Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 20:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ದಿನದಲ್ಲಿ ಈ ತೀರದಲ್ಲಿ ವಾಸಿಸುವವರು ಹೇಳುವುದೇನೆಂದರೆ, “ಇಗೋ, ಅಶ್ಶೂರದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?” ಎಂದು ಅಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ದಿನದಂದು (ಫಿಲಿಷ್ಟಿಯದ) ಕರಾವಳಿಯಲ್ಲಿ ವಾಸಿಸುವರು. ‘ಅಯ್ಯೋ ಅಸ್ಸೀರಿಯರ ಅರಸನಿಂದ ನಾವು ಬಿಡುಗಡೆಯಾಗಬೇಕೆಂದು ಯಾರ ಆಶ್ರಯವನ್ನು ನಿರೀಕ್ಷಿಸಿಕೊಂಡಿದ್ದೇವೋ ಅವರಿಗೇ ಈ ಗತಿ ಬಂತಲ್ಲಾ; ಇನ್ನು ನಮ್ಮಂಥವರು ಉದ್ಧಾರವಾಗುವುದು ಹೇಗೆ?’ ಎಂದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆ ದಿನದಲ್ಲಿ ಈ ಕರಾವಳಿಯಲ್ಲಿ ವಾಸಿಸುವವರು - ಹಾ, ಅಶ್ಶೂರದ ಅರಸನಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೆವೋ ಅವರಿಗೇ ಈ ಗತಿ ಬಂತಲ್ಲಾ; ನಮ್ಮಂಥವರಿಗೆ ಹೇಗೆ ರಕ್ಷಣೆಯಾದೀತು ಎಂದು ಅಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸಮುದ್ರ ತೀರದಲ್ಲಿ ವಾಸಿಸುವವರು ಹೀಗೆ ಹೇಳುವರು: “ಆ ದೇಶದವರು ನಮಗೆ ಸಹಾಯ ಮಾಡುವರೆಂದು ಅವರನ್ನು ನಂಬಿದೆವು. ಅಶ್ಶೂರದ ಅರಸನಿಂದ ನಮ್ಮನ್ನು ಕಾಪಾಡುವಂತೆ ನಾವು ಅವರ ಬಳಿಗೆ ಓಡಿಹೋದೆವು. ಆದರೆ ಈಗ ನೋಡಿ, ಆ ದೇಶದವರು ಸೋತು ಹೋಗಿ ವೈರಿವಶವಾಗಿದ್ದಾರೆ. ಈಗ ನಾವು ಪಾರಾಗಲು ಹೇಗೆ ಸಾಧ್ಯ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆ ದಿನದಲ್ಲಿ ಕರಾವಳಿಯ ನಿವಾಸಿಗಳು, ‘ಇಗೋ, ಅಸ್ಸೀರಿಯದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ, ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?’ ಎಂದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 20:6
16 ತಿಳಿವುಗಳ ಹೋಲಿಕೆ  

ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.


“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ?


ಏಕೆಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಉಳಿದವರೆಲ್ಲಾ ನಿರ್ಮೂಲವಾಗುವರು; ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.


ನಾನು ನ್ಯಾಯವನ್ನು ನೂಲನ್ನಾಗಿಯೂ, ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು, ಜಲಪ್ರವಾಹವು ಮೋಸದ ಅಡಗು ಸ್ಥಳವನ್ನು ಮುಳುಗಿಸುವುದು.


ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?


ನಿರ್ದೋಷಿಯನ್ನು ಆತನು ತಪ್ಪಿಸುವನು, ಹೌದು, ಆತನು ಇಂಥವನನ್ನು ತಪ್ಪಿಸುವುದಕ್ಕೆ ನಿನ್ನ ಕೈಗಳ ಪರಿಶುದ್ಧತೆಯೇ ಕಾರಣವಾಗಿರುವುದು.”


ಅಲ್ಲಿಗೆ ಸೇರಿ ಆಶಾಭಂಗಪಟ್ಟರು, ನಂಬಿದಷ್ಟೂ ನಿರೀಕ್ಷೆಗೆಟ್ಟರು.


ಎಲೈ, ನಗರವೇ, ನೀನು ಸೂರೆಯಾಗುವಾಗ ಏನು ಮಾಡುವಿ? ನೀನು ರಕ್ತಾಂಬರವನ್ನು ಹೊದ್ದು ಸುವರ್ಣಾಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡು, ನೀಲಾಂಜನ ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು, ನಿನ್ನನ್ನು ಶೃಂಗಾರಿಸಿಕೊಳ್ಳುವುದು ವ್ಯರ್ಥ. ನಿನ್ನೊಂದಿಗೆ ವ್ಯಭಿಚಾರ ಮಾಡಿದವರೇ ನಿನ್ನನ್ನು ಧಿಕ್ಕರಿಸಿ ನಿನ್ನ ಪ್ರಾಣವನ್ನೇ ಹುಡುಕುತ್ತಾರೆ.


ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,


ಅಯ್ಯೋ, ಆ ದಿನವು ಘೋರವಾದದ್ದು, ಅಂಥ ದಿನ ಮತ್ತೊಂದಿಲ್ಲ, ಅದು ಯಾಕೋಬರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.”


ಯೆಹೋವನು, “ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು