ಯೆಶಾಯ 20:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಯೆಹೋವನು ಹೀಗೆ ಹೇಳಿದನು, “ನನ್ನ ಸೇವಕನಾದ ಯೆಶಾಯನು ಐಗುಪ್ತದ ಮತ್ತು ಕೂಷಿನ ನಾಶನಕ್ಕೆ ಆಶ್ಚರ್ಯವಾದ ಗುರುತಾಗಿ ಮೂರು ವರ್ಷ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ ನಡೆದನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ಸರ್ವೇಶ್ವರ : “ನನ್ನ ದಾಸ ಯೆಶಾಯನು ಈಜಿಪ್ಟಿನ ಮತ್ತು ಸುಡಾನಿನ ವಿನಾಶಕ್ಕೆ ಸೋಜಿಗದ ಗುರುತಾಗಿ ಮೂರು ವರ್ಷ ಬಟ್ಟೆಯಿಲ್ಲದೆ ಬರಿಗಾಲಿನಲ್ಲಿ ತಿರುಗಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಯೆಹೋವನು ಹೀಗೆ ಹೇಳಿದನು - ನನ್ನ ಸೇವಕನಾದ ಯೆಶಾಯನು ಐಗುಪ್ತದ ಮತ್ತು ಕೂಷಿನ ನಾಶನಕ್ಕೆ ಸೋಜಿಗದ ಗುರುತಾಗಿ ಮೂರು ವರುಷ ಬಟ್ಟೆ ಕೆರಗಳಿಲ್ಲದೆ ನಡೆದ ಪ್ರಕಾರ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆಗ ಯೆಹೋವನು, “ಮೂರು ವರ್ಷಗಳ ತನಕ ನನ್ನ ಸೇವಕನಾದ ಯೆಶಾಯನು ಬಟ್ಟೆ ಇಲ್ಲದೆ, ಪಾದರಕ್ಷೆ ಇಲ್ಲದೆ ನಡೆದಾಡಿದ್ದಾನೆ. ಇದು ಈಜಿಪ್ಟಿಗೂ ಇಥಿಯೋಪ್ಯಕ್ಕೂ ಗುರುತಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಯೆಹೋವ ದೇವರು, “ನನ್ನ ಸೇವಕನಾದ ಯೆಶಾಯನು ಈಜಿಪ್ಟ್ ಮತ್ತು ಕೂಷಿಗು, ಗುರುತಾಗಿಯೂ, ಆಶ್ಚರ್ಯವಾಗಿಯೂ ಹೀಗೆ ಮೂರು ವರ್ಷ ಬೆತ್ತಲೆಯಾಗಿ ಕೆರವಿಲ್ಲದೆ ನಡೆದನು. ಅಧ್ಯಾಯವನ್ನು ನೋಡಿ |