Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 21:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕರ್ತನು ನನಗೆ ಹೇಳುವುದೇನೆಂದರೆ, “ಕೂಲಿಯವನ ವರ್ಷಗಳಂತೆ ಒಂದು ವರ್ಷದೊಳಗೆ ಕೇದಾರಿನ ಸಕಲ ವೈಭವವು ಇಲ್ಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರ ನನಗೆ ಹೀಗೆಂದರು : “ಗುಲಾಮಗಿರಿಯ ವಾಯಿದೆಯ ಪ್ರಕಾರ, ಒಂದು ವರ್ಷದೊಳಗೆ ಕೇದಾರಿನ ಸಕಲ ವೈಭವ ಗತಿಸಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕರ್ತನು ನನಗೆ ಹೇಳಿರುವದೇನಂದರೆ - ಆಳಿನ ವರುಷ ವಾಯಿದೆಗೆ ಸರಿಯಾದ ಒಂದು ವರುಷಕ್ಕೇ ಕೇದಾರಿನ ಸಕಲ ವೈಭವವು ಇಲ್ಲವಾಗುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನನ್ನ ಒಡೆಯನಾದ ಯೆಹೋವನು ಈ ವಿಷಯಗಳು ಸಂಭವಿಸುವವೆಂದು ಹೇಳಿದನು. ಆತನು ಹೇಳಿದ್ದೇನೆಂದರೆ: “ಇನ್ನೊಂದು ವರ್ಷದಲ್ಲಿ ಕೂಲಿಗಾರನು ತನ್ನ ಸಮಯವನ್ನು ಲೆಕ್ಕಿಸುವಂತೆ ಕೇದಾರಿನ ಘನತೆಯೆಲ್ಲವೂ ಹೋಗಿ ಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಏಕೆಂದರೆ ಕರ್ತರು ನನಗೆ ಹೀಗೆ ಹೇಳುತ್ತಾರೆ: “ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 21:16
11 ತಿಳಿವುಗಳ ಹೋಲಿಕೆ  

ಕೇದಾರಿನ ಹಿಂಡುಗಳೆಲ್ಲಾ ನಿನ್ನಲ್ಲಿ ಕೂಡುವವು; ನೆಬಾಯೋತಿನ ಟಗರುಗಳು ನೀನು ಮಾಡುವ ಯಜ್ಞಕ್ಕೆ ಅನುಕೂಲಿಸುವವು. ಅವು ನನ್ನ ಯಜ್ಞವೇದಿಯ ಮೇಲೆ ಸಮರ್ಪಕವಾಗಿ ಒಯ್ಯಲ್ಪಡುವವು; ಮಹಿಮೆಯಿಂದ ಕೂಡಿದ ನನ್ನ ಆಲಯವನ್ನು ಘನಪಡಿಸುವೆನು.


ಆಗ ಯೆಹೋವನು ತಿರುಗಿ ಹೇಳಿದ್ದೇನೆಂದರೆ, “ಮೂರು ವರ್ಷದೊಳಗೆ ಮೋವಾಬಿನ ವೈಭವವು ಕಣ್ಮರೆಯಾಗುವುದು. ಅವರ ದೊಡ್ಡ ಗುಂಪು ನಾಶವಾಗುವುದು ಅವರ ಜನರಲ್ಲಿ, ಉಳಿದವರು ಕೇವಲ ಚಿಕ್ಕ ಗುಂಪಾಗಿ ಬಲಹೀನರಾಗುವರು” ಎಂಬುದೇ.


ಅಯ್ಯೋ, ನಾನು ಮೇಷೆಕಿನವರಲ್ಲಿ ತಂಗಬೇಕಲ್ಲಾ! ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ!


ಅರಬರು ಮತ್ತು ಕೇದಾರಿನ ಪ್ರಧಾನರೂ ನಿನ್ನ ಕೈಕೆಳಗಿನ ವರ್ತಕರಾಗಿದ್ದರು; ಕುರಿಮರಿಗಳಿಂದಲೂ, ಟಗರುಗಳಿಂದಲೂ, ಹೋತಗಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದ್ದರು.


ಯೆರೂಸಲೇಮಿನ ಮಹಿಳೆಯರೇ, ನಾನು ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ, ಸೊಲೊಮೋನನ ಪರದೆಗಳಂತೆ ಚೆಲುವಾಗಿದ್ದೇನೆ.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. “ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ” ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.


ಅರಣ್ಯವೂ, ಅಲ್ಲಿನ ಊರುಗಳೂ, ಕೇದಾರಿನವರು ವಾಸಿಸುವ ಗ್ರಾಮಗಳೂ ಆರ್ಭಟಿಸಲಿ, ಸೆಲ ಪಟ್ಟಣದವರು ಹರ್ಷಧ್ವನಿಗೈದು ಪರ್ವತಾಗ್ರಗಳಲ್ಲಿ ಜಯಘೋಷ ಮಾಡಿರಿ.


ಇಷ್ಮಾಯೇಲನ ಮಕ್ಕಳಿಗೂ ಇವರಿಂದ ಹುಟ್ಟಿದ ಕುಲಗಳಿಗೂ ಇರುವ ಹೆಸರುಗಳು ಯಾವುದೆಂದರೆ: ಮೊದಲು ಹುಟ್ಟಿದವನು ನೆಬಾಯೋತ್, ಆ ಮೇಲೆ ಹುಟ್ಟಿದವರು ಕೇದಾರ್, ಅದ್ಬಯೇಲ್, ಮಿಬ್ಸಾಮ್,


ಭೂಲೋಕದಲ್ಲಿ ಮನುಷ್ಯನಿಗೆ ದುಡಿಯುವ ಕಾಲ ಉಂಟಲ್ಲವೇ. ಅವನ ದಿನಗಳು ಜೀತದಾಳಿನ ದಿನಗಳಂತೆ ಕಳೆಯುತ್ತವೆ.


ಇಷ್ಮಾಯೇಲರ ವಂಶಾವಳಿ: ಇಷ್ಮಾಯೇಲನಿಗೆ ಮೊದಲು ಹುಟ್ಟಿದವನು ನೆಬಾಯೋತ್, ಆ ಮೇಲೆ ಹುಟ್ಟಿದವರು ಕೇದಾರ್, ಅದ್ಬೆಯೇಲ್, ಮಿಬ್ಸಾಮ್,


“ಕಿತ್ತೀಮ್ ದ್ವೀಪಗಳಿಗೆ ಹೋಗಿ ನೋಡಿರಿ, ಕೇದಾರಿಗೆ ಕಳುಹಿಸಿ ವಿಚಾರಮಾಡಿರಿ, ಇಂತಹ ಕಾರ್ಯವು ಎಲ್ಲಿಯಾದರೂ ನಡೆಯಿತೇ ಎಂದು ಚೆನ್ನಾಗಿ ಆಲೋಚಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು