Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಎರಡು ಗೋಡೆಗಳ ನಡುವೆ ಹಳೆಯ ಕೊಳದ ನೀರಿಗಾಗಿ ತೊಟ್ಟಿಯನ್ನು ಮಾಡಿದ್ದೀರಿ; ಆದರೆ ಇದನ್ನೆಲ್ಲಾ ನಡೆಸಿದಾತನ ಕಡೆಗೆ ನೀವು ದೃಷ್ಟಿಯಿಡಲಿಲ್ಲ, ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಎರಡು ಗೋಡೆಗಳ ನಡುವೆ ಹಳೆಯ ಕೊಳದಿಂದ ಹರಿಯುವ ನೀರಿಗಾಗಿ ಜಲಾಶಯವನ್ನು ಕಟ್ಟಿದಿರಿ. ಆದರೆ ಪುರಾತನ ಕಾಲದಿಂದ ನಿಯೋಜಿಸಿ ಇದನ್ನೆಲ್ಲಾ ನಡೆಸಿದಾತನ ಕಡೆಗೆ ಗಮನ ಕೊಡದೆಹೋದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಎರಡು ಗೋಡೆಗಳ ನಡುವೆ ಹಳೆಯ ಕೊಳದ ನೀರಿಗಾಗಿ ತೊಟ್ಟಿಯನ್ನು ಮಾಡಿದಿರಿ; ಆದರೆ ಇದನ್ನೆಲ್ಲಾ ನಡಿಸಿದಾತನ ಕಡೆಗೆ ನೀವು ದೃಷ್ಟಿಯಿಡಲಿಲ್ಲ, ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಎರಡು ಗೋಡೆಗಳ ನಡುವೆ ಹಳೆಯ ಕೆರೆಯ ನೀರಿಗೋಸ್ಕರ ತೊಟ್ಟಿಯನ್ನು ಮಾಡಿದ್ದೀರಿ, ಕಾಲುವೆ ಮಾಡುತ್ತೀರಿ. ಆದರೆ ಅದನ್ನು ಮಾಡಿದವನನ್ನು ನೀವು ದೃಷ್ಟಿಸುವುದಿಲ್ಲ. ಇಲ್ಲವೆ ಪುರಾತನ ಕಾಲದಲ್ಲಿ ಸಂಕಲ್ಪಿಸಿದವರನ್ನು ನೀನು ಲಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:11
15 ತಿಳಿವುಗಳ ಹೋಲಿಕೆ  

ನಾನಂತು ಯೆಹೋವನನ್ನು ಎದುರುನೋಡುವೆನು. ನನ್ನ ರಕ್ಷಕನಾದ ದೇವರನ್ನು ನಿರೀಕ್ಷಿಸಿಕೊಂಡಿರುವೆ. ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು.


ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.


ಆ ದಿನದಲ್ಲಿ ಜನರು ತಮ್ಮ ಸೃಷ್ಟಿಕರ್ತನನ್ನೇ ದೃಷ್ಟಿಸುವರು ಮತ್ತು ಇಸ್ರಾಯೇಲಿನ ಸದಮಲಸ್ವಾಮಿಯ ಕಡೆಗೆ ಕಣ್ಣುಗಳನ್ನು ತಿರುಗಿಸುವರು.


ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಅದೇ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಗೋಡೆಯ ಬಳಿಯಲ್ಲಿರುವ ಬಾಗಿಲಿನಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋದನು.


ಯೆಹೂದದ ಅರಸನಾದ ಚಿದ್ಕೀಯನೂ ಮತ್ತು ಸಮಸ್ತ ಸೈನಿಕರೂ ಇವರನ್ನು ನೋಡಿ ಅದೇ ರಾತ್ರಿಯಲ್ಲಿ ಹೊರಟು ಅರಸನ ಉದ್ಯಾನದ ಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿನಿಂದ ಪಟ್ಟಣವನ್ನು ಬಿಟ್ಟು ಅರಾಬಾ ಎಂಬ ತಗ್ಗಾದ ಪ್ರದೇಶದ ಕಡೆಗೆ ಪಲಾಯನ ಮಾಡಿದರು.


ಇದನ್ನು ನೀನು ಕೇಳಲಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು. ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತು.


ಯಾಕೋಬಿನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು.


ಇವನ ನಂತರ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯಿಗಳ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವರು ಬೇತ್ಚೂರಿನ ಒಡೆಯನೂ, ಅಜ್ಬೂಕನ ಮಗನೂ ಆದ ನೆಹೆಮೀಯನು.


ಆದರೆ ಈಗ ನನ್ನ ಹೆಸರಿಗೋಸ್ಕರ ಯೆರೂಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನೂ ಆರಿಸಿಕೊಂಡಿದ್ದೇನೆ’ ಎಂದು ಹೇಳಿದನು.


ಹಿಜ್ಕೀಯನ ಉಳಿದ ಚರಿತ್ರೆಯೂ, ಅವನ ಪರಾಕ್ರಮಕೃತ್ಯಗಳೂ, ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರವೂ ಯೆಹೂದ ರಾಜಕಾಲವೃತ್ತಾಂತ ಪುಸ್ತಕ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಯೆರೂಸಲೇಮಿನ ಮನೆಗಳನ್ನು ಲೆಕ್ಕಿಸಿ, ಪೌಳಿಗೋಡೆಯನ್ನು ಭದ್ರಪಡಿಸುವುದಕ್ಕೆ ಮನೆಗಳನ್ನು ಒಡೆದು ಹಾಕಿಬಿಟ್ಟಿರಿ.


ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಕಡೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯಲ್ಲಿ ಆಹಾಜನನ್ನು ಎದುರುಗೊಂಡು ಅವನಿಗೆ ಈ ಪ್ರಕಾರ ಹೇಳಬೇಕು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು