Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 21:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ಕಣದ ದವಸವೇ, ನನ್ನ ಬಡಿತಕ್ಕೆ ಈಡಾದವರೇ! ಇಸ್ರಾಯೇಲರ ದೇವರಾಗಿರುವ ಸೇನಾಧೀಶ್ವರನಾದ ಯೆಹೋವನಿಂದ, ನಾನು ಕೇಳಿದ್ದನ್ನೇ ನಿಮಗೆ ತಿಳಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನನ್ನ ಪ್ರಜೆಯೇ, ನನ್ನ ಕಣಜದ ದವಸವೇ, ಬಡಿತಕ್ಕೆ ಈಡಾದ ಜನರೇ, ಇಸ್ರಯೇಲರ ದೇವರಾದ ಸೇನಾಧಿಶ್ವರ ಸರ್ವೇಶ್ವರ ಸ್ವಾಮಿಯಿಂದ ನಾನು ಕೇಳಿದ್ದನ್ನೇ ತಿಳಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ಕಣದ ದವಸವೇ, ನನ್ನ ಬಡಿತಕ್ಕೆ ಈಡಾದವರೇ, ಇಸ್ರಾಯೇಲ್ಯರ ದೇವರಾಗಿರುವ ಸೇನಾಧೀಶ್ವರನಾದ ಯೆಹೋವನಿಂದ ನಾನು ಕೇಳಿದ್ದನ್ನೇ ನಿಮಗೆ ತಿಳಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನ ಬಡಿತಕ್ಕೆ ಈಡಾದ ಜನರೇ, ಸರ್ವಶಕ್ತನೂ ದೇವರೂ ಆಗಿರುವ ಯೆಹೋವನು ಹೇಳಿದ್ದನ್ನೆಲ್ಲಾ ಇಸ್ರೇಲರಾದ ನಿಮಗೆ ತಿಳಿಸಿದ್ದೇನೆ. ಕಣದಲ್ಲಿ ಧಾನ್ಯವು ನುಚ್ಚುನೂರಾಗುವಂತೆ ನೀವು ನಜ್ಜುಗುಜ್ಜಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಕಣದಲ್ಲಿ ತುಳಿತಕ್ಕೆ ಈಡಾದ ನನ್ನ ಜನರೇ ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರಿಂದ ನಾನು ಕೇಳಿದ್ದನ್ನು ನಿಮಗೆ ತಿಳಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 21:10
13 ತಿಳಿವುಗಳ ಹೋಲಿಕೆ  

ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ಪುರಿಯು ತುಳಿದು ತುಳಿದು ಸರಿಮಾಡುತ್ತಿರುವ ಕಣದಂತಿದೆ; ಸ್ವಲ್ಪ ಕಾಲವಾದ ಮೇಲೆ ಒಕ್ಕುವ ಸಮಯವು ಅದಕ್ಕೆ ಸಂಭವಿಸುವುದು.


ಚೀಯೋನ್ ನಗರಿಯೇ ಎದ್ದು ಒಕ್ಕಣೆ ಮಾಡು, ನಾನು ನಿನ್ನ ಕೊಂಬನ್ನು ಕಬ್ಬಿಣದ ಕೊಂಬನ್ನಾಗಿಯೂ, ನಿನ್ನ ಗೊರಸನ್ನು ತಾಮ್ರದ ಗೊರಸನ್ನಾಗಿಯೂ ಮಾಡುವೆನು. ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ, ಆ ದೇಶಗಳು ಕೊಳ್ಳೆ ಹೊಡೆದು ಸಂಪಾದಿಸಿದ್ದ ಐಶ್ವರ್ಯವನ್ನು ನೀನು ಯೆಹೋವನಿಗಾಗಿ ಮೀಸಲಾಗಿಡುವೆ. ಅವರ ಆಸ್ತಿಯನ್ನು ಲೋಕದ ಕರ್ತನ ಮುಂದೆ ಸಮರ್ಪಿಸುವಿ.


ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.


ಯೆಹೋವಾಹಾಜನಿಗೆ ಐವತ್ತು ಮಂದಿ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದರು. ಅರಾಮ್ಯರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ ಕಣದ ಧೂಳಿನಂತೆ ಮಾಡಿದನು.


ನೀನು ಕೋಪ ತಿರಸ್ಕಾರದಿಂದ ಲೋಕವನ್ನು ತುಳಿದುಕೊಂಡು ಹೋಗುತ್ತೀ. ಕೋಪದಿಂದ ಜನಾಂಗಗಳನ್ನು ಇಲ್ಲದಂತೆ ಮಾಡುತ್ತಿ.


ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ಯೆಹೋವನು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.


ಆ ಪುರುಷನು ನನಗೆ, “ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ. ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ಇಲ್ಲಿಗೆ ಬರಮಾಡಿದ್ದೇನೆ. ನೀನು ನೋಡುವುದನ್ನೆಲ್ಲಾ ಇಸ್ರಾಯೇಲ್ ವಂಶದವರಿಗೆ ಪ್ರಕಟಿಸು” ಎಂದು ಹೇಳಿದನು.


ಗೋದಿಯ ಕಾಳನ್ನು ನುಚ್ಚು ಮಾಡುವನೋ? ತನ್ನ ಕುದುರೆಗಳ ಗಾಡಿಯ ಚಕ್ರವನ್ನು ಹೊಡೆಯುತ್ತಾ ಗುಂಡನ್ನು ಉರುಳಿಸುತ್ತಾ ಯಾವಾಗಲೂ ಒಕ್ಕುತ್ತಿರುವುದಿಲ್ಲ, ನುಚ್ಚು ಮಾಡುವುದಿಲ್ಲ.


ಕನಸು ಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ. ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ.


ಸಿಂಹವು ಗರ್ಜಿಸಿದರೆ, ಭಯಪಡದೆ ಇರುವವರು ಯಾರು? ಕರ್ತನಾದ ಯೆಹೋವನು ನುಡಿದಿದ್ದಾನೆ, ಆ ನುಡಿಯನ್ನು ಕೇಳಿ ಪ್ರವಾದಿಸದವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು