ಯೆಶಾಯ 21:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದುದ್ದರಿಂದ ನನ್ನ ಸೊಂಟದಲ್ಲಿ ನೋವು ತುಂಬಿದೆ, ಪ್ರಸವವೇದನೆಯಂತಿರುವ ವೇದನೆಯು ನನ್ನನ್ನು ಹಿಡಿದಿದೆ, ಕಿವಿ ಕಿವುಡಾಗುವಷ್ಟು ಸಂಕಟಪಡುತ್ತೇನೆ, ಕಣ್ಣು ಕುರುಡಾಗುವಷ್ಟು ತತ್ತರಗೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಾನು ಕಂಡ ಈ ಭೀಕರ ದರ್ಶನದಿಂದ ನನಗೆ ಸೊಂಟ ಮುರಿದಂತಾಗಿದೆ. ಹೆರಿಗೆಯಂಥ ಬೇನೆಯುಂಟಾಗಿದೆ. ಕಿವಿ ಕಿತ್ತುಹೋಗುವಂತಿದೆ. ಕಣ್ಣು ಕರುಡಾಗುವಂತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಈ ದರ್ಶನದಿಂದ ನನ್ನ ಸೊಂಟದಲ್ಲಿ ನೋವು ತುಂಬಿದೆ, ಪ್ರಸವವೇದನೆಯಂತಿರುವ ವೇದನೆಯು ನನ್ನನ್ನು ಹಿಡಿದಿದೆ, ಕಿವಿ ಕಿವುಡಾಗುವಷ್ಟು ಯಾತನೆಪಡುತ್ತೇನೆ, ಕಣ್ಣು ಕುರುಡಾಗುವಷ್ಟು ತತ್ತರಗೊಂಡಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾನು ಆ ಭಯಂಕರ ಸಂಗತಿಗಳನ್ನು ನೋಡಿದ್ದರಿಂದ ಈಗ ಭಯಪೀಡಿತನಾಗಿದ್ದೇನೆ. ಭಯದಿಂದ ನನ್ನ ಹೊಟ್ಟೆಯು ನೋಯುತ್ತಿದೆ. ಆ ನೋವು ಪ್ರಸವವೇದನೆಯಂತಿದೆ. ನಾನು ಕೇಳುವ ವಿಷಯಗಳು ನನ್ನನ್ನು ಭಯಪಡಿಸಿವೆ; ನಾನು ನೋಡುವ ವಿಷಯಗಳು ನನ್ನನ್ನು ನಡುಗಿಸುತ್ತಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದ್ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ. ಕಿವಿ ಕಿವುಡಾಗುವಷ್ಟು ಸಂಕಟಪಡುತ್ತೇನೆ. ಕಣ್ಣು ಕುರುಡಾಗುವಷ್ಟು ಭ್ರಾಂತನಾಗಿದ್ದೇನೆ. ಅಧ್ಯಾಯವನ್ನು ನೋಡಿ |