Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 21:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೂಮದ ಬಗ್ಗೆ ದೈವೋಕ್ತಿ. ಆತನು ಸೇಯೀರಿನಿಂದ ನನ್ನನ್ನು ಕರೆದು, “ಕಾವಲುಗಾರನೇ, ಈಗ ರಾತ್ರಿ ಎಷ್ಟು ಸಮಯವಾಯಿತು? ಕಾವಲುಗಾರನೇ, ರಾತ್ರಿ ಸಮಯ ಎಷ್ಟು ಕಳೆಯಿತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ‘ದೂಮ’ ಕುರಿತ ದೈವೋಕ್ತಿ : “ಪಹರೆಯವನೇ, ರಾತ್ರಿ ಕಳೆಯುವುದು ಯಾವಾಗ? ಪಹರೆಯವನೇ, ಕತ್ತಲು ಕಳೆಯುವುದು ಯಾವಾಗ?” ಎಂಬ ಕೂಗು ಸೇಯಾರಿನಿಂದ ನನಗೆ ಕೇಳಿಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೂಮದ ವಿಷಯವಾದ ದೈವೋಕ್ತಿ. ಕಾವಲುಗಾರನೇ, ಈಗ ರಾತ್ರಿ ಎಷ್ಟು ಕಳೆಯಿತು, ಕಾವಲುಗಾರನೇ, ರಾತ್ರಿ ಎಷ್ಟು ಕಳೆಯಿತು ಎಂಬ ಕೂಗು ಸೇಯೀರಿನಿಂದ ನನಗೆ ಕೇಳಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೂಮದ ಕುರಿತು ದುಃಖದ ದೈವೋಕ್ತಿ: ಸೇಯಿರ್‌ನಿಂದ ಎದೋಮನ್ನು ಯಾರೋ ಒಬ್ಬನು, “ಕಾವಲುಗಾರನೇ, ರಾತ್ರಿ ಮುಗಿಯಲು ಎಷ್ಟು ಸಮಯ ಉಂಟು? ರಾತ್ರಿಗೆ ಇನ್ನು ಎಷ್ಟು ಕಾಲ ಉಂಟು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೂಮ ವಿಷಯವಾದ ಪ್ರವಾದನೆ: ಸೇಯೀರಿನಿಂದ ನನ್ನನ್ನು ಯಾರೋ ಹೀಗೆ ಕರೆಯುತ್ತಿದ್ದಾರೆ, “ಕಾವಲುಗಾರನೇ, ಈಗ ರಾತ್ರಿ ಎಷ್ಟು ಕಳೆಯಿತು? ಕಾವಲುಗಾರನೇ, ರಾತ್ರಿ ಎಷ್ಟು ಕಳೆಯಿತು?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 21:11
24 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ, “ಗಾಜವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ, ಏಕೆಂದರೆ ಅದು ಜನರನ್ನು ಗುಂಪುಗುಂಪಾಗಿ ಸೆರೆಹಿಡಿದು ಎದೋಮಿಗೆ ವಶಮಾಡಿಬಿಟ್ಟಿತು.


ಐಗುಪ್ತ್ಯವು ಹಾಳಾಗುವುದು, ಎದೋಮ್, ಹಾಳಾದ ಬೆಂಗಾಡಾಗುವುದು, ಏಕೆಂದರೆ ಅವರು ಯೆಹೂದ್ಯರನ್ನು ಹಿಂಸಿಸಿ, ಅವರ ದೇಶದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ.


ಆಮೇಲೆ ಅರಸನಾದ ಚಿದ್ಕೀಯನು ಅವನನ್ನು ಕರೆಕಳುಹಿಸಿ, “ಯೆಹೋವನಿಂದ ದೈವೋಕ್ತಿಯು ದೊರೆಯಿತೋ?” ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು, “ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿಬೀಳುವಿ” ಅಂದನು.


ಕರ್ತನು ನನಗೆ ಹೇಳುವುದೇನೆಂದರೆ, “ಹೋಗು, ಕಾವಲುಗಾರನನ್ನು ನೇಮಿಸು; ಅವನು ಕಂಡದ್ದನ್ನು ತಿಳಿಸಲಿ.


ಯೆಹೋವನೇ, ಎದೋಮ್ಯರ ಹಾನಿಗಾಗಿ, ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ.


ನಾನು ಸೇಯೀರ್ ಬೆಟ್ಟದ ಸೀಮೆಯನ್ನು ಏಸಾವ್ಯರಿಗೇ ಸ್ವದೇಶವಾಗಿ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವುದಿಲ್ಲ.


ಅದಲ್ಲದೆ ಇಸ್ರಾಯೇಲರು ಎದೋಮ್ಯರ ದೇಶವನ್ನೂ ಸ್ವಾಧೀನಪಡಿಸಿಕೊಂಡಿದ್ದಾರೆ, ಹಗೆಗಳಾದ ಸೇಯೀರಿನವರು ಅವನಿಗೆ ಅಧೀನರಾದರು.


ಬಳಿಕ ಯಾಕೋಬನು ತನಗಿಂತ ಮೊದಲು ಎದೋಮ್ಯರ ಪ್ರದೇಶವಾಗಿರುವ ಸೇಯೀರ್ ಸೀಮೆಗೆ ತನ್ನ ಅಣ್ಣನಾದ ಏಸಾವನ ಬಳಿಗೆ ಸೇವಕರನ್ನು ಕಳುಹಿಸಿದನು.


ಊರಿನಲ್ಲಿ ತಿರುಗುವ ಕಾವಲುಗಾರರ ಕೈಗೆ ಸಿಕ್ಕಿದೆನು, “ನನ್ನ ಪ್ರಾಣಪ್ರಿಯನನ್ನು ಕಂಡಿರಾ?” ಎಂದು ಅವರನ್ನು ವಿಚಾರಿಸಿದೆನು.


ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ಆಮೇಲೆ ಬಂದು ವಿಚಾರಿಸಿರಿ” ಎಂದು ಕಾವಲುಗಾರನು ಹೇಳಿದನು.


‘ತುತ್ತೂರಿಯ ಶಬ್ದವನ್ನು ಕೇಳಿರಿ’ ಎಂದು ನಾನು ಅವರ ಮೇಲೆ ಕಾವಲುಗಾರರನ್ನು ನೇಮಿಸಲು, ‘ನಾವು ಕೇಳುವುದಿಲ್ಲ’ ಎಂದು ಹೇಳಿದರು.


ಕಳುಹಿಸುವಾಗ ಅವರಿಗೆ “ನೀವು ನನ್ನ ಪ್ರಭುವಾದ ಏಸಾವನ ಬಳಿಗೆ ಹೋಗಿ ಅವನಿಗೆ, ‘ನಿನ್ನ ಸೇವಕನಾದ ಯಾಕೋಬನು ಇಷ್ಟು ದಿನ ಲಾಬಾನನ ಬಳಿಯಲ್ಲಿ ವಾಸವಾಗಿದ್ದನು


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಎದೋಮು ಯೆಹೂದ ವಂಶಕ್ಕೆ ಪ್ರತಿಕಾರಮಾಡಿದೆ; ಮುಯ್ಯಿಗೆ ಮುಯ್ಯಿ ತೀರಿಸಿ ಮಹಾಪರಾಧವನ್ನು ನಡೆಸಿದೆ.”


“ಆದುದರಿಂದ ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ದೂತನಾಗಿ ಅವರನ್ನು ಎಚ್ಚರಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು