನು ಕ್ಷಮಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 2:9
16 ತಿಳಿವುಗಳ ಹೋಲಿಕೆ  

ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು.


ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ.


ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದಲಾರನು; ಅವನು ಶಾಶ್ವತವಾದ ಪಾಪದೊಳಗೆ ಸೇರಿದವನಾದನು” ಎಂದು ಹೇಳಿದನು.


ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ.


ಅವರ ಅಪರಾಧವನ್ನು ಕ್ಷಮಿಸಬೇಡ; ನಿನ್ನೆದುರಿಗಿರುವ ಅವರ ಅಪರಾಧವನ್ನು ಅಳಿಸಿಬಿಡಬೇಡ. ಕಟ್ಟುವವರ ಮುಂದೆಯೇ ಅವರು ನಿನ್ನನ್ನು ಕೆಣಕಿ ಕೋಪಗೊಳಿಸಿದ್ದಾರಲ್ಲಾ.


ಆಗ ಯೆಹೋಶುವನು ಅವರಿಗೆ, “ನೀವು ಯೆಹೋವನನ್ನು ಸೇವಿಸಲು ಶಕ್ತರಲ್ಲ. ಯೆಹೋವನು ಪರಿಶುದ್ಧನು; ತನಗೆ ಸಲ್ಲಿಸಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಆತನು ನಿಮ್ಮ ಪಾಪ, ಅಪರಾಧಗಳನ್ನೂ, ಕ್ಷಮಿಸುವುದಿಲ್ಲ.


ಇಂಥ ಉಪದೇಶಗಳು ಮನುಷ್ಯಕಲ್ಪಿತವಾದ ಆಚರಣೆಗಳಿಂದಲೂ, ಕಪಟದೀನತೆಯಿಂದಲೂ ಮತ್ತು ದೇಹದಂಡನೆಯಿಂದಲೂ ಜ್ಞಾನವುಳ್ಳದೆಂದು ತೋರಿಬರುತ್ತವೆ, ಆದರೆ ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸುವಲ್ಲಿ ಇವುಗಳಿಂದ ಯಾವ ಪ್ರಯೋಜನವೂ ಉಂಟಾಗುವುದಿಲ್ಲ.


ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಆಲೋಚನೆಯನ್ನೆಲ್ಲಾ ನೀನೇ ಬಲ್ಲೆ. ಅವರ ಅಪರಾಧವನ್ನು ಕ್ಷಮಿಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ. ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು.


ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲವನ್ನೂ ತೆಗೆದುಕೊಂಡು, ಪರರಾಜನ ಬಳಿಗೆ ಪ್ರಯಾಣಮಾಡಿದ್ದಿ; ನಿನ್ನ ರಾಯಭಾರಿಗಳನ್ನು ದೂರ ದೂರ ಕಳುಹಿಸಿದ್ದಿ; ನಿನ್ನನ್ನು ಪಾತಾಳದವರೆಗೂ ತಗ್ಗಿಸಿಕೊಂಡಿದ್ದಿ.


ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.


ಜನರೇ, ಜನಾಧಿಪತಿಗಳೇ, ಬಡವರೇ ಮತ್ತು ಐಶ್ವರ್ಯವಂತರೇ, ನೀವೆಲ್ಲರೂ ಒಂದಾಗಿ ಬಂದು ಆಲಿಸಿರಿ.


ಮಿಥ್ಯಾ ದೀನತೆಯನ್ನು ಅಪೇಕ್ಷಿಸಿ ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದು, ದರ್ಶನಗಳಾದವೆಂದು ಕೊಚ್ಚಿಕೊಂಡು, ಪ್ರಾಪಂಚಿಕ ಬುದ್ಧಿಯಿಂದಾಗಿ, ಕಾರಣವಿಲ್ಲದೆ ಉಬ್ಬಿಕೊಂಡು ಇರುವಂಥವರಿಗೆ ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವುದಕ್ಕೆ ಅವಕಾಶಕೊಡಬೇಡಿರಿ.


ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ, ನೀನು ಎಚ್ಚರವಾಗಿ ಎಲ್ಲಾ ಅನ್ಯಜನಾಂಗಗಳನ್ನು ದಂಡಿಸು. ದುಷ್ಟದ್ರೋಹಿಗಳಲ್ಲಿ ಒಬ್ಬನಿಗೂ ದಯತೋರಿಸಬೇಡ. ಸೆಲಾ


ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವುದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು. ಪರಿಶುದ್ಧನಾದ ದೇವರು ಧರ್ಮವನ್ನು ನಡೆಸುವುದರಲ್ಲಿ ಪರಿಶುದ್ಧನು ಎಂದು ಅನಿಸಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು