Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 20:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಶ್ಶೂರದ ರಾಜನಾದ ಸರ್ಗೋನನು ಕಳುಹಿಸಿದ ದಳವಾಯಿಯು ಅಷ್ದೋದಿಗೆ ಬಂದು ಅದರ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಸ್ಸೀರಿಯಾದ ಅರಸನಾದ ಸರ್ಗೋನನು ಕಳುಹಿಸಿದ ದಳಪತಿ, ಫಿಲಿಷ್ಟಿಯರ ಪಟ್ಟಣವಾದ ಅಷ್ಡೋದಿಗೆ ಬಂದು ಅದನ್ನು ಮುತ್ತಿ ಆಕ್ರಮಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಶ್ಶೂರದ ರಾಜನಾದ ಸರ್ಗೋನನು ಕಳುಹಿಸಿದ ದಳವಾಯಿಯು ಅಷ್ಡೋದಿಗೆ ಬಂದು ಅದನ್ನು ಮುತ್ತಿಹಿಡಿದ ವರುಷದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸರ್ಗೋನ್ ಅಶ್ಶೂರದ ರಾಜನಾಗಿದ್ದನು. ಇವನು ತರ್ತಾನನ್ನು ಅಷ್ಡೋದಿಗೆ ವಿರುದ್ಧವಾಗಿ ಯುದ್ಧಮಾಡಲು ಕಳುಹಿಸಿದನು. ತರ್ತಾನ್ ಎಂಬವನು ಅಷ್ಡೋದ್ ನಗರಕ್ಕೆ ಹೋಗಿ ಅದನ್ನು ವಶಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಸ್ಸೀರಿಯದ ಅರಸನಾದ ಸರ್ಗೋನನು ಕಳುಹಿಸಿದ ವರ್ಷದಲ್ಲಿ ಪ್ರಮುಖ ಸೇನಾಪತಿ, ಅಷ್ಡೋದಿಗೆ ಬಂದು ಅದನ್ನು ಮುತ್ತಿಗೆ ಹಾಕಿ ಆಕ್ರಮಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 20:1
9 ತಿಳಿವುಗಳ ಹೋಲಿಕೆ  

ಆದರೆ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತವಾಗಿ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬುವವರನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ಗಟ್ಟಾ ಹತ್ತಿ ಯೆರೂಸಲೇಮಿಗೆ ಬಂದು ಅಗಸರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಇರುವ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯ ಮಾಡಿಕೊಂಡರು.


ನಾನು ಅಷ್ದೋದಿನೊಳಗಿಂದ ಸಿಂಹಾಸನಾಸೀನನನ್ನೂ ಮತ್ತು ಅಷ್ಕೆಲೋನಿನೊಳಗಿಂದ ರಾಜದಂಡ ದಾರಿಯನ್ನೂ ನಿರ್ಮೂಲಮಾಡುವೆನು. ನಾನು ಎಕ್ರೋನಿನ ವಿರುದ್ಧವಾಗಿ ಕೈಯೆತ್ತುವೆನು, ಉಳಿದ ಫಿಲಿಷ್ಟಿಯರೆಲ್ಲರೂ ನಾಶವಾಗಿ ಹೋಗುವರು.” ಇದು ಕರ್ತನಾದ ಯೆಹೋವನ ನುಡಿ.


ಬಗೆಬಗೆಯ ಎಲ್ಲಾ ವಿದೇಶೀಯರು, ಊಚ್ ದೇಶದ ಎಲ್ಲಾ ಅರಸರು, ಫಿಲಿಷ್ಟಿಯ ದೇಶದ ಎಲ್ಲಾ ಅರಸರು, ಅಷ್ಕೆಲೋನ್, ಗಾಜಾ, ಎಕ್ರೋನ್, ಹಾಳಾಗದೆ ಉಳಿದ ಸ್ವಲ್ಪ ಅಷ್ಡೋದ್,


ಫಿಲಿಷ್ಟಿಯರು ಯೆಹೋವನಿಗೆ ಸಮರ್ಪಿಸಿದ ಚಿನ್ನದ ಗಡ್ಡೆಗಳು ಅಷ್ಡೋದ್, ಗಾಜಾ, ಅಷ್ಕೆಲೋನ್, ಗತ್ ಊರು, ಎಕ್ರೋನ್ ಎಂಬ ಅವರ ಸಂಸ್ಥಾನಗಳ ಸಂಖ್ಯೆಗಳಿಗೂ


ಫಿಲಿಷ್ಟಿಯರು ದೇವರ ಮಂಜೂಷವನ್ನು ಎಬೆನೆಜೆರಿನಿಂದ ಅಷ್ಡೋದಿನಲ್ಲಿರುವ


ಇಸ್ರಾಯೇಲರ ಪ್ರಾಂತ್ಯಗಳಲ್ಲಿ ಯಾರೊಬ್ಬರೂ ಉಳಿಯಲಿಲ್ಲ. ಆದರೆ ಗಾಜಾ, ಗತೂರು, ಅಷ್ಡೋದ್, ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದಿದ್ದರು.


ಅವನು ಫಿಲಿಷ್ಟಿಯರ ಮೇಲೆ ಯುದ್ಧಕ್ಕಾಗಿ ಹೊರಟು ಗತ್ ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.


ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕರಗಿ ಹೋಗುವಿರಿ! ಉತ್ತರದಿಂದ ಹೊಗೆಯು ಬರುತ್ತದೆ. ಆ ವ್ಯೂಹದಲ್ಲಿ ಹಿಂದೆ ಬೀಳುವವರು ಯಾರೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು