ಯೆಶಾಯ 21:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಬಳಿಕ ಅವನು ಸಿಂಹದಂತೆ ಕೂಗಿ, “ಕರ್ತನೇ, ಪ್ರತಿ ದಿನವು ನಾನು ಕಾವಲಿನ ಬುರುಜಿನ ಮೇಲೆ ನಿಂತಿದ್ದೇನೆ, ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಬಳಿಕ ಪಹರೆಯವನು ಸಿಂಹಧ್ವನಿಯಿಂದ : “ಸ್ವಾಮಿ, ಹಗಲೆಲ್ಲಾ ಕಾವಲು ಗೋಪುರದಲ್ಲಿ ನಿಂತಿದ್ದೇನೆ. ರಾತ್ರಿಯಲ್ಲೂ ಕಾವಲುಗೈದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಬಳಿಕ ಅವನು ಸಿಂಹಧ್ವನಿಯಿಂದ - ಕರ್ತನೇ, ಹಗಲೆಲ್ಲಾ ಕೋವರದಲ್ಲಿ ನಿಂತಿದ್ದೇನೆ, ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಒಂದು ದಿವಸ ಆ ಕಾವಲುಗಾರನು, “ನನ್ನ ಒಡೆಯನೇ, ಪ್ರತಿ ದಿನವೂ ನಾನು ಹಗಲಿರುಳು ಕಾವಲಿನ ಬುರುಜಿನಲ್ಲಿ ನಿಂತುಕೊಂಡು ಕಾವಲು ಕಾಯುತ್ತಿದ್ದೇನೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಬಳಿಕ ಅವನು ಸಿಂಹದಂತೆ ಕೂಗಿ ಹೀಗೆ ಹೇಳಿದನು, “ನನ್ನ ಒಡೆಯನೇ, ನಾನು ಹಗಲೆಲ್ಲಾ ಕಾವಲಿನ ಬುರುಜಿನ ಮೇಲೆ ನಿಂತಿದ್ದೇನೆ. ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ. ಅಧ್ಯಾಯವನ್ನು ನೋಡಿ |
ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?